spot_img
spot_img

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನಲ್ಲಿ ಶಿಕ್ಷಕರು, ಉಪನ್ಯಾಸಕರ ನೇಮಕ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಶ್ರೀ ಆದಿಚುಂಚನಗಿರಿ ಕ್ಷೇತ್ರ: ಮಂಡ್ಯ ಜಿಲ್ಲೆ ವತಿಯಿಂದ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ ಗ್ರೇಡ್-2 ಸಹಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಅನುದಾನರಹಿತ ಹಾಗೂ ಬ್ಯಾಕ್‌ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಹ ವಿದ್ಯಾರ್ಹತೆ ಮತ್ತು ಅರ್ಹ ವಯೋಮಾನ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು ಹುದ್ದೆಗಳೂ ಹಾಗೂ ಉಪನ್ಯಾಸಕರ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಲು, ಶುಲ್ಕ ಪಾವತಿಸಬೇಕು.

21 ದಿನದೊಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಸರ್ಕಾರದ ದಿನಾಂಕ ಸೆಪ್ಟೆಂಬರ್‌ 29 2016ರ ಆದೇಶದಂತೆ ವಿದ್ಯಾರ್ಹತೆ ಹೊಂದಿರಬೇಕು ಮತ್ತು ನಿಗಧಿತ ವಯೋಮಾನದಲ್ಲಿರಬೇಕು ಎಂಬ ಷರತ್ತಿಗೆ ಒಳಪಟ್ಟಿದೆ. (ಪ್ರೌಢಶಾಲಾ ಗ್ರೇಡ್‌ ಸಹಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ) ಅರ್ಜಿಯನ್ನು ಆಡಳಿತಾಧಿಕಾರಿಗಳ ಕಛೇರಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶ್ರೀ ಕಾಲಭೈರವೇಶ್ವರ ಸಂಸ್ಕೃತ ಮಹಾವಿದ್ಯಾಲಯದ ಕಟ್ಟಡ, ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಗಮಂಗಲ ತಾ||, ಮಂಡ್ಯ ಜಿಲ್ಲೆ, ಈ ವಿಳಾಸಕ್ಕೆ ನೋಂದಣಿ ಅಂಚೆ ಮುಖೇನ ಸ್ವಯಂ ದೃಢೀಕೃತ ಅಂಕಪಟ್ಟಿಯ ದಾಖಲೆಗಳೊಂದಿಗೆ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ಸಲ್ಲಿಸುವುದು.

ನಿಗಧಿತ ಅವಧಿ ಮೀರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಜೊತೆಯಲ್ಲಿ ಸ್ವ-ವಿಳಾಸ ಬರೆದ ಒಂದು ಲಕೋಟೆಯನ್ನು ಲಗತ್ತಿಸುವುದು. ಅರ್ಜಿಯ ಒಂದು ಪ್ರತಿಯನ್ನು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆ) ಸಾ.ಶಿ ಇಲಾಖೆ/ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಇವರಿಗೆ ಮಾಹಿತಿಗಾಗಿ ಸಲ್ಲಿಸುವುದು.

ಪರಿಶಿಷ್ಟ ಜಾತಿ (S.C) ಮತ್ತು ಪರಿಶಿಷ್ಟ ಪಂಗಡ (S.T) ಅಭ್ಯರ್ಥಿಗಳು ಸಂಬಂಧಿಸಿದ ತಹಶಿಲ್ದಾರ್‌ರವರಿಂದ ನಿಗಧಿತ ನಮೂನೆಯಲ್ಲಿ ಜಾತಿ ಪ್ರಮಾಣ ಪತ್ರವನ್ನು ಪಡೆದು ಸ್ವಯಂ ದೃಢೀಕೃತ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯ ಜೊತೆಯಲ್ಲಿ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿಗಳು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಗಮಂಗಲ ತಾ, ಮಂಡ್ಯ ಜಿಲ್ಲೆ, ಇವರ ಪದನಾಮದಲ್ಲಿ ರೂ.500/-ಗಳ ಡಿ.ಡಿ ತೆಗೆದು ಲಗತ್ತಿಸಬೇಕು. (ಯಾವುದಾದರೂ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಮಾತ್ರ ಡಿಡಿ ತೆಗೆಯುವುದು). ರೂ.50/-ರ ಅರ್ಜಿ ಶುಲ್ಕ ಪಾವತಿ ಮಾಡಿ ಆಡಳಿತಾಧಿಕಾರಿಗಳವರ ಕಛೇರಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶ್ರೀ ಆದಿಚುಂಚನಗಿರಿ ಕ್ಷೇತ್ರ ನಾಗಮಂಗಲ ತಾ, ಮಂಡ್ಯ ಜಿಲ್ಲೆ, ಇಲ್ಲಿ ಅರ್ಜಿಯನ್ನು ಪಡೆಯುವುದು. (ರೂ.50/-ರ ಡಿಡಿ ಮತ್ತು ಸ್ವ-ವಿಳಾಸದೊಂದಿಗೆ ಲಕೋಟೆಯನ್ನು ಅಂಚೆ ಮೂಲಕ ಕಳುಹಿಸಿ ಅರ್ಜಿಯನ್ನು ಅಂಚೆ ಮೂಲಕವೂ ಸಹ ಪಡೆಯಬಹುದಾಗಿದೆ).

ಅರ್ಜಿಯ ಜೊತೆಯಲ್ಲಿ ವಿದ್ಯಾರ್ಹತೆಯ ಬಗ್ಗೆ ಅಂದರೆ ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ(ಉಪನ್ಯಾಸಕರ ಹುದ್ದೆಗೆ), ಬಿ.ಇಡಿ ಅಂಕಪಟ್ಟಿ, ಘಟಿಕೋತ್ಸವದ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳನ್ನು ಸ್ವಯಂ ದೃಢೀಕರಣದೊಂದಿಗೆ ಸಲ್ಲಿಸುವುದು.

ಸರ್ಕಾರಿ ಆದೇಶದ ಸಂಖ್ಯೆ ಇಡಿ 60 ಟಿಪಿಯು 2010 ಬೆಂಗಳೂರು ಅಕ್ಟೋಬರ್‌ 29 2011ರಂತೆ ವಿದ್ಯಾರ್ಹತೆ ಮತ್ತು ಚಾಲ್ತಿ ಸರ್ಕಾರಿ ಆದೇಶದಂತೆ ನಿಗಧಿತ ವಯೋಮಾನ ಹೊಂದಿರಬೇಕು. ಬ್ಯಾಕ್‌ಲಾಗ್ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶದಂತೆ ಶಿಕ್ಷಕರ ಹುದ್ದೆಯನ್ನು ಮತ್ತು ಉಪನ್ಯಾಸಕರ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...