spot_img
spot_img

ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ

spot_img
spot_img

Share post:

ಬೆಂಗಳೂರು: “ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ” ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ.
ಈ ಸಂಬಂಧ ಮಾಧ್ಯಮ ಸ್ಪಷ್ಟನೆ ಹೊರಡಿಸಿರುವ ಸಿಎಂ ಕಚೇರಿ, “ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ” ಎಂದು ತಿಳಿಸಿದೆ.
“ಕಾಂಗ್ರೆಸ್ ಸರ್ಕಾರ ಒಂದು ಕೋಟಿ ರೂ.ವರೆಗಿನ ಕಾಮಗಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸುತ್ತಿರುವ ಬಗ್ಗೆ ವರದಿಯಾಗಿವೆ. ಈ ಸಂಬಂಧ ಕಾಂಗ್ರೆಸ್​ನ ಮುಸ್ಲಿಂ ಶಾಸಕರ ನಿಯೋಗ ಸಿಎಂರನ್ನು ಭೇಟಿಯಾಗಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ಕಲ್ಪಿಸುವಂತೆ ಮನವಿ ಮಾಡಿದ್ದರು. ಆಗಸ್ಟ್ 24ರಂದು ಕಾಂಗ್ರೆಸ್ ಮುಸ್ಲಿಂ ನಾಯಕರು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಕಡತವನ್ನು ಪರಿಶೀಲಿಸಿ ಮಂಡಿಸಿ ಆರ್ಥಿಕ ಇಲಾಖೆಗೆ ಸೂಚಿಸಿದ್ದರು. ಆರ್ಥಿಕ ಇಲಾಖೆಯೂ ಈ ಸಂಬಂಧ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ.”
ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್​. ಎ. ಹ್ಯಾರಿಸ್, ರಿಜ್ವಾನ್ ಅರ್ಷದ್​, ಆಸೀಪ್ ಸೇಠ್​, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನು ಅವರು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು. ಕಾಮಗಾರಿಯಲ್ಲಿ 4% ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದರು.
ಅಲ್ಪಸಂಖ್ಯಾತರ ಪ್ರವರ್ಗ 2ಬಿಗೆ 4% ಮೀಸಲಾತಿ ನೀಡುವಂತೆ ಮನವಿ ಮಾಡಿದ್ದರು. ಈಗಾಗಾಲೇ ಎಸ್​ಸಿ, ಎಸ್​ಟಿಗೆ ಗುತ್ತಿಗೆಯಲ್ಲಿ 1 ಕೋಟಿ ರೂ.ವರೆಗೆ ಮೀಸಲಾತಿ ನೀಡಲಾಗುತ್ತಿದೆ. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ 24% ಗುತ್ತಿಗೆ ಮೀಸಲಾತಿ ನೀಡಲಾಗಿದೆ. OBC ಸಮುದಾಯಕ್ಕೆ 4% ಗುತ್ತಿಗೆ ಮೀಸಲಾತಿ ನೀಡಲಾಗಿದೆ. 2A ಅಡಿ 15% ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ 43% ಮೀಸಲಾತಿ ನೀಡಲಾಗುತ್ತಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡಲು ಚಿಂತನೆ ಮಾಡಲಾಗಿದೆ. ಆ ಮೂಲಕ ಕಾಮಗಾರಿಗಳಲ್ಲಿ ಮೀಸಲಾತಿ 47%ಗೆ ಏರಿಕೆಯಾಗಲಿದೆ. ಈ ಸಂಬಂಧ ಕೆಟಿಪಿಪಿ ಕಾಯ್ದೆಯ 1999ರ 6ನೇ ಪ್ರಕರಣಕ್ಕೆ ತಿದ್ದುಪಡಿ ಮಾಡಲಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಟಿಪ್ಪಣಿಯೂ ಹರಿದಾಡುತ್ತಿದೆ.

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...