spot_img
spot_img

ಹಿರಿಯ ಮುತ್ಸದ್ಧಿ, ಮಾಜಿ ಸಚಿವ ಕೆ.ಹೆಚ್. ಶ್ರೀನಿವಾಸ್ ನಿಧನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಶಿವಮೊಗ್ಗಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌.ಶ್ರೀನಿವಾಸ್‌ ( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ( Janata parivar leader) ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ( Rama Krishna Hegde) ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು.

ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ನನ್ನ ತಂದೆ ಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ. ಅವರು ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ನಿವಾಸದಲ್ಲಿ ನಿಧನರಾದರು. ಅಪಾರ ದುಃಖದಿಂದ ನನಗಾದ ದೊಡ್ಡ ನಷ್ಟದ ಬಗ್ಗೆ ನಾನು ನಿಮಗೆ ತಿಳಿಸುತ್ತೇನೆ ಎಂದು ಶ್ರೀನಿವಾಸ್‌ ಪುತ್ರಿ ವೈಶಾಲಿ ದುಃಖ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ1938ರ ಫೆಬ್ರವರಿ 5ರಂದು ಜನಿಸಿದರು ಕೆ.ಎಚ್‌.ಶ್ರೀನಿವಾಸ್‌. ಸಾಗರ, ಶಿವಮೊಗ್ಗದಲ್ಲಿ ಶಿಕ್ಷಣ ಪಡೆದಿದ್ದರು.ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

ಹಲವಾರು ಸಾಮಾಜಿಕ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ನೇಮಕಗೊಂಡು ಸಾಮಾಜಿಕವಾಗಿ ಗುರುತಿಸಿಕೊಂಡರು ಶ್ರೀನಿವಾಸ್‌. ಸಾಗರ ತಾಲೂಕು ಮತ್ತು ಸುತ್ತಮುತ್ತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...