Belgaum News:
ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷರು, ಗ್ಯಾರಂಟಿ ಸಮಿತಿ ಪದಾಧಿಕಾರಿಗಳೊಂದಿಗೆ ತಾವು ಮೀಟಿಂಗ್ ನಡೆಸಿದ್ದೇನೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಎದುರು ಜಿಲ್ಲಾ ಉಸ್ತುವಾರಿ ಸಚಿವ SATISH JARKIHOLI ಅವರ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇದರಿಂದಾಗಿ ಸುರ್ಜೆವಾಲ ಮತ್ತು SATISH JARKIHOLI ಬೆಂಬಲಿಗರ ಮಧ್ಯೆ ವಾಗ್ವಾದ ಉಂಟಾಯಿತು. ಆಗ ಕಾರ್ಯಕರ್ತರೊಬ್ಬರು ಎದ್ದುನಿಂತು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಅಸಮಾಧಾನಗೊಂಡ ಸುರ್ಜೇವಾಲ, ನೀವೇ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಭೆ ನಡೆಸಿ ಅಂತಾ ಸಿಡಿಮಿಡಿಗೊಂಡರು.
ಅವರ ಮಾತಿಗೆ ಸಿಟ್ಟಿಗೆದ್ದ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಬಾಬಾಜಾನ್ ಬಾಗವಾನ್ ವಾಗ್ವಾದಕ್ಕಿಳಿದಾಗ ಅವರ ಪಕ್ಕದಲ್ಲಿದವರೂ ಅವರಿಗೆ ಧ್ವನಿ ಗೂಡಿಸಿದರು. ಈ ವೇಳೆ ಯಾವುದೇ ಸಭೆ ಮಾಡಿಲ್ಲ ಎಂದು ನೇರವಾಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ SATISH JARKIHOLI ಬೆಂಬಲಿಗರು ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಧ್ಯೆ ವಾಗ್ವಾದ ಉಂಟಾಯಿತು.
ನಂತರ ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆಯೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಈಗ SATISH JARKIHOLI ಅವರು ಕಚೇರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಬೇರೆ ಯಾರೂ ನೋಡಿಕೊಳ್ಳುತ್ತಿಲ್ಲ ಎಂದರು. ಇದಕ್ಕೆSATISH JARKIHOLI ಅವರನ್ನ ಖುಷಿ ಪಡಿಸಲು ಮಾತನಾಡುತ್ತಿದ್ದೀರಿ ಎಂದು ಸುರ್ಜೇವಾಲ ಹೇಳಿದರು.
ಆಗ ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ಆಕ್ರೋಶ ಹೊರಹಾಕಿ, ಸSATISH JARKIHOLI ನಮ್ಮ ಹೆಮ್ಮೆ, ಅವರ ಸಲುವಾಗಿ ನಾವು ಜೀವ ಕೊಡುತ್ತೇವೆ. ಇಷ್ಟೆಲ್ಲಾ ಜನರು ಅವರ ಸಲುವಾಗಿ ಬಂದಿದ್ದಾರೆ ಎಂದು ನೇರವಾಗಿ ಹೇಳಿದರು. ಆ ಬಳಿಕ ರಣದೀಪ್ ಸಿಂಗ್ ಸುರ್ಜೇವಾಲ ಏನನ್ನೂ ಮಾತನಾಡಲಿಲ್ಲ. ನಂತರ ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆಯೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.
Jai Bapu, Jai Bhima, Jai Constitution Rally:
1924ರಲ್ಲಿ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‍್ಯಾಲಿಯನ್ನು ಪಕ್ಷ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಳಗಾವಿಗೆ ಭೇಟಿ ನೀಡಿ, ಪೂರ್ವಭಾವಿ ಸಭೆ ನಡೆಸಿದರು.
ಇದನ್ನು ಓದಿರಿ : HOW NAGASADHUS SURVIVE IN HIMALAYAS : ಮಂಜುಗಟ್ಟುವ ಚಳಿಯಲ್ಲಿಯೂ ನಾಗಾಸಾಧುಗಳು ಹೇಗಿರ್ತಾರೆ?