spot_img
spot_img

ಶಾಲೆಯಿಂದ ಬಂದ ಅಣ್ಣನನ್ನು ಕರೆಯಲು ಹೋಗಿ ತಂಗಿಯ ಸಾವು..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ನಡಿಗೆ ಸಿಲುಕಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ತಲೆ ಮೇಲೆ ಶಾಲಾ ವಾಹನ ಹರಿದ ಪರಿಣಾಮ 3 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದ ಘಟನೆ.

ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ವರ್ಷದ ಬಾಲಕಿಯ ಸಾವು. ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆದೊಯ್ಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಖುಷಿ ಬಸ್‌ನಡಿಗೆ ಸಿಲುಕಿದ್ದು, ಆಕೆಯ ತಲೆ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ಶಾಲಾ ವಾಹನ ಚಾಲಕ ಶ್ರೀಶೈಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಖುಷಿಯ ಸಾವಿನಿಂದ ಕುಟುಂಬಸ್ಥರು ತುಂಬಾ ನೊಂದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಾಲ್ವರ ವಿದ್ಯಾರ್ಥಿಗಳಿಗೆ ಕಾಲು ತುಂಡಾಗಿತ್ತು. ಹಲವಾರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...