Belgaum News:
ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಯೋಧ SOLDIER RAVI TALAVARA FUNERAL ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ತಳವಾರ (35) ಅವರ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಾಗಾಲ್ಯಾಂಡ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಿಲ್ಲೆಯ SOLDIER RAVI TALAVARA FUNERAL ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಭಾರತ್ ಮಾತಾ ಕೀ ಜೈ, ರವಿ ಅಮರ್ ರಹೇ ಘೋಷಣೆಗಳು ಮೊಳಗಿದವು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ತಳವಾರ ಅವರ ಅಂತ್ಯಕ್ರಿಯೆ ನೆರವೇರಿತು. ಎರಡು ದಿನಗಳ ಹಿಂದೆ ರಸ್ತೆ ಮಾರ್ಗವಾಗಿ ಹೊರಟಿದ್ದ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರವಿ ಸೇರಿ ಮೂವರು ಯೋಧರು ಮೃತರಾಗಿದ್ದರು. ರವಿ ತಳವಾರ ಅವರು ನಾಗಾಲ್ಯಾಂಡ್ ರೈಫಲ್ಸ್‌ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಇದನ್ನು ಓದಿರಿ : CM SIDDARAMAIAH : ಕಂಬಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಮಳೆ ಸುರಿಸಿ ಭರ್ಜರಿ ಸ್ವಾಗತ