Bangalore News:
ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1500 ಶಾಲಾ ಮಕ್ಕಳು ಭಾಗವಹಿಸಿದ್ದಾರೆ.ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದಾರೆ.
8 ಜನ ಡಿಸಿಪಿ, 17 ಎಸಿಪಿ, 44 ಇನ್ಸ್‌ಪೆಕ್ಟರ್ಸ್, 114 ಪಿಎಸ್ಐ, 58 ಎಎಸ್ಐ, 80 ಕಾನ್ಸ್‌ಟೇಬಲ್ಸ್, 30 ಜನ ಕ್ಯಾಮರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ, ಮೈದಾನದ ಸುತ್ತಮುತ್ತಲೂ 103 ಸಿಸಿಟಿವಿ ಕ್ಯಾಮರಾಗಳ ವ್ಯವಸ್ಥೆ ಕಲ್ಪಿಸಲಾಗಿದೆ.ವಾಹನ ಸಂಚಾರ ನಿರ್ಬಂಧ: ಇಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳನ್ನ ಬಳಸುವಂತೆ ಸಂಚಾರ ಪೊಲೀಸರ ಸೂಚಿಸಿದ್ದಾರೆ
76ನೇREPUBLICವ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಧ್ವಜಾರೋಹಣ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿ, ಬಳಿಕ ನಾಡಿನ ಜನತೆಗೆ REPUBLICವದ ಸಂದೇಶವನ್ನು ನೀಡಲಿದ್ದಾರೆ.ಪಂಥಸಂಚಲನದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದಾರೆ.