Hubli News:
ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆ. 12ರಂದು (ಬುಧವಾರ) ಹುಣ್ಣಿಮೆ ದಿನ ರಥೋತ್ಸವ ನಡೆಯಲಿದೆ. ಈ ಜಾತ್ರೆಗೆ ಹುಬ್ಬಳ್ಳಿ- ಧಾರವಾಡ ಅವಳಿನಗರ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳು, ಅಕ್ಕ ಪಕ್ಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.
ರಥೋತ್ಸವದ ಮುನ್ನಾ ದಿನಗಳಿಂದ ಆರಂಭವಾಗಿ ನಂತರದಲ್ಲಿ ದೇವಿಯ ವಾರದ ದಿನಗಳಾದ ಮಂಗಳವಾರ ಮತ್ತು ಶುಕ್ರವಾರಗದಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರದ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ YALLAM ನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.
ರಾಮನಗೌಡರ ತಿಳಿಸಿದ್ದಾರೆ. ಇದಕ್ಕಾಗಿ 60 ಬಸ್ಗಳು, 150 ಚಾಲಕರು – ನಿರ್ವಾಹಕರು, ಮೇಲ್ವಿಚಾರಣೆಗಾಗಿ 8 ಅಧಿಕಾರಿಗಳು ಹಾಗೂ 22 ಸಿಬ್ಬಂದಿಯನ್ನು ನಿಯೋಜಿಲಾಗಿದೆ. ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಭಕ್ತರಿಗೆ ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಫೆ.9 ರಿಂದ 14 ರವರೆಗೆ ಹಾಗೂ ನಂತರದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರಗಳಂದು ಫೆ.18, 21, 25 ಹಾಗೂ 28 ರಂದು ಹುಬ್ಬಳ್ಳಿ ಮತ್ತು ನವಲಗುಂದದಿಂದ YALLAM ನ ಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯ ನಿಮಿತ್ತ ಹುಬ್ಬಳ್ಳಿ ಮತ್ತು ನವಲಗುಂದದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಿದೆ.
Bus Departure Point and Route:ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುವ ಬಸ್ಗಳು ತಾರಿಹಾಳ ಬೈಪಾಸ್, ನರೇಂದ್ರ, ಧಾರವಾಡ, ಸವದತ್ತಿ ಮಾರ್ಗವಾಗಿ ಹೋಗುತ್ತವೆ.ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಜಾತ್ರೆ ವಿಶೇಷ ಬಸ್ಸುಗಳು ಹೊರಡುತ್ತವೆ.
ಹೊಸೂರು ಬಸ್ ನಿಲ್ದಾಣದಿಂದ ಹೊರಡುವ ಬಸ್ಗಳು ನವನಗರ, ಧಾರವಾಡ, ಸವದತ್ತಿ ಮಾರ್ಗವಾಗಿ ಸಂಚರಿಸುತ್ತವೆ.ನವಲಗುಂದ ಬಸ್ ನಿಲ್ದಾಣದಿಂದ ಹೊರಡುವ ಬಸ್ಗಳು ಗೊಬ್ಬರಗುಂಪಿ, ಅಳಗವಾಡಿ, ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಹೋಗುತ್ತವೆ.ಹೆಚ್ಚಿನ ಮಾಹಿತಿಗಾಗಿ ಆಯಾ ಬಸ್ ನಿಲ್ದಾಣಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಹೊಸೂರು ಬಸ್ ನಿಲ್ದಾಣ: 7760991662 / 7760991685
ಗೋಕುಲ ರಸ್ತೆ ಬಸ್ ನಿಲ್ದಾಣ : 7760991682
ನವಲಗುಂದ : 9663299001
ಇದನ್ನು ಓದಿರಿ :India Developing Its Own AI Chip, Plans Generative AI Model With 18,693 GPUs