ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ತಡೆಗಟ್ಟಲು ವೆಬ್ಕಾಸ್ಟಿಂಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಯು ಮುಂದಾಗಿದೆ.
ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್ (webcasting) ಮೊರೆ ಹೋಗಿತ್ತು. ಸಾಮೂಹಿಕ ನಕಲು ತಡೆಯಲು ಮತ್ತು ಪಾರದರ್ಶಕತೆ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಶಿಕ್ಷಣ ಇಲಾಖೆ ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪರಿಚಯಿಸಲಾಗಿತ್ತು. ಹಾಗಾಗಿ ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಡ ಅದೇ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.
ಇನ್ನು 2025ರ ಸಾಲಿನ ಬೋರ್ಡ್ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾದ ಕಾಲೇಜುಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪತ್ರ ಬರೆದಿದ್ದು, ಸಿಸಿಟಿವಿ ಕ್ಯಾಮೆರಾಗಳ ಐಪಿ ಸಂಖ್ಯೆಯನ್ನು ಆಯಾ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರಿಗೆ ನೀಡುವಂತೆ ತಿಳಿಸಲಾಗಿದೆ.
ಆ ಮೂಲಕ ಉಪ ನಿರ್ದೇಶಕರು ಮತ್ತು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಪರೀಕ್ಷೆಯ ನೇರ ದೃಶ್ಯಾವಳಿಗಳನ್ನು ನೋಡಬಹುದಾಗಿದ್ದು, ಮತ್ತು ನಕಲು ತಡೆಯಲು ಸಹಾಯವಾಗಿದೆ ಎಂದು ಹೇಳಿದ್ದಾರೆ.
ವೆಬ್ ಕಾಸ್ಟಿಂಗ್ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಮತ್ತು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮಂಡಳಿ ಸೂಚನೆ ನೀಡಲಾಗಿದೆ. ಆ ಮೂಲಕ ಉಪ ನಿರ್ದೇಶಕರು ಮತ್ತು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಪರೀಕ್ಷೆಯ ನೇರ ದೃಶ್ಯಾವಳಿಗಳನ್ನು ನೋಡಬಹುದಾಗಿದ್ದು, ಮತ್ತು ನಕಲು ತಡೆಯಲು ಸಹಾಯವಾಗಿದೆ ಎಂದು ಹೇಳಿದ್ದಾರೆ.