spot_img
spot_img

ROHIT SHARMA : ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ಗೆ ಸಚಿನ್, ದ್ರಾವಿಡ್, ಗೇಲ್ ದಾಖಲೆ ಉಡೀಸ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Rohit Sharma:

ಕಟಕ್​​ನ ಬಾರಾಬತಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ್ದ ಇಂಗ್ಲೆಂಡ್​ ಭರ್ಜರಿ ಪ್ರದರ್ಶನ ನೀಡಿ 304 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿರುವ ಭಾರತದ ಪರ ROHIT SHARMA ವೇಗದ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್​​ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ROHIT SHARMA ಲಯಕ್ಕೆ ಮರಳಿದ್ದು ಸ್ಫೋಟಕ ಬ್ಯಾಟಿಂಗ್​ ಮೂಲಕ ಆಂಗ್ಲ ಪಡೆಯ ಬೌಲರ್​​ಗಳನ್ನು ಚೆಂಡಾಡಿದ್ದಾರೆ.

Rohit Raudravatar:

ಈ ಪಂದ್ಯದಲ್ಲಿ 7 ಸಿಕ್ಸರ್​ ಸಿಡಿಸಿರುವ ROHIT SHARMA ಏಕದಿನ ಸ್ವರೂಪದಲ್ಲಿ ಅತೀ ಹೆಚ್ಚು ಸಿಕ್ಸರ್​ ಸಿಡಿಸಿದ ಎರಡನೇ ಬ್ಯಾಟರ್​ ಆಗಿ ಕ್ರಿಸ್​ ಗೇಲ್​ ದಾಖಲೆಯನ್ನು ಮುರಿದಿದ್ದಾರೆ. ಸದ್ಯ ROHIT SHARMA 337 ಸಿಕ್ಸರ್​ ಸಿಡಿಸಿದ್ದಾರೆ. ಗೇಲ್​ ಏಕದಿನದಲ್ಲಿ ಒಟ್ಟು 331 ಸಿಕ್ಸರ್​ ಬಾರಿಸಿದ್ದರು. ಆದರೆ ಈ ಪಟ್ಟಿಯಲ್ಲಿ ಪಾಕಿಸ್ತಾನದ ಶಾಹೀದ್​ ಆಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ ಅವರು 351 ಸಿಕ್ಸರ್​ ಸಿಡಿಸಿದ್ದಾರೆ.

ಈ ಪಂದ್ಯದ ಮೂಲಕ ಮತ್ತೆ ಲಯಕ್ಕೆ ಮರಳಿರುವ ಹಿಟ್​ಮ್ಯಾನ್​ ಸ್ಫೋಟಕ ಬ್ಯಾಟಿಂಗ್​ ಮೂಲಕ ಆಂಗ್ಲರನ್ನು ಕಾಡಿದ್ದಾರೆ. ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಹಿಟ್​ಮ್ಯಾನ್, ವೇಗವಾಗಿ ಶತಕವನ್ನೂ ಪೂರ್ಣಗಳಿಸಿದ್ದಾರೆ.

ಇಂಗ್ಲೆಂಡ್​ ಬೌಲರ್​ಗಳನ್ನು ಬೆಂಡೆತ್ತಿರುವ ರೋಹಿತ್ 76​ ಎಸೆತಗಳಲ್ಲಿ 7 ಸಿಕ್ಸರ್​ ಮತ್ತು 10 ಬೌಂಡರಿ ಸಮೇತ ಶತಕ ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳನ್ನು ಮುರಿದಿದ್ದಾರೆ.

Sachin Tendulkar Record Udies:

ಇದೇ ಪಂದ್ಯದಲ್ಲಿ ಹಿಟ್​​ಮ್ಯಾನ್​, ಸಚಿನ್​ ತೆಂಡೂಲ್ಕರ್​ ದಾಖಲೆಯನ್ನೂ ಮುರಿದಿದ್ದಾರೆ. ಆರಂಭಿಕ ಬ್ಯಾಟರ್​ ಆಗಿ ಎಲ್ಲಾ ಸ್ವರೂಪದ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಎರಡನೇ ಬ್ಯಾಟರ್​ ಆಗಿ ದಾಖಲೆ ಬರೆದಿದ್ದಾರೆ.

ROHIT SHARMA 343 ಪಂದ್ಯಗಳನ್ನು ಆಡಿ 45.22 ಸರಾಸರಿಯಲ್ಲಿ 15,402 ರನ್ ಗಳಿಸಿ, ಸಚಿನ್ ಅವರ ದಾಖಲೆ ಮುರಿದಿದ್ದಾರೆ. ತೆಂಡೂಲ್ಕರ್​ 346 ಪಂದ್ಯಗಳಲ್ಲಿ 48.07 ಸರಾಸರಿಯಲ್ಲಿ 15,335 ರನ್ ಗಳಿಸಿದ್ದರು.

Hitman overtaken by Dravid:

ಸದ್ಯ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಕ್ರಮವಾಗಿ ಮೂರು ಸ್ಥಾನಗಳಲ್ಲಿದ್ದು ಅವರ ನಂತರ ಹಿಟ್​ಮ್ಯಾನ್​ ಕಾಣಿಸಿಕೊಂಡಿದ್ದಾರೆ. ಎರಡನೇ ಪಂದ್ಯಕ್ಕೂ ಮುನ್ನ ರೋಹಿತ್ ಏಕದಿನ ಪಂದ್ಯಗಳಲ್ಲಿ 10,868 ರನ್ ಗಳಿಸಿದ್ದರು.

ಪಂದ್ಯದಲ್ಲಿ 22 ರನ್ ಕಲೆ ಹಾಕುತ್ತಿದ್ದಂತೆ ದ್ರಾವಿಡ್​ ಅವರನ್ನು ಹಿಂದಿಕ್ಕಿದರು. ರೋಹಿತ್ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರು. ಇದೀಗ ಏಕದಿನ ಪಂದ್ಯಗಳಲ್ಲಿ ಭಾರತದ ಪರ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್​ ಎನಿಸಿಕೊಂಡರು.

Batsmen who have scored most runs in ODI cricket

  • 18426 – ಸಚಿನ್ ತೆಂಡೂಲ್ಕರ್
  • 13906 – ವಿರಾಟ್ ಕೊಹ್ಲಿ
  • 11363 – ಸೌರವ್ ಗಂಗೂಲಿ
  • 10,987 – ರೋಹಿತ್ ಶರ್ಮಾ
  • 10889 – ರಾಹುಲ್ ದ್ರಾವಿಡ್

ಇದನ್ನು ಓದಿರಿ : World Pulses Day 2025: India’s Plan for Food Security and Better Health

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...