ಬೀಳಗಿ: ಮಹಿಳೆಯೊಬ್ಬರು ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ತಾಲ್ಲೂಕಿನ ಕೊರ್ತಿ ಪುನರ್ವಸತಿ ಕೇಂದ್ರದ ಗಂಗವ್ವ ಬಿರಾದಾರ ಅವರು ಬಂದ ಹಣದಿಂದ ಒಂದು ಹೊಲಿಗೆ ಯಂತ್ರ ಖರೀದಿಸಿದ್ದಾರೆ.
ಗಂಗವ್ವ ಬಿರಾದಾರ ಈಗಾಗಲೇ ಕಾರಕುಟ್ಟುವ ಹಾಗೂ ಶ್ಯಾವಿಗೆ ಮಷೀನ್ ಗಳನ್ನು ಹೊಂದಿದ್ದು ಪ್ರಸ್ತುತ 12 ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯಡಿ ಜಮಾ ಆಗಿರುವ ₹ 24 ಸಾವಿರದಲ್ಲಿ ₹8 ಸಾವಿರ ಹಣವನ್ನು ನೀಡಿ ಹೊಲಿಗೆ ಯಂತ್ರವನ್ನು ಖರೀದಿಸುವ ಮೂಲಕ ತನ್ನ ಮೊಮ್ಮಕ್ಕಳಿಗೆ ಹಾಗೂ ನೆರೆಹೊರೆಯವರಿಗೆ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾಳೆ .
₹12 ಸಾವಿರ ಹಣವನ್ನು ತನ್ನ ಮೊಮ್ಮಗನ ವಿದ್ಯಾಭ್ಯಾಸಕ್ಕಾಗಿ ಶಾಲೆಯ ಶುಲ್ಕವನ್ನು ಭರ್ತಿ ಮಾಡಿದ್ದಾಳೆ.
ಗಂಗವ್ವ ಬಿರಾದರ ಅವರನ್ನು ಬೀಳಗಿ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಗೆ ಗುರುವಾರ ಬರಮಾಡಿಕೊಂಡು ಸಮಿತಿಯ ಜಿಲ್ಲಾಧ್ಯಕ್ಷ ಸಾಗರ ತೆಕ್ಕೆನವರ ಹಾಗೂ ತಾಲ್ಲೂಕಾಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಗೌರವಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ₹24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟಿದ್ದಾರೆ .
ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶ ಹೊಂದಿದ್ದಾರೆ.
ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶದ ಪ್ರಧಾನಿಯೇ ಅಪಪ್ರಚಾರಕ್ಕೆ ಇಳಿದಿರುವ, ಇಡೀ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.
ಬಿಜೆಪಿ – ಜೆಡಿಎಸ್ ನಾಯಕರ ಸುಳ್ಳು, ಅಪಪ್ರಚಾರಗಳ ನಡುವೆ ನಮ್ಮ ಗ್ಯಾರಂಟಿ ಯೋಜನೆ ಗೆಲ್ಲುತ್ತಿದೆ, ಜನರ ಬದುಕು ಬದಲಿಸುತ್ತಿದೆ. ಟೀಕೆಗಳು ಸಾಯುತ್ತಿವೆ, ಕೆಲಸಗಳು ಕಾಣುತ್ತಿವೆ.
ನಂತರ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಸಾಗರ ತೆಕ್ಕೆನ್ನವರ ಮಾತನಾಡಿ ಗಂಗವ್ವ ಬಿರಾದರ ತನ್ನ ಕುಟುಂಬದ ಆರ್ಥಿಕ ಅಭಿವೃದ್ಧಿಗಾಗಿ ಗೃಹಲಕ್ಷ್ಮೀ ಯೋಜನೆ ಬಳಸಿಕೊಂಡಿದ್ದು ಸ್ವಾಗತಾರ್ಹ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕಾ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ ಗೃಹಲಕ್ಷ್ಮಿ ಯೋಜನೆಯನ್ನು ಗಂಗವ್ವ ಬಿರಾದಾರ ತನ್ನ ಮೊಮ್ಮಕ್ಕಳು ಮತ್ತು ನೆರೆಹೊರೆಯವರ ಹೊಲಿಗೆ ಕಲಿಯಲು, ಹಾಗೂ ವಿದ್ಯಾಭ್ಯಾಸಕ್ಕೆ ಸದುಪಯೋಗಪಡಿಸಿಕೊಂಡಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.
ಗ್ರೇಡ್- 2 ತಹಶೀಲ್ದಾರ ಆನಂದ ಕೋಲಾರ, ಸಿಡಿಪಿಓ ಬಿ ಜಿ ಕವಟೇಕರ, ಸುಜಾತ ರಜಪೂತ, ಬೀಳಗಿ ತಾಲ್ಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ಸಿದ್ದು ಸಾರಾವರಿ, ಬಸವರಾಜ ಹಳ್ಳದಮನಿ ಭಾಗವಹಿಸಿದ್ದರು.