spot_img
spot_img

Vidyasiri Yojana : ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿ ವೇತನ ಹೆಚ್ಚಳ : ಸಿದ್ದರಾಮಯ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು : ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.
ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು. ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.ಕೋಟಿ 22 ಲಕ್ಷ ಕುಟುಂಬಗಳ ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ವರ್ಷಕ್ಕೆ 32 ಸಾವಿರ ಕೋಟಿ ಒದಗಿಸಲಾಗುತ್ತಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಈ ಯೋಜನೆಗಳು ಜಾರಿಯಾಗಿವೆ. ವರ್ಷಕ್ಕೆ 50-60 ಸಾವಿರ, ತಿಂಗಳಿಗೆ 4-5 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ನಾನು ಹಳ್ಳಿಯಿಂದ ಬಂದು ನನ್ನ ಹಾಗೆ ಕಷ್ಟ ಪಡಬಾರದೆಂದು ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಕನಕದಾಸರ ಪ್ರತಿಮೆಯನ್ನು ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ.
ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ.ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು ಅದಕ್ಕಾಗಿ ಶ್ರಮವಹಿಸಬೇಕು. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ. ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು ಸಮಾಜದಲ್ಲಿ ತುಳಿತಕ್ಕೊಳಗಾದವರ ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಕುವೆಂಪು ಹೇಳುತ್ತಾರೆ ‘ಹುಟ್ಟುವಾಗ ಎಲ್ಲರೂ ವಿಶ್ವಮಾನವರು ಬೆಳೆಯುತ್ತಾ ಬೆಳೆಯುತ್ತಾ ಜಾತಿ ಇತ್ಯಾದಿಗಳನ್ನು ರೂಢಿಸಿ ಕೊಂಡು ಅಲ್ಪಮಾನವರಾಗಿ ಬಿಡುತ್ತಾರೆ ನಾವು ವಿಶ್ವಮಾನವರಾಗಲು ಪ್ರಯತ್ನಿಸೋಣ. ಅಲ್ಪ ಮಾನವರಾಗುವುದು ಬೇಡ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ ಶಿಕ್ಷಣದ ಮೂಲ ಧ್ಯೇಯವು ಅದೇ ಎಂದರು.
1988ರಲ್ಲಿ 37 ವರ್ಷಗಳ ಹಿಂದೆ ನಾನು ಸಾರಿಗೆ ಮಂತ್ರಿಯಾಗಿದ್ದಾಗ ಕನಕದಾಸ ಜಯಂತಿಯ 500ನೇ ವರ್ಷಾಚರಣೆಯನ್ನು ಆಚರಿಸಲಾಯಿತು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು, ಕನಕದಾಸರ ಒಬ್ಬ ಕವಿ, ಸಂತ, ದಾರ್ಶನಿಕ ಎಂದು ಜೀವನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಕನಕದಾಸರು ಹಿಂದುಳಿದ ಜಾತಿಗೆ ಸೇರಿದ್ದರಿಂದ ಅನೇಕ ಅಪಮಾನಗಳನ್ನು ಎದುರಿಸಬೇಕಾಯಿತು. ಅದನ್ನೆಲ್ಲಾ ಮೀರಿ ಅವರು ಸಂತರಾದ ಬಗೆಯನ್ನು ವಿದ್ಯಾರ್ಥಿಗಳಿಗೆ ಕತೆಗಳ ಮೂಲಕ ವಿವರಿಸಿದರು.
ಅಕ್ಕಿಗೂ ರಾಗಿಗೂ ಒಮ್ಮೆ ಯಾರು ಶ್ರೇಷ್ಠ ಎನ್ನುವ ಪೈಪೋಟಿ ಶುರುವಾಯಿತು. ಎರಡೂ ಶ್ರೀರಾಮನ ಬಳಿ ಹೋದವು. ಆಗ ಒಂದು ಹಗೆಯಲ್ಲಿ ರಾಗಿ ಮತ್ತೊಂದರಲ್ಲಿ ಭತ್ತ ಹಾಕಲಾಯಿತು ಮತ್ತು ಅದನ್ನು ಆರು ತಿಂಗಳ ನಂತರ ಪರೀಕ್ಷಿಸಲು ತೀರ್ಮಾನಿಸಲಾಯಿತು.
ಆರು ತಿಂಗಳ ನಂತರ ಪರೀಕ್ಷಿಸಲಾಗಿ ಭತ್ತವು ಬೂದಿ ಹಿಡಿದು ಹಾಳಾಗಿತ್ತು , ಅದೇ ರಾಗಿ ಘಮಘಮಿಸುತ್ತಿತ್ತು ಇದರಿಂದ ಬಡವರ ಆಹಾರವಾದ ರಾಗಿಯು ಸರ್ವಶ್ರೇಷ್ಠ ಎಂದು ಸಾಬೀತಾಯಿತ್ತು ಮಾತ್ರವಲ್ಲ ಸತ್ವವುಳ್ಳ ಆಹಾರ ಎಂದು ಸಾಬೀತಾಯಿತು . ಇದರಿಂದ ರಾಗಿ ಕಳಪೆಯಲ್ಲ ಅಕ್ಕಿಯನ್ನು ಶ್ರೀಮಂತರು ಉಪಯೋಗಿಸುತ್ತಾರೆ ಎಂದು ಅದು ಮೇಲಲ್ಲ ಎಂದು ಮಕ್ಕಳಿಗೆ ರಾಮಧಾನ್ಯ ಚರಿತೆ ಕತೆ ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...