New Delhi News:
RS 2 CR TERM LOAN FOR WOMEN 2025-26ರ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ, “ಎಸ್‌ಎಂಇ ಮತ್ತು ದೊಡ್ಡ ಕೈಗಾರಿಕೆಗಳಿಗೆ ಉತ್ಪಾದನಾ ಮಿಷನ್ ಸ್ಥಾಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದಲ್ಲದೇ, ಕಾರ್ಮಿಕ – ತೀವ್ರ ವಲಯಗಳ ಉತ್ಪಾದಕತೆ ಹೆಚ್ಚಿಸಲು ಸರ್ಕಾರವು ಸೌಲಭ್ಯ ಕ್ರಮಗಳನ್ನು ಕೈಗೊಳ್ಳಲಿದೆ.
ಕ್ರೆಡಿಟ್ ಗ್ಯಾರಂಟಿ ಕವರ್ ಆಗಿ 20 ಕೋಟಿ ರೂ.ಗಳಿಗೆ ದ್ವಿಗುಣಗೊಳಿಸಲಾಗುತ್ತದೆ. ಮೊದಲ ಬಾರಿಗೆ ಸಾಲಕ್ಕೆ ಅರ್ಜಿ ಸಲ್ಲಿಸುವ 5 ಲಕ್ಷ ಮಹಿಳೆಯರು ಹಾಗೂ SC , ST ಉದ್ಯಮಿಗಳಿಗೆ ಸರ್ಕಾರವು RS 2 CR TERM LOAN FOR WOMEN ಲೋನ್ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಗ್ಯಾರಂಟಿ ಶುಲ್ಕವನ್ನು ಶೇಕಡಾ 1 ಕ್ಕೆ ಇಳಿಕೆ ಮಾಡುವುದಾಗಿಯೂ ಇದೇ ವೇಳೆ ಅವರು ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆಯ ಸಂಸ್ಥೆಯನ್ನು ಸ್ಥಾಪಿಸಲಾಗುವುದು” ಎಂದು ಅವರು ಹೇಳಿದ್ದಾರೆ. 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ ಹಣಕಾಸು ಸಚಿವೆ ಮಹಿಳೆಯರು, SC ಮತ್ತು ST ಉದ್ಯಮಿಗಳಿಗೆ ಸರ್ಕಾರ 2 ಕೋಟಿ ರೂ.ಗಳ ಟರ್ಮ್ ಲೋನ್ ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನು ಓದಿರಿ : INCOME TAX SLABS : 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