spot_img
spot_img

ಅಪ್ರತಿಮ ಸಾಧನೆ ಮಾಡಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

spot_img
spot_img

Share post:

ಬೆಂಗಳೂರು: ಸಂದಿಗ್ಧ ಸಮಯದಲ್ಲಿ ಧೈರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಿದ ಮಕ್ಕಳಿಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ನೀಡಿ ಗೌರವಿಸಲಾಗಿದೆ.

ಸಂಕಷ್ಟದ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದು ಧೈರ್ಯ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ಅಪಾಯದಿಂದ ರಕ್ಷಿಸಿದಂತಹ ಮಕ್ಕಳಿಗೆ 2023-24ನೇ ಸಾಲಿನ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಳನ್ನು ಶುಕ್ರವಾರ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಶೌರ್ಯ ಪ್ರಶಸ್ತಿಗಳನ್ನು 8 ಮಕ್ಕಳಿಗೆ ನೀಡಿ ಗೌರವಿಸಲಾಯಿತು.

ನಗರದ ಕಬ್ಬನ್ ಉದ್ಯಾನದಲ್ಲಿರುವ ಜವಾಹರ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜವಾಹರ ಬಾಲಭವನ ಸೊಸೈಟಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕೊಡಮಾಡಲಾಯಿತು.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ಹಾಗೂ ಜವಾಹರ ಬಾಲಭವನ ಕಲಾಶ್ರೀ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದರು.

ಮಣಿಕಂಠ 2ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶಾಲೆಯಲ್ಲಿ ತನ್ನ ಸಹಪಾಠಿಯ ಬ್ಯಾಗ್​ನಲ್ಲಿದ್ದ ಹಾವನ್ನು ಗಮನಿಸಿ ಭಯಭೀತನಾಗದೆ, ಸಮಯಪ್ರಜ್ಞೆಯಿಂದ ಕೂಡಲೇ ಬ್ಯಾಗ್​ನ ಜಿಪ್ ಅನ್ನು ಹಾಕಿ ಆಟದ ಮೈದಾನದಲ್ಲಿ ತಂದು ಇಟ್ಟಿದ್ದ. ಬಾಲಕನ ಜಾಣ್ಮೆ ಮತ್ತು ಧೈರ್ಯದಿಂದ ಇತರ ಮಕ್ಕಳು ಅಪಾಯದಿಂದ ಪಾರಾಗಿದ್ದರು.

ಆರೋಡಿ ಗ್ರಾಮದಲ್ಲಿ 55 ಅಡಿ ಆಳದ ತೆರೆದ ಬಾವಿಯಲ್ಲಿ ಬಿದ್ದ ಹಸು ಮತ್ತು ಕರುವನ್ನು ರಕ್ಷಣೆ ಮಾಡಲು ಮನೆಯ ಯಜಮಾನ ಬಾವಿಗೆ ಧುಮಿಕಿದಾಗ ಬಾವಿಯ ಹಗ್ಗ ತುಂಡಾಗಿತ್ತು. ಕರು ಮತ್ತು ವ್ಯಕ್ತಿಯು ಬಾವಿಯಿಂದ ಮೇಲೆ ಬರಲು ಸಾಧ್ಯವಾಗದೇ, ಸಹಾಯಕ್ಕಾಗಿ ಕೂಗುತ್ತಿದ್ದರು. ಆಗ ಪಕ್ಕದಲ್ಲಿ ಆಟವಾಡುತ್ತಿದ್ದ ನಿಶಾಂತ್ ಹಾಗೂ ಅಶ್ವಿನ್ ಇಬ್ಬರೂ ಹಗ್ಗವನ್ನು ನೀಡಿ, ವ್ಯಕ್ತಿಯನ್ನು ಕಾಪಾಡುವುದರ ಜೊತೆಗೆ ಊರಿನ ಗ್ರಾಮಸ್ಥರನ್ನು ಸೇರಿಸಿ, ಕರುವಿನ ಪ್ರಾಣವನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದರು. ಬಾಲಕರ ಸಮಯಪ್ರಜ್ಞೆಗೆ ಶ್ಲಾಘನೀಯವಾಗಿ ಶೌರ್ಯ ಪ್ರಶಸ್ತಿ ನೀಡಲಾಗಿದೆ.

