ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಾದರಿ ಕಂಪ್ಯೂಟರ್ ಲ್ಯಾಬ್ ಗಳ ಸ್ಥಾಪನೆ ಮಾಡಲು ಮುಂದಾಗಿದೆ.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳು ಇರುವ ಪ್ರತ್ಯೇಕ ಕೊಠಡಿ ಹೊಂದಿರುವ ಮತ್ತು ಕಂಪ್ಯೂಟರ್ ಲ್ಯಾಬ್ ಇಲ್ಲದ ಸರ್ಕಾರಿ ಪ್ರೌಢಶಾಲೆಗಳನ್ನು ಗುರುತಿಸಿ ಕೂಡಲೇ ಪಟ್ಟಿ ಕಳುಹಿಸಿಕೊಡುವಂತೆ ಡಯಟ್ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿದೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಆಯ್ದ 23 ಜಿಲ್ಲೆಗಳಲ್ಲಿ ತಲಾ 6, ಎಂಟು ಜಿಲ್ಲೆಗಳಲ್ಲಿ ತಲಾ 5 ಶಾಲೆಗಳನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು, ಶಿವಮೊಗ್ಗ, ಶಿರಸಿ, ತುಮಕೂರು, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ತಲಾ ಆರು ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮಂಜೂರಾಗಿದೆ.
ಚಾಮರಾಜನಗರ, ಕಲಬುರಗಿ, ಬೀದರ್, ರಾಯಚೂರು, ಮಧುಗಿರಿ, ಕೊಡಗು, ಉತ್ತರ ಕನ್ನಡ, ವಿಜಯನಗರ, ಜಿಲ್ಲೆಗಳಿಗೆ ತಲಾ 5 ಶಾಲೆಗಳಿಗೆ ಕಂಪ್ಯೂಟರ್ ಮಂಜೂರು ಮಾಡಲಾಗಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now