spot_img
spot_img

SPECIAL TRAIN SERVICE : ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು ಸೇವೆ ಆರಂಭ

spot_img
spot_img

Share post:

Hubli News:

ಎಸ್​ಎಸ್​ಎಸ್​ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ ನೈರುತ್ಯ ರೈಲ್ವೆ ಮೂರು ಟ್ರಿಪ್​ ವಿಶೇಷ ರೈಲುಗಳನ್ನು ಓಡಿಸಲಿದೆ.

ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ.

ರೈಲು ಸಂಖ್ಯೆ 07367/07368 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್​ ವಿಶೇಷ (3 ಟ್ರಿಪ್​​ಗಳು)

ರೈಲು ಸಂಖ್ಯೆ 07367 ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ಎಕ್ಸ್​ಪ್ರೆಸ್​ ವಿಶೇಷ ರೈಲು ಡಿಸೆಂಬರ್ 30, ಜನವರಿ 6 ಮತ್ತು 13, 2025ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 3:20ಕ್ಕೆ ಕನ್ಯಾಕುಮಾರಿ ತಲುಪಲಿದೆ.

ರೈಲು ಸಂಖ್ಯೆ 07368 ಕನ್ಯಾಕುಮಾರಿ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್​ಪ್ರೆಸ್ ವಿಶೇಷ ರೈಲು ಡಿಸೆಂಬರ್ 31, 2024 ಮತ್ತು ಜನವರಿ 7 ಮತ್ತು 14, 2025ರಂದು ಸಂಜೆ 7:10ಕ್ಕೆ ಕನ್ಯಾಕುಮಾರಿಯಿಂದ ಹೊರಟು ಮರುದಿನ ಸಂಜೆ 7:35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

Where to stop?:

“ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯ ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್​​ಸೈಟ್​ಗೆ  ಭೇಟಿ ನೀಡಿ ಅಥವಾ 139 ನಂಬರ್​ಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು” ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎರಡೂ ಮಾರ್ಗಗಳಲ್ಲಿ ಈ ರೈಲು ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು ಜಂಕ್ಷನ್, ಅರಸೀಕೆರೆ ಜಂಕ್ಷನ್, ತುಮಕೂರು, ಯಶವಂತಪುರ ಜಂಕ್ಷನ್, ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರ್, ದಿಂಡಿಗಲ್ ಜಂಕ್ಷನ್, ಮಧುರೈ ಜಂಕ್ಷನ್, ವಿರುದುನಗರ ಜಂಕ್ಷನ್, ಸತೂರ್, ಕೋವಿಲ್ಪಟ್ಟಿ, ತಿರುನೆಲ್ವೇಲಿ ಜಂಕ್ಷನ್, ವಲ್ಲಿಯೂರ್ ಮತ್ತು ನಾಗರಕೋಯಿಲ್ ಜಂಕ್ಷನ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...