spot_img
spot_img

ವಿದ್ಯಾರ್ಥಿನಿಯರ 5 ಸಾವಿರ ನಗ್ನ ವಿಡಿಯೋಗಳನ್ನ ಇಟ್ಟಿಕೊಂಡಿದ್ದ ವಸತಿ ಶಾಲೆಯ ಶಿಕ್ಷಕ ಲಾಕ್…!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೋಲಾರ : ಮೊರಾರ್ಜಿ ದೇಸಾಯಿ (Morarji Desai School) ವಸತಿ ಶಾಲೆ ಶಿಕ್ಷಕನ‌ ಮೊಬೈಲ್‌ನಲ್ಲಿ ಬರೋಬ್ಬರಿ ಐದು ಸಾವಿರ ನಗ್ನ ವಿಡಿಯೊ ಪತ್ತೆಯಾಗಿದೆ. ವಸತಿ ಶಾಲೆಯ ಹೆಣ್ಣು ಮಕ್ಕಳ ಫೋಟೊ ಹಾಗೂ ವಿಡಿಯೋ ಪತ್ತೆಯಾಗಿದ್ದು, ಕರ್ನಾಟಕ ಹೈಕೋರ್ಟ್‌ ಆಘಾತ ವ್ಯಕ್ತಪಡಿಸಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಪೋಕ್ಸೋ ಪ್ರಕರಣದ ಎಫ್.ಐ.ಆರ್. ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾವಾಗಿದೆ.

ಇದನ್ನೂ ಓದಿ : ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಾಕಾ ಪಡುಕೋಣೆ..! ಮಗು ಹೆಣ್ಣಾ..? ಗಂಡಾ..?

ರಾಜ್ಯಾದ್ಯಂತ ಹಾಸ್ಟೆಲ್‌ ಕರ್ಮ ಕಾಂಡ ಪ್ರಕರಣ ಸದ್ದು ಮಾಡಿತ್ತು. ವಸತಿ ಶಾಲೆಯ ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಯುತ್ತಿತ್ತು. ತನಿಖೆ ವೇಳೆ ಶಿಕ್ಷಕ ಮುನಿಯಪ್ಪನ 4 ಮೊಬೈಲ್ ಸೀಜ್‌ ಮಾಡಿದಾಗ ನಗ್ನ ವಿಡಿಯೋ‌, ಫೋಟೋ ಪತ್ತೆಯಾಗಿದೆ.

ಇದನ್ನೂ ಓದಿ : ಗ್ರಾಮೀಣ ಭಾಗದಲ್ಲಿ ಅರಳಿದ ಪ್ರತಿಭೆ : ಸಮಯಾ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ..!

ಈ ಹಿನ್ನೆಲೆಯಲ್ಲಿ ಶಿಕ್ಷಕ ಮುನಿಯಪ್ಪ ಮೇಲೆ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ‌ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು. 2023 ಡಿಸೆಂಬರ್ 17 ರಂದು ನಡೆದಿದ್ದ ಪ್ರಕರಣದಲ್ಲಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕನಾಗಿರುವ ಮುನಿಯಪ್ಪ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು.

ಏನಿದು ಘಟನೆ?
ಕೋಲಾರದ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai Residential School) ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ (Toilet Pit cleaning) ಪ್ರಕರಣ ಹೊರಬಂದಿತ್ತು. ಇದರ ಜತೆಗೆ ಶಾಲೆಯ ಒಂದೊಂದೇ ಹುಳುಕುಗಳು ಗೊತ್ತಾಗತೊಡಗಿತ್ತು. ಶಾಲೆಯ ಶಿಕ್ಷಕರ (School Teacher) ವಿರುದ್ಧ ಮಕ್ಕಳು ಸಿಡಿದೆದ್ದಿದ್ದರು. ವೈಯರ್‌ನಿಂದ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು. ರಾತ್ರಿ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೂ ಶಿಕ್ಷೆ ನೀಡಿದ್ದಾರೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇನ್ನು ತಾವು ಬಟ್ಟೆ ಬದಲಾಯಿಸುವಾಗ ಫೋಟೊ ಹಾಗೂ ವಿಡಿಯೊವನ್ನು (Photo and video of changing clothes) ಸೆರೆ ಹಿಡಿಯಲಾಗಿದೆ ಎಂದು ಹೆಣ್ಣು ಮಕ್ಕಳು ಸಮಸ್ಯೆಯ ಗಂಭೀರತೆಯನ್ನು ಬಿಚ್ಚಿಟ್ಟಿದ್ದರು.

ಇದನ್ನೂ ಓದಿ : ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರಿಂದ ಗಣೇಶ ಮೂರ್ತಿ ಪ್ರತಿಷ್ಠಾಪಣೆ..!

ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಪೋಷಕರು ಬೇಸರ ವ್ಯಕ್ತಪಡಿಸಿ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದರು. ಈ ಕುರಿತ ವಿಡಿಯೊ ಹಾಗೂ ಫೊಟೊ ಎಲ್ಲೆಡೆ ಹರಿದಾಡಿ ವಿರೋಧ ವ್ಯಕ್ತಗೊಂಡಿತ್ತು. ದೂರು ನೀಡಿದ ಬಳಿಕ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಲಾಗಿತ್ತು.

WhatsApp Group Join Now
Telegram Group Join Now
Instagram Account Follow Now
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...