Bangalore News:
ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ ಸಿಕ್ಕಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ SHARAVATHI PUMPED STORAGE PROJECT ವಿದ್ಯುತ್ ಉತ್ಪಾದನಾ ಯೋಜನೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. SHARAVATHI PUMPED STORAGE PROJECT ವಿದ್ಯುತ್ ಉತ್ಪಾದನಾ ಯೋಜನೆ ಶರಾವತಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ.
ಯೋಜನೆಗೆ 125 ಎಕರೆ ಅರಣ್ಯ ಭೂಮಿ ನೀಡುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಯೋಜನೆಗೆ ಅರಣ್ಯ ಪ್ರದೇಶದ ಸುಮಾರು 16 ಸಾವಿರ ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
Notice to cut down 9 thousand trees, plan not to harm Sinhalese:
SHARAVATHI PUMPED STORAGE PROJECT ಕಾಮಗಾರಿಯಿಂದ ಅವುಗಳ ವಾಸಸ್ಥಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಯಿತು. ಕೇವಲ 125 ಎಕರೆ ಅರಣ್ಯ ಪ್ರದೇಶದಲ್ಲಷ್ಟೇ ಕಾಮಗಾರಿ ನಡೆಸಬೇಕು. ಅದನ್ನು ಮೀರಿ ಯೋಜನೆ ಕೈಗೊಳ್ಳಬಾರದೆಂಬ ಷರತ್ತುಗಳನ್ನು ವಿಧಿಸಿ ಅನುಮೋದನೆ ನೀಡಲಾಯಿತು.
ಬಳಿಕ 16 ಸಾವಿರ ಮರಗಳ ಬದಲಿಗೆ 8ರಿಂದ 9 ಸಾವಿರ ಮರಗಳು ಮಾತ್ರ ಕಡಿಯುವಂತೆ ಸೂಚನೆ ನೀಡಲಾಯಿತು. ಜೊತೆಗೆ, ಶರಾವತಿ ವನ್ಯಜೀವಿಧಾಮ ಅಪರೂಪದ ವನ್ಯಜೀವಿಯಾದ ಸಿಂಹಬಾಲ ಸಿಂಗಳಿಕಗಳ ವಾಸಸ್ಥಾನವಾಗಿದೆ.
SHARAVATHI PUMPED STORAGE PROJECT ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ನೀಡಲಾಗಿರುವ ಅನುಮೋದನೆಯನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆಗೆ ಮಂಡಿಸಲಾಗುವುದು. ಅಲ್ಲಿ ಅನುಮೋದನೆ ದೊರೆತ ನಂತರ ಯೋಜನೆ ಕಾಮಗಾರಿಗೆ ಚಾಲನೆ ದೊರೆಯಲಿದೆ. ಒಟ್ಟು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆ ಇದಾಗಿದೆ.
2 thousand mega watt power generation target:
ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಪೊನ್ನಣ್ಣ, ಗಣೇಶ್ ಪ್ರಸಾದ್, ಪುಟ್ಟಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ವನ್ಯಜೀವಿ ಮಂಡಳಿ ಸದಸ್ಯರು ಇದ್ದರು.
ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳಿಂದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸುರಂಗ ಮಾರ್ಗ ನಿರ್ಮಿಸಿ ನೀರು ಹಾಯಿಸಲಾಗುತ್ತದೆ. ಮೊದಲ ಹಂತದಲ್ಲಿ 10 ಘಟಕಗಳಿಂದ ಸದ್ಯ 1 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.
ಈ ಯೋಜನೆ 66 ಸಾವಿರ ಎಕರೆ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗಿದೆ. ಇದೀಗ ಎರಡನೇ ಹಂತದ ಯೋಜನೆಯು 125 ಎಕರೆ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಂಡು ಪೂರ್ಣ 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ.
ಇದನ್ನು ಓದಿರಿ : STAMPEDE AT MAHA KUMBH : 15 ಮಂದಿ ಸಾವು ಶಂಕೆ, ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು