ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಸಕಲ ಸಿದ್ಧತೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಮಾದರಿ ನೀತಿಸಂಹಿತೆ ಜಾರಿಯಲ್ಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿದೆ.
ಕ್ಷೇತ್ರದಲ್ಲಿ 2 ಲಕ್ಷ 36 ಸಾವಿರದ 100 ಮತದಾರರಿದ್ದು, ಮತದಾನಕ್ಕೆ ಅನುಕೂಲವಾಗುವಂತೆ 253 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದರು.
ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈಗಾಗಲೇ 8 ಚೆಕ್ ಪೋಸ್ಟ್ ತೆರೆಯಲಾಗಿದೆ.
ನೀತಿಸಂಹಿತೆ ಉಲ್ಲಂಘನೆಯಾಗುವುದನ್ನು ತಡೆಯಲು ಹಲವು ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಪಕ್ಷಗಳ ಅಭ್ಯರ್ಥಿಗಳ ಮೇಲೆ ನಿಗಾ ವಹಿಸಲಾಗುವುದು.
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸಲು ಸುಮಾರು 1 ಸಾವಿರದ 215 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಅಪರಾಧ ಚಟುವಟಿಕೆ ಹಿನ್ನೆಲೆ ಇರುವ 137 ಜನರನ್ನು ಗುರುತಿಸಿದ್ದು, ಅವಶ್ಯಕತೆ ಅನುಸಾರವಾಗಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now