spot_img
spot_img

REVISION OF ACCUMULATED PAY – ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಗಿಫ್ಟ್

spot_img
spot_img

Share post:

Bangalore News:

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ, ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಂಪುಟ ದರ್ಜೆ ಸಚಿವರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳ, ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಗಳ ಆಪ್ತ ಶಾಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಂಚಿತ ವೇತನ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

7ನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅದರಂತೆ ಗುತ್ತಿಗೆ ಆಧಾರದ ಸಿಬ್ಬಂದಿಯ ಪರಿಷ್ಕೃತ ಸಂಚಿತ ವೇತನ ನ.1 ರಿಂದ ಜಾರಿಗೆ ಬಂದಿದೆ.ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ ಸೇರಿದಂತೆ ವಿವಿಧ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರದ ಸಿಬ್ಬಂದಿಯ ಸಂಚಿತ ವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Not applicable to outsourced staff:

ಪರಿಷ್ಕೃತ ವೇತನ ಶ್ರೇಣಿಯ ವೇತನ ಹಂತವನ್ನು ಪರಿಷ್ಕರಿಸಿದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂಬ ಷರತ್ತು ವಿಧಿಸಲಾಗಿದೆ.

How much revision for whom:

ವಿಶೇಷ ಅಧಿಕಾರಿ/ವಿಶೇಷ ಕರ್ತವ್ಯಾಧಿಕಾರಿಗಳಿಗೆ 69,250 ರೂ., ಸಹಾಯಕರ ಹುದ್ದೆ ಮತ್ತು ಶೀಘ್ರ ಲಿಪಿಗಾರರಿಗೆ 49,050 ರೂ., ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ, ಬೆರಳಚ್ಚುಗಾರರು ಹಾಗೂ ವಾಹನ ಚಾಲಕರಿಗೆ 34,100 ರೂ. ಹಾಗೂ ಡಿ ದರ್ಜೆ ನೌಕರರಿಗೆ 27 ಸಾವಿರ ರೂ.ವರೆಗೆ ವೇತನ ಪರಿಷ್ಕರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

 

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...