Chikmagalur news:
ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್ ಪುರ ತಾಲೂಕಿನ ಭದ್ರಾ ನದಿ ತಟದಲ್ಲಿರುವ ರಂಭಾಪುರಿ ಮಠಕ್ಕೆ Bollywood ನಟಿ Shilpa Shetty ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿ Robotic ಆನೆಯನ್ನ ಉಡುಗೊರೆಯಾಗಿ ನೀಡಿದ್ದಾರೆ.
ನೋಡಲು ದೈತ್ಯ ಗಾತ್ರದಾಗಿದ್ದು, ಸದಾ ಆಕ್ಟೀವ್ ಆಗಿರುವ ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ಇಲ್ಲಿ ನಿಂತುಕೊಂಡಿದೆ ಎಂಬಂತೆ ಭಾಸವಾಗುತ್ತದೆ. ಹೌದು ಇದು Robotic ಆನೆಯಾಗಿದ್ದು, ನೋಡುವುದಕ್ಕೆ ಯಥಾವತ್ತಾಗಿ ನೈಜ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲುಗಾಡಿಸುತ್ತಿರುತ್ತದೆ.
ಇದೀಗ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ Robotic ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ.ದೇಶದ ಪಂಚಪೀಠಗಳಲ್ಲೇ ರಂಭಾಪುರಿ ಮಠವು ಮೊದಲ ಪೀಠವಾಗಿದೆ. ಈ ಮಠದ ಭಕ್ತರಾಗಿರುವ Bollywood ನಟಿ Shilpa Shetty ದಂಪತಿ ಆಗಿಂದಾಗ್ಗೆ ಮಠಕ್ಕೆ ಭೇಟಿ ನೀಡುತ್ತಿರುತ್ತಾರೆ.
ಈ ಕೊಡುಗೆಯಿಂದ ಮಠದ ಭಕ್ತರು ಸಂತೋಷಗೊಂಡಿದ್ದು, ನೂರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.ನೈಸರ್ಗಿಕ ಆನೆಯನ್ನು ನೀಡುವುದಕ್ಕೆ ಹಲವು ನಿಯಮಗಳು ಅಡ್ಡಿ ಬರುವ ಹಿನ್ನೆಲೆ ಇದೀಗ ರೋಬೋಟಿಕ್ ಆನೆ ದಾನ ನೀಡುವವರ ಸಂಖ್ಯೆಯೂ ಹೆಚ್ಚಾಗಿದೆ.