ಕಲಘಟಗಿ ತಾಲೂಕಿನ ಹನಮಾಪುರ ಗ್ರಾಮದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಹಮ್ಮದ ಸಮೀರ ಬುಕ್ಕಿಟಗಾರ ತನ್ನ ಅಜ್ಜನ ಜೊತೆ ಮೀನು ಹಿಡಿಯಲು ಹಳ್ಳಕ್ಕೆ ಹೊರಟಿದ್ದ. ಈ ಸಂದರ್ಭದಲ್ಲಿ ಅಜ್ಜನಿಗೆ ವಿದ್ಯುತ್ ತಂತಿ ತಗುಲಿದ್ದರೂ ಗಾಬರಿಯಾಗದೇ ತನ್ನ ಹತ್ತಿರವಿದ್ದ ಕೊಡೆಯ ಹಿಡಿಕೆಯಿಂದ ವಿದ್ಯುತ್ ತಂತಿಯನ್ನು ದೂರ ಸರಿಸಿದ್ದ. ಅಲ್ಲದೆ, ಅವಘಡದಿಂದ ಎಚ್ಚರ ತಪ್ಪಿದ ಅಜ್ಜನಿಗೆ ಪ್ರಥಮ ಚಿಕಿತ್ಸೆ ನೀಡಿ, ಪ್ರಾಣ ರಕ್ಷಣೆ ಮಾಡಿದ್ದ. ಬಾಲಕನ, ಸಮಯಪ್ರಜ್ಞೆ, ಧೈರ್ಯ ಸಾಹಸ ಕಾರ್ಯಕ್ಕೆ ಶ್ಲಾಘನೀಯವಾಗಿ ಶೌರ್ಯ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ಸಂಭವಿಸಿದ್ದ ರಿಕ್ಷಾ ಅಪಘಾತದಲ್ಲಿ ಆರ್.ಮಾಧವಿ ತನ್ನ ತಾಯಿಯನ್ನು ರಕ್ಷಿಸಿದ್ದರು. ವಾಹನದ ಅಡಿಯಲ್ಲಿ ಸಿಲುಕಿದ್ದ ತಾಯಿಯನ್ನು ರಿಕ್ಷಾವನ್ನು ಮೇಲೆತ್ತುವ ಮೂಲಕ ರಕ್ಷಣೆ ಮಾಡಿದ್ದಳು. ಈಕೆಯ ಸಮಯಪ್ರಜ್ಞೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಶ್ಲಾಘಿಸಿದ್ದರು. ಇದೀಗ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಳಗಾವಿಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಸ್ಫೂರ್ತಿ ತಂದೆ-ತಾಯಿಯ ಜೊತೆ ಕಾರಿನಲ್ಲಿ ರಾತ್ರಿ 8.30ರ ಸಮಯದಲ್ಲಿ ಹೋಗುತ್ತಿರುವಾಗ, ಬೆಳಗಾವಿಯ ತಿಳಕವಾಡಿ ರೈಲ್ವೆ ಗೇಟ್ ಹಳಿಯ ಮೇಲೆ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಓರ್ವ ಅಪರಿಚಿತ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳನ್ನು ತನ್ನ ಪ್ರಾಣದ ಹಂಗನ್ನು ತೊರೆದು ರಕ್ಷಿಸಿದ್ದಳು.

ಸಾಲಿಗ್ರಾಮದಲ್ಲಿ 16 ಅಡಿ ಉದ್ಯದ 65 ಕೆ.ಜಿ. ತೂಕದ ಬಾರಿ ಗಾತ್ರದ ಹೆಬ್ಬಾವನ್ನು ಹಿಡಿದು, ಬಾಲಕ ಧೀರಜ್ ಐತಾಳ್ ಸಾರ್ವಜನಿಕರ ಪ್ರಾಣ ರಕ್ಷಣೆ ಮಾಡಿದ್ದ. ಇತರ ಸಂದರ್ಭಗಳಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಕ್ಕ ಸುಮಾರು 70 ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವುದರ ಮೂಲಕ ಸಂಭವಿಸಬಹುದಾದ ಅವಘಡಗಳನ್ನು ತಡೆದಿದ್ದ. ಬಾಲಕನ ಸಮಯಪ್ರಜ್ಞೆ, ಧೈರ್ಯ, ಸಾಹಸಕ್ಕೆ ಶ್ಲಾಘಿಸಿ ಶೌರ್ಯ ಪ್ರಶಸ್ತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ”ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ ಒದಗಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಇದೆ. ಪೌಷ್ಟಿಕ ಆಹಾರ ಕಾರ್ಯಕ್ರಮದಿಂದ ಮಕ್ಕಳು ಹಾಗೂ ಮಹಿಳೆಯರಿಗೆ ಸಹಾಯವಾಗಿದೆ. ಹೆಣ್ಣು ಮಕ್ಕಳ ಕಲ್ಯಾಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ” ಎಂದರು. ಶಾಸಕ ರಿಜ್ವಾನ್‌ ಆರ್ಶದ್, ಬಿಬಿಎಂಪಿ ಮಾಜಿ ಮೇಯರ್ ಪದ್ಮಾವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...