Rishabh Shetty News:
ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರದ ನಾಯಕ ನಟ RISHAB SHETTY ಅವರ ಫಸ್ಟ್ ಲುಕ್ ಅನಾವರಣಗೊಳ್ಳಲಿದೆ.
‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಛತ್ರಪತಿ ಶಿವಾಜಿ ಮಹಾರಾಜರ ಜೀವನವನ್ನು ಆಧರಿಸಿದ ಚಿತ್ರವಾಗಿದ್ದು, ಡಿವೈನ್ ಸ್ಟಾರ್ RISHAB SHETTY ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಟಾರ್ ಡೈರೆಕ್ಟರ್ ಸಂದೀಪ್ ಸಿಂಗ್ ಈ ಚಿತ್ರದ ಸಾರಥ್ಯ ವಹಿಸಿದ್ದಾರೆ.
ಛತ್ರಪತಿ ಶಿವಾಜಿ ಅವರ ಪುತ್ರ ಸಂಭಾಜಿಯವರ ಜೀವನಾಧಾರಿತ ‘ಛಾವಾ’ ಚಿತ್ರ ಪ್ರಸ್ತುತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆ, ಮುಂಬರುವ ಛತ್ರಪತಿ ಶಿವಾಜಿ ಮಹಾರಾಜರ ಜೀವನಾಧಾರಿತ ಚಿತ್ರದ ಮೇಲೆ ಸದ್ಯ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಈ ನಿಟ್ಟಿನಲ್ಲಿ, ನಿರ್ದೇಶಕರು ಚಿತ್ರದ ಅಪ್ಡೇಟ್ಸ್ ನೀಡಿದ್ದಾರೆ. ಹೌದು, ತಾವು ಕೆಲಸ ಮಾಡಲಿರುವ ತಂಡವನ್ನು ಘೋಷಿಸಿದ್ದಾರೆ.
ಹಿಸ್ಟಾರಿಕಲ್ ಡ್ರಾಮಾವನ್ನು ಸಂದೀಪ್ ಸಿಂಗ್ ನಿರ್ದೇಶಿಸಲಿದ್ದಾರೆ. ‘ಇದು ಕೇವಲ ಸಿನಿಮಾವಲ್ಲ. ಅಸಮಾನತೆಯ ವಿರುದ್ಧ ಹೋರಾಡಿ ಮೊಘಲ್ ಸಾಮ್ರಾಜ್ಯಕ್ಕೆ ಸವಾಲೆಸೆದ ಯೋಧನ ಕಥೆ’ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರ 2027ರ ಜನವರಿ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾ ಏಳು ಭಾಷೆಗಳಲ್ಲಿ (ಕನ್ನಡ, ತೆಲುಗು, ಹಿಂದಿ, ತಮಿಳು, ಮರಾಠಿ, ಮಲಯಾಳಂ ಮತ್ತು ಬಂಗಾಳಿ) ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ಸಹ ತಿಳಿಸಿದರು. ಇತ್ತೀಚೆಗೆ ತಮ್ಮ ಈ ಚಿತ್ರದಲ್ಲಿ ಕೆಲಸ ಮಾಡುತ್ತಿರುವವರ ಹೆಸರನ್ನು ಘೋಷಿಸಿದರು.
ಈ ಪ್ರಾಜೆಕ್ಟ್ನಲ್ಲಿ ಛಾಯಾಗ್ರಹಣ, ಸಂಕಲನ ಮತ್ತು ಸಂಗೀತ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಪರಿಣಿತರೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಚಿತ್ರದ ನಾಯಕ ನಟ RISHAB SHETTY ಅವರ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.
Music by Prasoon Joshi, Pritam:
ಇನ್ನೂ ಸಾಕಷ್ಟು ಜನಪ್ರಿಯತೆ ಸಂಪಾದಿಸಿರುವ RISHAB SHETTY ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್ ಕೆಲಸದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇದು 2022ರ ಬ್ಲಾಕ್ಬಸ್ಟರ್ ‘ಕಾಂತಾರ’ ಚಿತ್ರದ ಮುಂದುವರಿದ ಭಾಗ. ಪ್ರೀಕ್ವೆಲ್ ಇದೇ ಸಾಲಿನ ಅಕ್ಟೋಬರ್ 2ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಚಿತ್ರದ ಜೊತೆಗೆ ಅವರು ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ.
‘ಕಾಂತಾರ’ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಕಂಡಿದೆ. ಅತ್ಯುತ್ತಮ ಚಲನಚಿತ್ರಕ್ಕಾಗಿ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿ ಮತ್ತು RISHAB SHETTY ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಕಾಂತಾರ ಮೂಲಕ ಭಾರತದಾದ್ಯಂತ ಸದ್ದು ಮಾಡಿರುವ ಡಿವೈನ್ ಸ್ಟಾರ್ನ ಮುಂದಿನ ಸಿನಿಮಾಗಳ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.
ಇನ್ನೂ ಸಾಕಷ್ಟು ಜನಪ್ರಿಯತೆ ಸಂಪಾದಿಸಿರುವ RISHAB SHETTY ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್ ಕೆಲಸದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇದು 2022ರ ಬ್ಲಾಕ್ಬಸ್ಟರ್ ‘ಕಾಂತಾರ’ ಚಿತ್ರದ ಮುಂದುವರಿದ ಭಾಗ. ಪ್ರೀಕ್ವೆಲ್ ಇದೇ ಸಾಲಿನ ಅಕ್ಟೋಬರ್ 2ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.
ಈ ಚಿತ್ರದ ಜೊತೆಗೆ ಅವರು ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ‘ಕಾಂತಾರ’ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಕಂಡಿದೆ. ಅತ್ಯುತ್ತಮ ಚಲನಚಿತ್ರಕ್ಕಾಗಿ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿ ಮತ್ತು RISHAB SHETTY ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಕಾಂತಾರ ಮೂಲಕ ಭಾರತದಾದ್ಯಂತ ಸದ್ದು ಮಾಡಿರುವ ಡಿವೈನ್ ಸ್ಟಾರ್ನ ಮುಂದಿನ ಸಿನಿಮಾಗಳ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.
ಇದನ್ನು ಓದಿರಿ : DARSHAN : ದರ್ಶನ್ ಅಭಿಮಾನಿಗಳ ಪುಣ್ಯಕಾರ್ಯ