spot_img
spot_img

SATELLITE TOWNSHIP : ಬಿಡದಿ, ಹಾರೋಹಳ್ಳಿಯಲ್ಲಿ ಟೌನ್ಶಿಪ್ ನಿರ್ಮಾಣಕ್ಕೆ ಗ್ರೇಟರ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

SATELLITE TOWNSHIP ರಾಮನಗರ ಜಿಲ್ಲೆಯ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳಲ್ಲಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಅಭಿವೃದ್ಧಿ ಯೋಜನೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಬೈರಮಂಗಲ, ಬನ್ನಿಗೆರೆ, ಹೊಸೂರು, ಕೆ.ಜಿ.ಗೊಲ್ಲರಪಾಳ್ಯ ಕಂಚುಗಾರನಹಳ್ಳಿ ಅರಳಾಳುಸಂದ್ರ ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ತಾಲೂಕಿನ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮ ಭಾಗಶಃ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಅಭಿವೃದ್ಧಿ ಯೋಜನೆಯನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆಯಡಿ ಕೈಗೊಳ್ಳಲಾಗುತ್ತಿದೆ.‌

ಬೆಂಗಳೂರು ಹೊರವಲಯದ 10 ಗ್ರಾಮಗಳ ವ್ಯಾಪ್ತಿಯಲ್ಲಿ ಹೊಸ SATELLITE TOWNSHIPಗಳನ್ನು ನಿರ್ಮಾಣಕ್ಕೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಜಾಗತಿಕ ಟೆಂಡರ್ ಕರೆಯುವ ಮೂಲಕ ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ Work-Live-Play ಪರಿಕಲ್ಪನೆಯಲ್ಲಿ ಟೌನ್​​ಶಿಪ್​​​ ಅನ್ನು ವಿನ್ಯಾಸಗೊಳಿಸಲು ಮತ್ತು ಯೋಜಿಸಲು ಅರ್ಹ ಸಂಸ್ಥೆಯನ್ನು ನೇಮಿಸಲು ಸಚಿವ ಸಂಪುಟ ಸಭೆ ಅನುಮತಿಸಿದೆ.

ಯೋಜನೆ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೋಢೀಕರಿಸುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ, ಹೊಸಕೋಟೆ, ಆನೇಕಲ್, ಕನಕಪುರ, ಮಾಗಡಿ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರಗಳಲ್ಲಿ ಲಭ್ಯವಿರುವ ಮೊತ್ತದ ಶೇ.50ರಷ್ಟು (ಶಾಸನಬದ್ಧವಾಗಿ ಸಂಗ್ರಹಿಸುವ ಶುಲ್ಕಗಳನ್ನು ಹೊರತುಪಡಿಸಿ) ಮೊತ್ತವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಲದ ರೂಪದಲ್ಲಿ ನೀಡಿ, 5 ವರ್ಷಗಳ ಅವಧಿಯಲ್ಲಿ ಸದರಿ ಮೊತ್ತವನ್ನು ಮರುಪಾವತಿಸುವ ಷರತ್ತಿಗೊಳಪಡಿಸಿ ವರ್ಗಾಯಿಸಲು ಸಂಪುಟ ಸಮ್ಮತಿಸಿದೆ.

SATELLITE TOWNSHIP ಪ್ರಸ್ತಾಪಿತ SATELLITE TOWNSHIP ಪ್ರದೇಶಗಳಲ್ಲಿನ ಸರ್ಕಾರಿ ಭೂಮಿಯನ್ನು ನಿಗದಿಪಡಿಸಲಾದ ಮಾರ್ಗಸೂಚಿ ಮೌಲ್ಯದ ಶೇ 50 ಕ್ಕಿಂತ ಹೆಚ್ಚಾಗದಂತೆ ಕನಿಷ್ಠ ಬೆಲೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸಲು ಒಪ್ಪಿಗೆ ಸೂಚಿಸಲಾಗಿದೆ.

ಸಮಗ್ರ ಉಪನಗರ ಯೋಜನೆಗಳ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಸಕ್ರಮ ಪ್ರಾಧಿಕಾರ, ಇಲಾಖೆ ಮತ್ತು ಸಂಸ್ಥೆಗಳನ್ನೊಳಗೊಂಡಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಒಪ್ಪಿಗೆ ಸೂಚಿಸಲಾಗಿದೆ.

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಯೋಜನೆಗಾಗಿ ಮೇಲಿನ 10 ಗ್ರಾಮಗಳಲ್ಲಿನ ಸುಮಾರು 8,943 ಎಕರೆ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೂಸ್ವಾಧೀನ ಪ್ರಕ್ರಿಯೆಗಳನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ ಅಡಿ ಕೈಗೆತ್ತಿಕೊಳ್ಳಲು ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ಸ್ವಾಧೀನಪಡಿಸಿಕೊಂಡ ಭೂಮಿಗೆ ಬದಲಿ ನಿವೇಶನಗಳ ಹಂಚಿಕೆ ಪರಿಹಾರ) ನಿಯಮಗಳು, 2009ರಲ್ಲಿನ ಭೂ ಹಂಚಿಕೆ ಮಾದರಿಯಲ್ಲಿ ಶೇ 35-50ರಷ್ಟು ಅಭಿವೃದ್ಧಿ ಹೊಂದಿದ ಭೂಮಿಯನ್ನು ಪರಿಹಾರವಾಗಿ) ಪರಿಹಾರವನ್ನು ನೀಡುವ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಿದೆ.

