spot_img
spot_img

ಸಿದ್ಧಾರೂಢ ಸ್ವಾಮಿ ಲಕ್ಷ ದೀಪೋತ್ಸವ ಡಿ.1ರಂದು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಡಿಸೆಂಬರ್ 1ರಂದು (ಭಾನುವಾರ) ಲಕ್ಷ ದೀಪೋತ್ಸವ ಇರುವ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತಾದಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಜಿಲ್ಲೆಯೊಳಗೆ, ಪ್ರಮುಖ ಸ್ಥಳ ಹಾಗೂ ಹೊರ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಇರಲಿದೆ. ವಿಶೇಷ ಬಸ್​ಗಳು ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ.

ಸಿದ್ಧಾರೂಢ ಸ್ವಾಮಿ ಮಠದ ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ವ್ಯವಸ್ಥೆ ಇರಲಿದೆ.

ಡಿಸೆಂಬರ್ 1ರಂದು ಸಂಜೆ 6 ಗಂಟೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ. ದೀಪೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರಮುಖ ಸ್ಥಳಗಳು, ನೆರೆಯ ಜಿಲ್ಲೆಗಳು ಮತ್ತು ದೂರದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆಯಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.

ಬೆಳಗಾವಿ, ಶಿರಸಿ, ಕಾರವಾರ, ಮಂಗಳೂರು, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್​​ಗಳು ಗೋಕುಲ ರಸ್ತೆ ನಿಲ್ದಾಣದಿಂದ ಹೊರಡಲಿವೆ. ಹೆಚ್ಚಿನ ಮಾಹಿತಿಗಾಗಿ 7760991682 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಭಕ್ತರು ಹಾಗೂ ಸಾರ್ವಜನಿಕರು ವಿಶೇಷ ಬಸ್​​ಗಳ ಸದುಪಯೋಗ ಮಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ನವಲಗುಂದ, ನರಗುಂದ, ಬಾಗಲಕೋಟೆ, ವಿಜಯಪುರ, ಗದಗ, ರಾಯಚೂರು, ಕೊಪ್ಪಳ, ಹೊಸಪೇಟೆ ಕಡೆಗೆ ಹೋಗುವ ಬಸ್​​ಗಳು ಹೊಸೂರು ನಿಲ್ದಾಣದಿಂದ ಹೊರಡಲಿವೆ. ಹೆಚ್ಚಿನ ಮಾಹಿತಿಗಾಗಿ 7760991662/7760991685 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...