spot_img
spot_img

ಶಬರಿಮಲೆ ದರ್ಶನಕ್ಕೆ ಕರ್ನಾಟಕದಲ್ಲಿ ವಿಶೇಷ ರೈಲುಗಳು ಆರಂಭ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಶಬರಿಮಲೆ ಸೀಸನ್‌ಗೆ ಕರ್ನಾಟಕ 6 ಜಿಲ್ಲೆಗಳ ಮೂಲಕ ಸಂಚರಿಸುವ ವಿಶೇಷ ರೈಲು ಆರಂಭ ಮಾಡಲಾಗುತ್ತಿದೆ. ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಹಾಗೂ ಬೆಂಗಳೂರು ಜಿಲ್ಲೆಗಳ ಭಕ್ತರಿಗೆ ಅನುಕೂಲವಾಗಲಿದೆ. ಈ ವಿಶೇಷ ರೈಲುಗಳ ವೇಳಾಪಟ್ಟಿ ಇಲ್ಲಿದೆ.

ಶಬರಿಮಲೆ ಸೀಸನ್‌ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಕರ್ನಾಟಕದ 6 ಪ್ರಮುಖ ಜಿಲ್ಲೆಗಳ ಮೂಲಕ ಹಾದುಹೋಗುವ ವಿಶೇಷ ರೈಲನ್ನು ಆರಂಭಿಸಲಾಗುತ್ತಿದೆ.

ಈ ಹುಬ್ಬಳ್ಳಿ – ಕೊಟ್ಟಾಯಂ ವಿಶೇಷ ರೈಲು ನವೆಂಬರ್‌ 19 ರಿಂದ ಮಕರ ಜ್ಯೋತಿಯ ಜನವರಿ 14ರ ತನಕ 9 ಟ್ರಿಪ್‌ ಸಂಚಾರ ಮಾಡಲಿದೆ. ಈಗಾಗಲೇ ಶಬರಿಮಲೆಯಲ್ಲಿ ಮಂಡಲ ಮಹೋತ್ಸವ ಆರಂಭಗೊಂಡಿದೆ.

ಈ ಹಿನ್ನೆಲೆಯಲ್ಲಿಅಯ್ಯಪ್ಪ ಭಕ್ತರಿಗೆ ಶಬರಿಮಲೆ ದರ್ಶನಕ್ಕಾಗಿ ಆಗಮಿಸಲು ಹಾಗೂ ದರ್ಶನ ಪಡೆದು ತೆರಳುವುದಕ್ಕಾಗಿ ವಿಶೇಷ ರೈಲು ಆರಂಭಿಸಲಾಗುತ್ತಿದೆ.

ಎಸ್‌ಎಸ್‌ಎಸ್‌ ಹುಬ್ಬಳ್ಳಿ- ಕೊಟ್ಟಾಯಂ-ಎಸ್‌ಎಸ್‌ಎಸ್‌ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ರೈಲು (07371) ಸಂಚಾರ ನಡೆಸಲಿದೆ. ನ. 19ರಿಂದ ಮಕರ ಜ್ಯೋತಿಯ ಜನವರಿ 14ರ ತನಕ ಒಂಭತ್ತು ವಿಶೇಷ ಸೇವೆಗಳು ಇರುತ್ತವೆ.

ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಹಾಗೂ ಬೆಂಗಳೂರು ಸೇರಿ 6 ಜಿಲ್ಲೆಯ ಭಕ್ತರಿಗೆ ಅನುಕೂಲವಾಗಲಿದೆ. ಭಕ್ತರು ಕೊಟ್ಟಾಯಂಗೆ ಇಳಿದು ಅಲ್ಲಿಂದ ಬಸ್‌ ಅಥವಾ ಖಾಸಗಿ ವಾಹನಗಳ ಮೂಲಕ ಸಂಚಾರ ನಡೆಸಬಹುದು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲು ಎಸ್‌ಎಸ್‌ಎಸ್‌ ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಸಂಜೆ 3.15ಕ್ಕೆ ಹೊರಟು ಮತ್ತು ಮರುದಿನ ಮಧ್ಯಾಹ್ನ 12 ಗಂಟೆಗೆ ಕೊಟ್ಟಾಯಂ ತಲುಪಲಿದೆ. ಹಿಂದಿರುಗುವ ರೈಲು ಬುಧವಾರ ಸಂಜೆ 3ಗಂಟೆಗೆ ಕೊಟ್ಟಾಯಂನಿಂದ ಹೊರಟು ಮರುದಿನ ಮಧ್ಯಾಹ್ನ ಹುಬ್ಬಳ್ಳಿ ತಲುಪಲಿದೆ.

ಈ ರೈಲು ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ, ಈರೋಡ್‌, ತಿರುಪುರ್‌, ಪೊದನೂರು, ಪಾಲಕ್ಕಾಡ್‌, ತ್ರಿಶೂರ್‌, ಆಲುವಾ, ಎರ್ನಾಕುಲಂ ಟೌನ್‌, ಏಟುಮನೂರು ಎಂಬೀ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ರೈಲು ಸಂಖ್ಯೆ 06083 ಕೊಚುವೇಲಿ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಕೊಚುವೇಲಿ ನಿಲ್ದಾಣದಿಂದ ನವೆಂಬರ್ 12 ರಿಂದ ಆರಂಭವಾಗಿದೆ. ಜನವರಿ 28 ವರಗೆ ಸಂಚಾರ ನಡೆಸಲಿದೆ. ಪ್ರತಿ ಮಂಗಳವಾರ ಸಂಜೆ 6:05 ಗಂಟೆಗೆ ಹೊರಟು, ಮರುದಿನ ದಿನ ಬೆಳಿಗ್ಗೆ 10:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ನವೆಂಬರ್ 13 ರಿಂದ ಆರಂಭವಾಗಿದೆ. ಜನವರಿ 29 ರವರೆಗೆ ಸಂಚಾರ ನಡೆಸಲಿದೆ. ಪ್ರತಿ ಬುಧವಾರ ಮಧ್ಯಾಹ್ನ 12:45 ಗಂಟೆಗೆ ಹೊರಟು, ಮರುದಿನ ದಿನ ಬೆಳಿಗ್ಗೆ 06:45 ಗಂಟೆಗೆ ಕೊಚುವೇಲಿ ತಲುಪಲಿದೆ.

ಈ ರೈಲು ಎರಡು ದಿಕ್ಕಿನ ಮಾರ್ಗದಲ್ಲಿ, ಕೊಲ್ಲಮ್, ಕಾಯಂಕುಳಂ, ಪಾಲಕಾಡ್, ಪೊದನೂರ್, ಈರೋಡ್, ಸೇಲಂ, ಜೋಲಾರ್ ಪೆಟ್ಟಾಯ್, ಜಂಕ್ಷನ್ ಗಳ ನಡುವೆ ಸಂಚರಿಸಲಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...