spot_img
spot_img

ವಿದ್ಯಾರ್ಥಿಗಳಿಗೆ ಸಂವಿಧಾನ ಬೋಧಿಸಿದ ಸಿದ್ದರಾಮಯ್ಯ

spot_img
spot_img

Share post:

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಒಂದು ಗಂಟೆ ಮೇಷ್ಟ್ರಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಪಾಠ ಮಾಡಿದರು.

ಮಕ್ಕಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕರ್ನಾಟಕ ಟ್ರಸ್ಟ್ ಹಮ್ಮಿಕೊಂಡಿದ್ದ ‘ಸಂವಿಧಾನದ‌ ಓದು’ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು. ಬಳಿಕ ಅವರು, ಒಂದು ಗಂಟೆ ಕಾಲ ಸಂವಿಧಾನ ಕುರಿತು ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಹಂಚಿಕೊಂಡರು.

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎಂಬ ಅಂಬೇಡ್ಕರ್ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕವಿ ಕುವೆಂಪು ಮಾತುಗಳನ್ನು ಉಲ್ಲೇಖಿಸಿ ಸಿಎಂ ಪಾಠ ಮುಂದುವರೆಸಿದರು.

ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆಯ ಸಂವಿಧಾನವಾದರೂ ಪರಿಣಾಮ ಕೆಟ್ಟದಾಗಿರುತ್ತದೆ. ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶವಿದೆ.

ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂ ಕೋರ್ಟ್​ಗೆ ಹೋಗಿದ್ದರು. ಆದರೆ ಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು. ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರನ್ನು ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ ಎಂದರು.

ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ. ವಿದ್ಯೆ ಮತ್ತು ಸಂಪತ್ತು ಗಳಿಸುವ ಅವಕಾಶ ಶೂದ್ರರಿಗೆ ಮತ್ತು ಮಹಿಳೆಯರಿಗೆ ಇರಲಿಲ್ಲ. ಹೀಗಾಗಿ ಅಸಮಾನತೆ ಸೃಷ್ಟಿಯಾಯಿತು.

ಪೋಷಕರು ವಿದ್ಯಾವಂತರಾದರೆ ಮಾತ್ರ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡುತ್ತಾರೆ ಎನ್ನುತ್ತಾ, ತಾವು ವಿದ್ಯಾಭ್ಯಾಸದಿಂದ ವಂಚಿತರಾಗಿ ಬಳಿಕ ವಿದ್ಯೆ ಕಲಿತು ವಕೀಲರಾದ ಪ್ರಸಂಗವನ್ನು ವಿವರಿಸಿದರು.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.

ಸಂವಿಧಾನದ್ರೋಹಿಗಳು, ಸಮಾಜದ್ರೋಹಿಗಳು ಜನ ವಿರೋಧಿಗಳೂ ಕೂಡ ಹೌದು. ಜಾತಿ, ಧರ್ಮದ ಹೆಸರಲ್ಲಿ ಒಬ್ಬರನ್ನು ಅಗೌರವದಿಂದ ಕಾಣುವುದು, ಮತ್ತೊಬ್ಬರು ಸಂವಿಧಾನೇತರ ಗೌರವ ನಿರೀಕ್ಷಿಸುವುದು ತಪ್ಪು.

ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಮತ್ತು ಕರ್ಮ ಸಿದ್ದಾಂತವನ್ನು ಧಿಕ್ಕರಿಸಿದ್ದಾರೆ. ಆದರೆ, ಇವತ್ತಿಗೂ ಇದು ಪೂರ್ತಿ ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...