Prayagraj (Uttar Pradesh)/Belagavi News:
STAMPEDE AT MAHA KUMBH ವೇಳೆ ನೂಕು ನುಗ್ಗಲು ಉಂಟಾದಾಗ ಸ್ನಾನಕ್ಕೆ ಸೇರಿದ್ದ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶೂ, ಚಪ್ಪಲಿ, ಬಟ್ಟೆಗಳು ಘಟನೆಯ ಗಂಭೀರತೆಯನ್ನು ಸೂಚಿಸುತ್ತಿವೆ.
ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಇಂದು ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕೆ ತೆರಳುವ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದ್ದು, ಹಲವು ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. STAMPEDE AT MAHA KUMBH ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ STAMPEDE AT MAHA KUMBH 15 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ, ಹಲವಾರು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ನಾಪತ್ತೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.
Belagavi devotees in trouble:
ಮಾತನಾಡಿದ ಬೆಳಗಾವಿಯ ಮಹಿಳೆ ಸರೋಜಿನಿ ಅವರು, “ನಾವು ಎರಡು ಬಸ್ಗಳಲ್ಲಿ 60 ಜನ ಮಹಾಕುಂಭ ಮೇಳಕ್ಕೆ ಬಂದಿದ್ದೇವೆ. ಇದ್ದಕ್ಕಿದ್ದಂತೆ ಕಾಲ್ತುಳಿತ ಉಂಟಾಯಿತು. ನಮ್ಮ ಜೊತೆ ಬಂದರಲ್ಲಿ ನಾಲ್ಕೈದು ಜನ ಕಾಣುತ್ತಿಲ್ಲ. ನಮ್ಮದು ಒಂಭತ್ತು ಜನರ ಗುಂಪು ಇತ್ತು. STAMPEDE AT MAHA KUMBH ಇದರಲ್ಲಿ ಮೂರ್ನಾಲ್ಕು ಜನರು ಇಲ್ಲೇ ಇದ್ದಾರೆ. ಉಳಿದವರು ಕಾಣುತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಯಾಗರಾಜ್ನಲ್ಲಿ ಈಗಾಗಲೇ ಮಕರ ಸಂಕ್ರಾಂತಿ, ಪೌರ್ಣಿಮೆ ಸೇರಿದಂತೆ ಮಹತ್ವದ ದಿನಗಳಂದು ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಇಂದು ಮೌನಿ ಅಮಾವಾಸ್ಯೆಯಾಗಿದ್ದು ಮತ್ತೊಂದು ಪವಿತ್ರ ಸ್ನಾನಕ್ಕೆ ಪ್ರಮುಖವಾದ ದಿನ. ಈ ದಿನ 10 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ನಡೆಸುವ ಸಾಧ್ಯತೆ ಇದೆ ಎಂದು ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿದೆ.
ಈ ನಿಟ್ಟಿನಲ್ಲಿ ಹೆಚ್ವಿನ ಭದ್ರತಾ ಕ್ರಮಗಳನ್ನೂ ಸಹ ತೆಗೆದುಕೊಳ್ಳಲಾಗಿದೆ. ಕಾಲ್ತುಳಿತದ ವೇಳೆ ಕರ್ನಾಟಕದ ಬೆಳಗಾವಿಯಿಂದ ತೆರಳಿದ್ದ ಕೆಲವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿರಿ : KASHMIRS EARLY BLOOM : ವಸಂತಕ್ಕೆ ಮುನ್ನವೇ ಅರಳುತ್ತಿರುವ ಹೂವುಗಳು