ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಕ್ರೀಡಾ ತರಬೇತಿ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ವಿವಿಧ ಕ್ರೀಡೆಗಳ ಕುರಿತು ಇಂಗ್ಲಿಷ್ ಪ್ರೀಮಿಯರ್ ಲೀಗ್ ಸ್ಪೋರ್ಟ್ಸ್ ನಿಂದ ತರಬೇತಿ ನೀಡಲಾಗುವುದು.
ಸರ್ಕಾರಿ ಶಾಲೆಯ ಮಕ್ಕಳ ಕ್ರೀಡಾ ಸಾಮರ್ಥ್ಯ ಹೆಚ್ಚಿಸಲು, ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸುವಲ್ಲಿ ಸಹಕಾರ ಪಡೆಯಲು ಆಪರೇಶನಲ್ ಅಲಯನ್ಸ್ ಒಪ್ಪಂದಕ್ಕೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಕೆ.ವಿ. ತ್ರಿಲೋಕಚಂದ್ರ, ಬ್ರಿಟಿಷ್ ಕೌನ್ಸಿಲ್ ನ ದಕ್ಷಿಣ ಭಾರತ ನಿರ್ದೇಶಕಿ ಜನಕ ಪುಷ್ಪನಾಥನ್ ಸಹಿ ಹಾಕಿದ್ದಾರೆ.
ಈ ಒಪ್ಪಂದದ ಬಳಿಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರೀಮಿಯರ್ ಲೀಗ್ ಪ್ರೈಮರಿ ಸ್ಟಾರ್ಸ್ ಪ್ರಾಜೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮೊದಲ ಹಂತದಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಕರಿಗೆ ಕ್ರೀಡಾ ಮತ್ತು ಜೀವನ ಕೌಶಲ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕ್ರೀಡೆ ಕಬಡ್ಡಿ, ಕೋ ಕೋ ಇತರೆ ಪ್ರಾಚೀನ ಕ್ರೀಡೆಗಳನ್ನು ಫುಟ್ ಬಾಲ್ ನಂತೆ ಉಳಿಸಿ ಬೆಳೆಸಬೇಕು. ಆರು ವರ್ಷ ವಯಸ್ಸಿನಿಂದಲೇ ಶಾಲಾ ಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಶಿಕ್ಷಕರಿಗೂ ತರಬೇತಿ ನೀಡಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now