spot_img
spot_img

REPUBLIC DAY IN DELHI : ದೆಹಲಿಯ ಕರ್ತವ್ಯ ಪಥದಲ್ಲಿ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಶ್ರೀಮಂತಿಕೆ ಪ್ರದರ್ಶನ

spot_img
spot_img

Share post:

New Delhi News:

ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ REPUBLIC DAY ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ಭವ್ಯ ಪರಂಪರೆ, ಸಂಸ್ಕೃತಿ ಅನಾವರಣಗೊಳ್ಳಲಿದೆ.ದೇಶದೆಲ್ಲೆಡೆ 76ನೇREPUBLIC DAYದ ಸಂಭ್ರಮ ಮನೆ ಮಾಡಿದೆ. ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ. REPUBLIC DAY ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ಭವ್ಯ ಪರಂಪರೆ, ಸಂಸ್ಕೃತಿ ಅನಾವರಣಗೊಳ್ಳಲಿದೆ.ಈ ಬಾರಿಯ ಪರೇಡ್‌ನಲ್ಲಿ ಬ್ರಹ್ಮೋಸ್, ಪಿನಾಕ್ ಮತ್ತು ಆಕಾಶ್‌ನಂತಹ ಆಧುನಿಕ ರಕ್ಷಣಾ ವ್ಯವಸ್ಥೆಗಳು ಮತ್ತು ಸೇನೆಯ ಹೊಸ ಯುದ್ಧ ಕಣ್ಗಾವಲು ವ್ಯವಸ್ಥೆ ಸಂಜಯ್ ಅನ್ನು ಮೊದಲ ಬಾರಿಗೆ ಪ್ರಸ್ತುತಪಡಿಸಲಾಗುತ್ತದೆ.

ಇದಲ್ಲದೆ, ಡಿಆರ್‌ಡಿಒದ ಮೇಲ್ಮೈಯಿಂದ ಮೇಲ್ಮೈಗೆ ಕಾರ್ಯತಂತ್ರದ ಕ್ಷಿಪಣಿ ಪ್ರಳಯ್​ ಸಹ ಮೆರವಣಿಗೆಯ ಭಾಗವಾಗಲಿದೆ.ಬೆಳಗ್ಗೆ 9.30ಕ್ಕೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸುವುದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವಕ್ಕೆ ಚಾಲನೆ ದೊರೆಯಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆಇನ್ನು ಭಾರತೀಯ ವಾಯುಪಡೆಯ 40 ವಿಮಾನಗಳು ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ನ ಮೂರು ಡಾರ್ನಿಯರ್ ವಿಮಾನಗಳು ಫ್ಲೈಪಾಸ್ಟ್‌ನಲ್ಲಿ ಭಾಗವಹಿಸಲಿವೆ.ಟಿ-90 ಭೀಷ್ಮ ಟ್ಯಾಂಕ್, ಶರತ್ ಬಿಎಂಪಿ-2, ಶಾರ್ಟ್ ಸ್ಪ್ಯಾನ್ ಬ್ರಿಡ್ಜಿಂಗ್ ಸಿಸ್ಟಮ್, ನಾಗ್ ಕ್ಷಿಪಣಿ ವ್ಯವಸ್ಥೆ ಮತ್ತು ಮಲ್ಟಿ-ಬ್ಯಾರೆಲ್ ರಾಕೆಟ್ ಲಾಂಚರ್ ಅಗ್ನಿಬಾನ್‌ನಂತಹ ಉಪಕರಣಗಳು ಭಾರತದ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲಿವೆ.

ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ REPUBLIC DAY ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧ ಕ್ಷೇತ್ರಗಳ ಸುಮಾರು 10 ಸಾವಿರ ವಿಶೇಷ ಅತಿಥಿಗಳನ್ನು ಪರೇಡ್‌ ವೀಕ್ಷಣೆಗೆ ಆಹ್ವಾನಿಸಲಾಗಿದೆ. ವಿಶೇಷವೆಂದ್ರೆ ಕರ್ತವ್ಯ ಪಥದಲ್ಲಿ ನಡೆಯುವ ಸಾಂಪ್ರದಾಯಿಕ ಪರೇಡ್‌ನಲ್ಲಿ ಇಂಡೋನೇಷ್ಯಾದ ಸೇನಾ ತುಕಡಿಗಳೂ ಪಾಲ್ಗೊಳ್ಳಲಿವೆ.

Special alert in the capital: REPUBLIC DAY ಹಿನ್ನೆಲೆ ರಾಜಧಾನಿಯಾದ್ಯಂತ ಅರೆಸೇನಾ ಪಡೆ ಸಿಬ್ಬಂದಿ ಮತ್ತು 70 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಮಾನಿಕ ದಾಳಿಗಳನ್ನು ಪತ್ತೆಹಚ್ಚಲು ಮತ್ತು ಎದುರಿಸಲು ಡ್ರೋನ್ ನಿರೋಧಕ ವ್ಯವಸ್ಥೆ, ಪೆರೇಡ್ ಮಾರ್ಗದಲ್ಲಿ ಸ್ನೈಪರ್​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನವದೆಹಲಿ ಜಿಲ್ಲೆಯೊಂದರಲ್ಲೇ 15 ಸಾವಿರ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ ಆರು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಸುಮಾರು 2,500 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.REPUBLIC DAY ಹಿನ್ನೆಲೆ ರಾಜ್ಯ ಮತ್ತು ಕೇಂದ್ರ ಭದ್ರತಾ ಪಡೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಕರ್ತವ್ಯ ಪಥದಲ್ಲಿ ಸುಮಾರು 15 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪರೇಡ್ ನಡೆಯುವ ನವದೆಹಲಿ, ಮಧ್ಯ ದೆಹಲಿ ಮತ್ತು ಉತ್ತರ ದೆಹಲಿ ಜಿಲ್ಲೆಗಳಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ವಿವಿಧ ವಲಯಗಳನ್ನಾಗಿ ವಿಂಗಡಿಸಿದ್ದೇವೆ. ಡಿಸಿಪಿ ಅಥವಾ ಹೆಚ್ಚುವರಿ ಡಿಸಿಪಿ ಮಟ್ಟದ ಅಧಿಕಾರಿಗಳು ಪ್ರತಿಯೊಂದು ವಲಯದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.REPUBLIC DAY ಪರೇಡ್‌ ಮುಗಿಯುವವರೆಗೆ ಇತರ ರಾಜ್ಯಗಳ ಯಾವುದೇ ಭಾರೀ ಮತ್ತು ಲಘು ಸರಕು ವಾಹನಗಳು ದೆಹಲಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸಂಚಾರ ಪೊಲೀಸರ ಪ್ರಕಾರ, ಪರೇಡ್ ವಿಜಯ ಚೌಕ್, ಕರ್ತವ್ಯ ಪಥ, ಸಿ-ಹೆಕ್ಸಾಗನ್, ಸುಭಾಸ್ ಚಂದ್ರ ಬೋಸ್ ವೃತ್ತ, ತಿಲಕ್ ಮಾರ್ಗ, ಬಹದ್ದೂರ್ ಶಾ ಜಾಫರ್ ಮಾರ್ಗ, ನೇತಾಜಿ ಸುಭಾಸ್ ಮಾರ್ಗ ಮತ್ತು ಕೆಂಪು ಕೋಟೆಯ ಮೂಲಕ ಸಾಗಲಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್‌ನಲ್ಲಿ ವಿವಿಧ ಕಾರ್ಯಕ್ರಮವಿರುತ್ತದೆ.

ಇದನ್ನು ಓದಿರಿ : TRIPLE LIFE IMPRISONMENT : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಮಲತಂದೆ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...