spot_img
spot_img

ಸಂಭಾಲ್​ ಹಿಂಸಾಚಾರ ; ಇಂಟರ್​ನೆಟ್,​ ಶಾಲಾ-ಕಾಲೇಜ್​ ಬಂದ್​

spot_img
spot_img

Share post:

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮಸೀದಿಯ ಜಾಗದಲ್ಲಿ ಹಿಂದೂ ದೇವಾಲಯವಿತ್ತು. ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದು ವಿವಾದದ ಕೇಂದ್ರಬಿಂದುವಾಗಿದೆ.

ಉತ್ತರ ಪ್ರದೇಶದ ಸಂಭಾಲ್​ನಲ್ಲಿರುವ ಮಸೀದಿ ಕಟ್ಟಡದ ಸರ್ವೇ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂಟರ್​ನೆಟ್​ ಸ್ಥಗಿತ ಸೇರಿದಂತೆ ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನವೆಂಬರ್​ 30ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ.

ಅಧಿಕಾರಿಗಳ ಅನುಮತಿಯಿಲ್ಲದೇ ಯಾರೂ ಕೂಡಾ ಒಜಿಲ್ಲೆಯ ಗಡಿ ದಾಟಿ ಪ್ರವೇಶ ಮಾಡುವಂತಿಲ್ಲ. ನಗರಕ್ಕೆ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಕೂಡ ಭೇಟಿ ನೀಡುವಂತಿಲ್ಲ.

ಸಾರ್ವಜನಿಕರು ಗುಂಪು ಗೂಡುವಿಕೆಯನ್ನೂ ನಿರ್ಬಂಧಿಸಲಾಗಿದೆ. ಸಂಭಾಲ್​ ಪ್ರದೇಶದಲ್ಲಿ ಇಂಟರ್​ನೆಟ್​ ಸ್ಥಗಿತಗೊಳಿಸಲಾಗಿದ್ದು, ಶಾಲಾ, ಕಾಲೇಜ್​ಗಳನ್ನು ಬಂದ್​ ಮಾಡಲಾಗಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಭಾನುವಾರ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು 21 ಮಂದಿಯನ್ನು ಬಂಧಿಸಿದ್ದಾರೆ. ಹಲವರ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಬಂಧಿತರಲ್ಲಿ ಇಬ್ಬರು ಮಹಿಳೆಯರಿದ್ದು, ಸಿಸಿಟಿವಿ ಕ್ಯಾಮೆರಾ ಮೂಲಕ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಆದೇಶ ಉಲ್ಲಂಘನೆ ಬಿಎನ್​ಎಸ್​ ಸೆಕ್ಷನ್​ 223ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್​ಎಸ್​) ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜೇಂದರ್​ ಪೆನ್ಸಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಮೊಘಲ್ ಕಾಲದ ಇಲ್ಲಿನ ಮಸೀದಿ ಇದ್ದ ಜಾಗದಲ್ಲಿ ಹಿಂದೂ ದೇವಾಲಯವಿತ್ತು. ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಅರ್ಜಿದಾರರೊಬ್ಬರು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಘಟನೆಯನ್ನು ಹತೋಟಿಗೆ ತರಲು ಪೊಲೀಸರು ಟಿಯರ್​ ಗ್ಯಾಸ್​​ ಹಾರಿಸಿದ್ದು, ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸ್​ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಹೆಚ್ಚಿನ ಭದ್ರತಾ ಪಡೆ ಬೀಡುಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಮಸೀದಿ ಸರ್ವೇಗೆ ನ.19ರಂದು ಆದೇಶಿಸಿತ್ತು.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇಗೆ ತೆರಳಿದ್ದಾಗ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ಉಂಟಾಗಿದೆ. ಪೊಲೀಸರು ಮಸೀದಿ ಪ್ರವೇಶಿಸದಂತೆ ಅನೇಕರು ತಡೆದಿದ್ದಾರೆ.

ಈ ವೇಳೆ ಪೊಲೀಸ್​ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ 10 ಪೊಲೀಸ್​ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...