spot_img
spot_img

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

spot_img
spot_img

Share post:

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.

ಈ ಕುರಿತು ವರದಿಗಾರರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿರುವ ಬಾಲಕಿ, ಬಡತನದಿಂದಾಗಿ ತನ್ನ ಮೂವರು ಅಕ್ಕಂದಿರಿಗೆ ಕೆಲವು ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದಾರೆ. ತನ್ನ ಅಕ್ಕಂದಿರುವ ಅನುಭವಿಸುತ್ತಿರುವ ಆರೋಗ್ಯದ ಸಮಸ್ಯೆಗಳನ್ನು ನೋಡಿದಾಗ, ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಬಾಲ್ಯ ವಿವಾಹವು ಕೆಟ್ಟದು ಎಂಬುದು ಅರಿವಾಯಿತು ಎಂದು ಹೇಳಿದ್ದಾಳೆ.

ಇದನ್ನೂ ಓದಿ : ಸದ್ಯದಲ್ಲೇ ಬರಲಿದೆ iPhone SE4 ನಿಮ್ಮ ಬಜೆಟ್ ಬೇಲೆಗೆ.!

ಆಕೆಯ ತಂದೆ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಕೃಷಿ ಕೂಲಿ ಕಾರ್ಮಿಕರಾಗಿರುವ ತಾಯಿ ನಾಲ್ಕು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಕುಟುಂಬಕ್ಕೆ ಏಕೈಕ ಆಧಾರವಾಗಿದ್ದಾರೆ. ಸರ್ಕಾರದ ಸವಲತ್ತುಗಳ ಕಾರಣದಿಂದ ಆಕೆಯ ತಾಯಿ ಬಾಲಕಿಯನ್ನು ಓದಲು ಬಿಟ್ಟಿದ್ದಾರೆ. ಆದರೆ ಬಡತನದ ಕಾರಣದಿಂದ ತನ್ನ ತಾಯಿಯ ಒಂಬತ್ತು ಸಹೋದರರ ಪೈಕಿ 25 ವರ್ಷ ವಯಸ್ಸಿನ ಸೋದರ ಮಾವನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಲು ಕುಟುಂಬ ನಿರ್ಧರಿಸಿತು.

ಆದರೆ ಬಾಲಕಿ ಇದನ್ನು ವಿರೋಧಿಸಿ ತಾನು ವಯಸ್ಕಳಾಗಿ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ತಾಯಿ ಮತ್ತು ಸೋದರ ಮಾವನಿಗೆ ಹೇಳಿದ್ದಾಳೆ. ಆದರೂ ಅವರು ತಲೆಕೆಡಿಸಿಕೊಳ್ಳದೆ ಮದುವೆ ತಯಾರಿಗೆ ಮುಂದಾಗಿದ್ದಾರೆ.

ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದು, ಕೊಸಾಂಬೆಯ ಗಮನಕ್ಕೆ ತರಲಾಗಿದೆ.

ಇದನ್ನೂ ಓದಿ : 2ನೇ ಬ್ಯಾಟ್ಸ್​ಮನ್ ಎಂಬ ಖ್ಯಾತಿ ಯಾರು ಪಡೆಯಲಿದ್ದಾರೆ ? ಇಲ್ಲಿದೆ ಸಂಪೂರ್ಣ ಮಾಹಿತಿ.!

ಭಾನುವಾರ ತಹಶೀಲ್ದಾರ್ ದತ್ತಾತ್ರೇಯ ಗಡಾದ, ತಾಲ್ಲೂಕು ಪಂಚಾಯಿತಿ ಸಿಇಒ ರಮೇಶ ಸುಲ್ಫಿ, ಸಿಡಿಪಿಒ ಗೌತಮ್ ಸಿಂಧೆ, ಬಿಇಒ ಶಿವರುದ್ರಯ್ಯ, ಪಿಎಸ್‌ಐ ಜಯಶ್ರೀ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರ ಅವರೊಂದಿಗೆ ಗ್ರಾಮಕ್ಕೆ ದೌಡಾಯಿಸಿದ್ದು, ಬಾಲಕಿಯ ತಾಯಿ, ಸೋದರ ಮಾವ ಮತ್ತು ಗ್ರಾಮದ ಹಿರಿಯರನ್ನು ಭೇಟಿ ಮಾಡಿತು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನೆಯವರಿಗೆ ಮನವರಿಕೆ ಮಾಡಿಕೊಟ್ಟು, ಮದುವೆ ಮಾಡಿದರೆ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಹುಡುಗಿ ವಯಸ್ಕಳಾಗುವವರೆಗೆ ಮದುವೆ ಮಾಡಿಸುವುದಿಲ್ಲ ಎಂದು ತಾಯಿಯಿಂದ ವಾಗ್ದಾನ ಪಡೆದ ಅಧಿಕಾರಿಗಳ ತಂಡ ಬಾಲಕಿಯನ್ನು ಅಭಿನಂದಿಸಿತು. ಆಕೆಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕೊಸಾಂಬೆ ಸೂಚಿಸಿದರು. ನಮ್ಮ ಹಳ್ಳಿಗೆ ಸಹಾಯ ಮಾಡಲು ನಾನು ಪೊಲೀಸ್ ಅಧಿಕಾರಿಯಾಗಲು ಬಯಸುತ್ತೇನೆ ಎಂದು ಬಾಲಕಿ ಹೇಳಿದಳು.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...