spot_img
spot_img

ROHIT SHARMA : ಆಟದ ಬಗ್ಗೆ ನನಗೆ ಸ್ಪಷ್ಟತೆ ಇದೆ, ಪ್ರತೀ ಬಾರಿಯೂ ಹೆಚ್ಚು ರನ್ ಗಳಿಸುವುದು ಸುಲಭದ ಮಾತಲ್ಲ

spot_img
spot_img

Share post:

Rohit Sharma News:

ಇಂಗ್ಲೆಂಡ್​ ವಿರುದ್ಧದ ಎರಡನೇ ಪಂದ್ಯದಲ್ಲಿ ಶತಕ ಸಿಡಿಸಿದ ROHIT SHARMA  ಹಲವು ದಾಖಲೆ ಬರೆದರು. ಇತ್ತೀಚೆಗೆ ಕಳಪೆ ಫಾರ್ಮ್​ನಿಂದ ಟೀಮ್ ಇಂಡಿಯಾ ನಾಯಕ ROHIT SHARMA ತೀವ್ರ ಟೀಕೆಗೆ ಗುರಿಯಾಗಿದ್ದರು. ಆದರೆ ಭಾನುವಾರ ಕಟಕ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್​ ಮೂಲಕ ವೇಗದ ಶತಕ ಸಿಡಿಸಿ ಟೀಕಾಕಾರರಿಗೆ ಬ್ಯಾಟ್​ನಿಂದಲೇ ಉತ್ತರಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸಿಡಿಸಿರುವ ಶತಕದಿಂದ ಯಾವುದೂ ಬದಲಾಗುವುದಿಲ್ಲ. ನನ್ನ ಕೆಲಸದಲ್ಲಿ ಇದು ಒಂದು ದಿನ ಅಷ್ಟೇ. ನಾನು ಬಹಳ ಸಮಯದಿಂದ ಕ್ರಿಕೆಟ್ ಆಡುತ್ತಿದ್ದೇನೆ. ಹೇಗೆ ಆಡಬೇಕೆಂಬ ಬಗ್ಗೆ ನನಗೆ ಸ್ಪಷ್ಟತೆ ಇದೆ. ಒಂದು ಅಥವಾ ಎರಡು ಇನ್ನಿಂಗ್ಸ್‌ಗಳಿಂದ ನನ್ನ ಮನಸ್ಸು ಬದಲಾಗುವುದಿಲ್ಲ.

ಮೈದಾನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಮುಖ್ಯ ಗುರಿ. ನಾನು ಪ್ರತೀ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಬೆಸ್ಟ್​ ಅನ್ನು ನೀಡಲು ಪ್ರಯತ್ನಿಸುತ್ತೇನೆ. ಕೆಲವೊಮ್ಮೆ ಅದು ಸಾಧ್ಯವಾಗುತ್ತದೆ. ಮತ್ತೆ ಕೆಲವು ಬಾರಿ ಸಾಧ್ಯವಾಗುವುದಿಲ್ಲ. ಪ್ರತೀ ಬಾರಿಯೂ ಹೆಚ್ಚು ರನ್ ಗಳಿಸುವುದು ಸುಲಭದ ಮಾತಲ್ಲ ಎಂದರು.

ಅಲ್ಲದೇ, ಅದ್ಭುತ ಬ್ಯಾಟಿಂಗ್​ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿಟ್​ಮ್ಯಾನ್​ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಬಳಿಕ ತಮ್ಮ ವಿರುದ್ಧ ಕೇಳಿ ಬಂದ ಟೀಕೆ ಮತ್ತು ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿದರು.

Sachin overtakes Rohit:

ಭಾರತ ಪರ ಆರಂಭಿಕನಾಗಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ROHIT SHARMA ಎರಡನೇ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ರೋಹಿತ್ (15,404 ರನ್) ಸಚಿನ್ (15,335 ರನ್) ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ತಲುಪಿದ್ದಾರೆ.

ಈ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ (15,758) ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 7 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದರೊಂದಿಗೆ, ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು (338) ಹೊಡೆದ ಎರಡನೇ ಬ್ಯಾಟರ್ ಎನಿಸಿಕೊಂಡರು.

ಈ ಅನುಕ್ರಮದಲ್ಲಿ ಕ್ರಿಸ್ ಗೇಲ್ (331) ಅವರನ್ನು ಹಿಂದಿಕ್ಕಿದರು. ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ 351 ಸಿಕ್ಸರ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

Records written by Rohit in the 2nd match:

ROHIT SHARMA ಅವರು ರಾಹುಲ್ ದ್ರಾವಿಡ್ (10,889 ರನ್, 318 ಇನ್ನಿಂಗ್ಸ್) ಹಿಂದಿಕ್ಕಿ ಹತ್ತನೇ ಸ್ಥಾನಕ್ಕೆ ತಲುಪಿದರು. ROHIT SHARMA ಪ್ರಸ್ತುತ ಏಕದಿನ ಸ್ವರೂಪದಲ್ಲಿ 10,964 ರನ್ (264 ಇನ್ನಿಂಗ್ಸ್) ಗಳಿಸಿದ್ದಾರೆ.

ಇಂಗ್ಲೆಂಡ್​ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಬಾರಿಸಿ ಹಲವಾರು ದಾಖಲೆಗಳನ್ನು ಮುರಿದರು. ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಟಾಪ್ 10 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನು ಓದಿರಿ : Freestyle Chess Grand Slam: D Gukesh Resigns In 18 Moves Against Caruana;

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...