ಇದೀಗ ರಾಜ್ಯ ಸರ್ಕಾರ ಕುರಿ ಮತ್ತು ಆಡು ಸಾಕಾಣಿಕೆ ಮಾಡುವ ರೈತರಿಗೆ ಹಾಗೂ ಕುರಿಗಾಹಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಅರ್ಹ ರೈತರು ಹಾಗೂ ಕುರಿಗಾಹಿಗಳಿಂದ ಕುರಿ ಸಾಕಾಣಿಕೆ ಘಟಕ ಸ್ಥಾಪನೆ ಮಾಡಿದರೆ 1.75 ಲಕ್ಷ ರೂಪಾಯಿವರೆಗೆ ಸಬ್ಸಿಡಿ ನೀಡಲಿದೆ.
ರಾಜ್ಯ ಸರ್ಕಾರವು ತನ್ನ ಅಮೃತ ಸ್ವಾಭಿಮಾನಿ ಯೋಜನೆ ಅಡಿಯಲ್ಲಿ ಕುರಿ ಮತ್ತು ಆಡು ಸಾಕಾಣಿಕೆ ಮಾಡುವವರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಅರ್ಹ ರೈತರಿಗೆ ಹಾಗೂ ಕುರಿಗಾಹಿಗಳಿಗೆ ಸಬ್ಸಿಡಿ ರೂಪದಲ್ಲಿ ಕುರಿ ಸಾಕಾಣಿಕೆ ಘಟಕವನ್ನು ಸ್ಥಾಪಿಸಲು ಧನ ಸಹಾಯವನ್ನು ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಇದೇ ತಿಂಗಳ 18 ನೇ ತಾರೀಖು ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ನೀವು ನಿಮ್ಮ ಜಿಲ್ಲೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ನೀಡಲಾಗುವ ಅರ್ಜಿಯನ್ನು ಪಡೆದು,ಅದನ್ನು ಭರ್ತಿ ಮಾಡಿ ಅದರ ಜೊತೆಗೆ ನಿಮ್ಮ ಅಗತ್ಯ ದಾಖಲೆಗಳನ್ನು ಸಲ್ಲಿಸಿ.
ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ವಿದ್ಯಾಧನ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ 55,000 ರೂಪಾಯಿಗಳ ವಿದ್ಯಾರ್ಥಿ ವೇತನ ನೀಡಲು ಇದೀಗ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ರಾಜ್ಯದಲ್ಲಿ ಭುಗಿಲೆದ್ದಿರುವ ರೇಷನ್ ಕಾರ್ಡ್ ಕುರಿತಾದ ಸುಳ್ಳು ಸುದ್ದಿಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಕಟ್ಟು ನಿಟ್ಟಾಗಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಆದರೆ ರಾಜ್ಯ ಸರಕಾರದ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ನಕಲಿ ದಾಖಲಾತಿಗಳನ್ನು ನೀಡಿ ನಕಲಿ ರೇಶನ್ ಕಾರ್ಡ್ (ration card) ಪಡೆದು ಅಕ್ರಮವಾಗಿ ರೇಷನ್ ಪಡೆಯುತ್ತಿದ್ದಾರೆ ಎಂದು ಇದೀಗ ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳನ್ನಾಗಿ ಪರಿವರ್ತಿಸುತ್ತದೆ.
ರೈತರೇ ನೀವೇನಾದರೂ ಕೃಷಿ ಜಮೀನನ್ನು ಹೊಂದಿದ್ದರೆ ನಿಮಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ ತೋಟಗಾರಿಕೆ ಬೆಳೆಗಳಿಗೆ ನೀರು ಉಣಿಸಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.