Income through asset monetization:

ಬೆಂಗಳೂರು ನಗರದಿಂದ ಹಾದುಬರುವ ವೃಷಭಾವತಿ ನದಿ ಸೇರುವ ಬೈರಮಂಗಲ ಕೆರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಸಮ್ಮತಿಸಲಾಗಿದೆ.

ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಅನುಷ್ಠಾನಕ್ಕೆ ಅಗತ್ಯ ಆಂತರಿಕ ಸಂಪನ್ಮೂಲಗಳನ್ನು ಬಿ.ಎಂ.ಆರ್.ಡಿ.ಎ ವ್ಯಾಪ್ತಿಯೊಳಗೆ ಲಭ್ಯವಿರುವ ಭೂಸಂಪನ್ಮೂಲಗಳ ಸೂಕ್ತ ನಗದೀಕರಣದ ಮೂಲಕ ಕ್ರೋಢೀಕರಿಸಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗಿದೆ.‌

ಯೋಜನೆಗೆ ಅಗತ್ಯ ಬಾಹ್ಯ ಸಂಪನ್ಮೂಲಗಳನ್ನು ರಾಷ್ಟ್ರೀಕೃತ JHUDCO/Power Finance Corporation ಮುಂತಾದ ಹಣಕಾಸು ಸಂಸ್ಥೆಗಳಿಂದ ಸರ್ಕಾರದ ಪೂರ್ವಾನುಮತಿಯೊಂದಿಗೆ ಸಾಲ ಪಡೆಯಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಇಂಜಿನಿಯರಿಂಗ್ ವಿಭಾಗವನ್ನು ಸೃಜಿಸುವವರೆಗೆ ರಾಮನಗರ ಲೋಕೋಪಯೋಗಿ ಇಂಜಿನಿಯರಿಂಗ್ ವಿಭಾಗವನ್ನು ಅಧಿಕೃತವಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರಿಂಗ್ ವಿಭಾಗವಾಗಿ ಕಾರ್ಯನಿರ್ವಹಿಸಲು ಸಮ್ಮತಿಸಿದೆ.

ಉದ್ದೇಶಿತ ಸಮಗ್ರ ಉಪನಗರ ಪ್ರದೇಶಕ್ಕೆ ಹಾಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಮುಖ್ಯ ರಸ್ತೆಗಳಿಂದ ಸೂಕ್ತ ಸಂಪರ್ಕ ಕಲ್ಪಿಸಲು ಅಗತ್ಯವಿರುವ ಭೂಮಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯ ಸಮಿತಿಯ ಅನುಮೋದನೆಯೊಂದಿಗೆ ಭೂ ಸ್ವಾಧೀನಪಡಿಸಿಕೊಳ್ಳಲು ಅನುಮತಿಸಿದೆ.

ಬೆಂಗಳೂರಿನ ಕೇಂದ್ರ ಭಾಗದಿಂದ ಟೌನ್‌ಶಿಪ್‌ಗೆ ಆರ್ಥಿಕ ಮತ್ತು ವಸತಿ ಚಟುವಟಿಕೆಗಳು ಸ್ಥಳಾಂತರಗೊಳ್ಳುವ ಬಗ್ಗೆ ವೇಗವರ್ಧಿಸುವ ದೃಷ್ಟಿಯಿಂದ ಹೂಡಿಕೆದಾರರು ಮತ್ತು ಅಂತಿಮ ಬಳಕೆದಾರರಿಗೆ ಹೆಚ್ಚು ಆಕರ್ಷಕವಾಗಿಸಲು ಸ್ಟ್ಯಾಂಪ್ ಸುಂಕದ ದರದಲ್ಲಿ ರಿಯಾಯಿತಿ ಮತ್ತು ಗುತ್ತಿಗೆ ಗುತ್ತಿಗೆ ಮತ್ತು ಮಾರಾಟ/ಕಾಯದ ವಹಿವಾಟುಗಳಿಗೆ ಸಂಬಂಧಿಸಿದಂತೆ ಕೆಲವು ನೋಂದಣಿ ಶುಲ್ಕಗಳಲ್ಲಿ ರಿಯಾಯಿತಿ ನೀಡಲು ಸಮ್ಮತಿಸಲಾಗಿದೆ.

ಭೂಮಿಯನ್ನು ಟೌನ್‌ಶಿಪ್​​ಗಾಗಿ ನೀಡಿದ ಭೂಮಾಲೀಕರಿಗೆ ಪರಿಹಾರವಾಗಿ ನೀಡುವ ನಿವೇಶನಗಳಿಗೆ ಮೊದಲ ಬಾರಿ ನೋಂದಣಿಗಾಗಿ ಸ್ಟ್ಯಾಂಪ್ ಡ್ಯೂಟಿಯ ಮೇಲಿನ ವಿನಾಯಿತಿ ಮತ್ತು ಇತರ ವಿನಾಯಿತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಇದನ್ನು ಓದಿರಿ : BUDGET SESSION : ರಾಷ್ಟ್ರಪತಿಗಳ ಭಾಷಣದೊಂದಿಗೆ ಇಂದಿನಿಂದ ಬಜೆಟ್ ಅಧಿವೇಶನ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...