ಬೆಂಗಳೂರು : ಕರ್ನಾಟಕದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿದೆ. ಇಂದು ನೆವೆಂಬರ್ 23ರಂದು ಶನಿವಾರ ಚುನಾವಣೆ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ.
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಕಾಂಗ್ರೆಸ್ ಪಕ್ಷವು ಹಲವಾರು ವರ್ಷಗಳಿಂದ ಆ ಎರಡು ಪಕ್ಷಗಳ ನಡುವೆ ಯಾರಿಗೂ ಅಧಿಕಾರ ಸಿಗದೇ ತೀವ್ರ ಪೈಪೋಟಿ ನಡೆಸುತ್ತಾ ಬಂದಿದ್ದಾರೆ. ಅಧಿಕಾರ ಸಿಗುತ್ತದೆ ಭಂಡ ಧೈರ್ಯ ಹಾಗೂ ಕುತೂಹಲಕ್ಕೆ ಇಂದು ತೆರೆ ಬೀಳುತ್ತದೆ.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ.
ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ (ಚನ್ನಪಟ್ಟಣ), ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ (ಶಿಗ್ಗಾವಿ), ಬಂಗಾರು ಹನುಮಂತು ವಿರುದ್ಧ ಅನ್ನಪೂರ್ಣ (ಸಂಡೂರು) ಸ್ಪರ್ಧಿಸಿದ್ದಾರೆ. ಮತದಾರರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂದು ಇಂದು ತಿಳಿಯಲಿದೆ.
ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 13 ಕ್ಷೇತ್ರ ಗೆದ್ದಿದ್ದೇವು. ಈ ಸರ್ಕಾರದ ಕೆಲಸದ ಮೇಲೆ ಮತ ಬಂದಿದೆ ಅಂತೇನಿಲ್ಲ. ನಾವು ಉಪ ಚುನಾವಣೆಯಲ್ಲಿ ಅಷ್ಟು ಸ್ಥಾನ ಗೆದ್ದು ಅದಾದ ಮೇಲೆ ಸರ್ಕಾರ ಕಳೆದುಕೊಂಡಿದ್ದೇವು.
ಹೀಗಾಗಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ನಡೆದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಅಭೂತಪೂರ್ವ ಜಯ ಗಳಿಸಿದಕ್ಕೆ ವಿಜೇತ ಅಭ್ಯರ್ಥಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಭಿನಂದನೆ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ತುಕರಾಂ ಮತ್ತು ಯಾಸೀರ್ ಖಾನ್ ಪಠಾಣ್ ವಿಜೇತರಾಗಿದ್ದಾರೆ. ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದ ಕಾರ್ಯವೈಖರಿಯನ್ನು ಸ್ಪಷ್ಟವಾಗಿ ಒಪ್ಪಿ, ಅಛಲವಾದ ವಿಶ್ವಾಸವಿಟ್ಟು ಪಕ್ಷದ ಅಭ್ಯರ್ಥಿಗಳ ಕೈ ಹಿಡಿದಿರುವ ಮತದಾರರಿಗೆ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಬಂದ ಫಲಿತಾಂಶವನ್ನು ಸ್ವೀಕಾರ ಮಾಡುವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುವೆ.
ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ತುಕಾರಾಂ ಪ್ರತಿಕ್ರಿಯೆ ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಳಿಕ ಸಂಸದ ಈ ತುಕಾರಾಂ ಅವರು ಪಕ್ಷದ ಎಲ್ಲ ಹೈಕಮಾಂಡ್ ನಾಯಕರಿಗೂ ಅಭಿನಂದನೆ ತಿಳಿಸಿದ್ದಾರೆ. ಸಿಎಂ, ಡಿಸಿಎಂ ಸೇರಿ ಹಲವು ಸಚಿವರು ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಅನ್ನಪೂರ್ಣ ತುಕಾರಂ ಮೇಲೆ ವಿಶ್ವಾಸವಿಟ್ಟು ಜನರು ಆಶಿರ್ವಾದ ಮಾಡಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
86 ಸಾವಿರಕ್ಕಿಂತಲೂ ಹೆಚ್ಚು ಮತಗಳು ನನಗೆ ಕೊಟ್ಟಿದ್ದಾರೆ. ಚುನಾವಣೆಗಳಲ್ಲಿ ತೀರ್ಪು ತೆಗೆದುಕೊಳ್ಳುವ ಶಕ್ತಿ ಜನರಿಗೆ ಮಾತ್ರ ಇರುವುದು. ಅಂತಿಮವಾಗಿ ಜನರು ತೀರ್ಮಾನ ಮಾಡಿದ್ದಾರೆ. ಅದಕ್ಕೆ ನಾನು ತಲೆ ಬಾಗುತ್ತೇನೆ. ಹಾಗೂ ನನ್ನ ಪರವಾಗಿ ಪ್ರಚಾರ ನಡೆಸಿದ ಕಾರ್ಯಕರ್ತರಿಗೂ ಹಾಗೂ ಬೆಂಬಲ ನೀಡಿದ ಮಾಧ್ಯಮಗಳಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಚನ್ನಪಟ್ಟಣ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸರ್ಕಾರದ ಗ್ಯಾರೆಂಟಿ ಯೋಜನೆ, ಅಭಿವೃದ್ಧಿಗಳು ಕ್ಷೇತ್ರದಲ್ಲಿ ಕೈ ಹಿಡಿದಿವೆ ಎಂದು ಬಳ್ಳಾರಿಯಲ್ಲಿ ಭರ್ಜರಿ ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಗೆಲುವು ಶಿಗ್ಗಾವಿ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ 18ನೇ ಸುತ್ತು ಮತ ಎಣಿಕೆ ಮುಕ್ತಾಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಒಡೆದಿದ್ದಾರೆ. ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ.
ಕಾಂಗ್ರೆಸ್ 13,448 ಅಂತರದಲ್ಲಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಗೆ 86960 ಮತಗಳು ಬಂದರೆ, ಕಾಂಗ್ರೆಸ್ ಅಭ್ಯರ್ಥಿ 1,00,587 ಮತಗಳನ್ನು ದಾಖಲಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಎಂದು ಡಿ ಕೆ ಶಿವಕುಮಾರ ಟ್ವೀಟ್ ಮಾಡಿದ್ದಾರೆ.
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಲವು ಕಾಂಗ್ರೆಸ್ ಪಕ್ಷದ ಸಚಿವ ಜಾರಕಿ ಹೋಳಿ, ಸಿದ್ದರಾಮಯ್ಯ ಹಲವು ನಾಯಕರ ಹೆಸರನ್ನು ಕೂಗುವ ಮೂಲಕ ಸಂಭ್ರಮಿಸಿದರು. ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಮತ್ತೊಂದೆಡೆ ಬಿಜೆಪಿ ವಿರುದ್ಧ ”BYE BYE ಬೊಮ್ಮಾಯಿ” ಎಂದು ತಲೆಕೆಳಗಾದ ಬಿಜೆಪಿ ಬಾವುಟ ಪ್ರದರ್ಶಿಸಿದರು. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ 93,051 ಮತಗಳನ್ನು ಪಡೆಯುವ ಮೂಲಕ, 9,568 ಮತಗಳ ಅಂತದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 83,483 ಮತಗಳನಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಇ. ಅನ್ನಪೂರ್ಣ ಗೆಲುವು ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯೊದೆ.
ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ 78,277 ಮತಗಳು. ಬಿಜೆಪಿಯ ಬಂಗಾರ ಹನುಮಂತ 70038 ಮತಗಳು. ಇ. ಅನ್ನಪೂರ್ಣ ಗೆಲುವು ಕುರಿತು ಅಧಿಕೃತ ಘೋಷಣೆ ಬಾಕಿ.
ಕರ್ನಾಟ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಬಿಜೆಪಿ ಗೆಲ್ಲುವ ಭರವಸೆ ಇತ್ತು. ಸದ್ಯ ನಮ್ಮ ಲೆಕ್ಕಾಚಾರ ತಲೆಕೆಳಗಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದಿದೆ, ನಾವು ಒಂದು ಕಡೆ ಗಲ್ಲುತ್ತೇವೆ ಎಂದು. ನಮಗೆ ಕಠಿಣ ಸವಾಲು ಎನಿಸಿದ್ದು ಸಂಡೂರು ಎಂದು ಅವರು ತಿಳಿಸಿದ್ದಾರೆ.