ನವದೆಹಲಿ: ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನೇಮಕ ಮಾಡಿದ್ದಾರೆ.
ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಟ್ವೀಟ್ ಮಾಡಿದ್ದಾರೆ.
ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದರು.
ಚುನಾವಣಾ ಬಾಂಡ್ಗಳನ್ನು ಅಕ್ರಮವೆಂದು ಸಾರಿದ, ಅಬಕಾರಿ ಹಗರಣದಲ್ಲಿಜೈಲು ಸೇರಿದ್ದ ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡುವ ಮೂಲಕ ಪ್ರಜಾಪ್ರಭುತ್ವದಲ್ಲಿ ಚುನಾವಣೆಯ ಮೌಲ್ಯಗಳನ್ನು ಎತ್ತಿ ತೋರಿಸಿದ, ಪಾರದರ್ಶಕತೆಗೆ ಒತ್ತು ನೀಡಲು ಸುಪ್ರೀಂ ಕೋರ್ಟ್ ಕೂಡ ಆರ್ಟಿಐನಡಿ ಮಾಹಿತಿ ಒದಗಿಸಬೇಕೆಂದು ಆದೇಶಿಸಿದ್ದು, ವಿದ್ಯುನ್ಮಾನ ಮತಯಂತ್ರಗಳಲ್ಲಿನ ಶೇ.100ರಷ್ಟು ವಿವಿ ಪ್ಯಾಟ್ಗಳನ್ನು ಪರಿಶೀಲನೆಗೊಳಪಡಿಸಬೇಕೆಂಬ ಮನವಿ ತಿರಸ್ಕಾರ ಹಾಗೂ ಕಲಂ 370 ರದ್ಧತಿ ತೀರ್ಮಾನ ಸಮಂಜಸವೆಂಬುದು ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ ಸಾಂವಿಧಾನಿಕ ಪೀಠಗಳ ಭಾಗವಾಗಿರುವ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ನ್ಯಾ. ಸಂಜೀವ್ ಖನ್ನಾ ದೇಶದ ಸರ್ವೋನ್ನತ ನ್ಯಾಯಾಲಯದ 51ನೇ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ.
ನಿಯಮದಂತೆ ಕೇಂದ್ರ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ನ.10ರಂದು ಹಾಲಿ ಸಿಜೆಐ, ನೂತನ ಸಿಜೆ ಸಂಜೀವ್ ಖನ್ನಾಗೆ ನ್ಯಾಯಾಂಗದ ಹಸ್ತಾಂತರ ಮಾಡಲಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now