ಬೆಂಗಳೂರು: ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳ ನೀಡಲು ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ಏಜೆನ್ಸಿಗೆ ಗುತ್ತಿಗೆ ನೀಡಲಾಗಿ ಶೂಗಳನ್ನು ಪೂರೈಸಲು ಕಂಪನಿಗೆ ತಿಳಿಸಲಾಗಿತ್ತು. ಸರಕಾರಿ ಶಾಲೆಗಳು ಆರಂಭವಾಗಿ ಅರ್ಧ ವರ್ಷವೇ ಕಳೆದರೂ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಗಿಲ್ಲ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳು ಆರಂಭವಾಗಿ ಅರ್ಧ ವರ್ಷವೇ ಕಳೆದರೂ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಇಲ್ಲ.
ಆಗಸ್ಟ್ 19 ರಂದು ವರ್ಕ್ ಆರ್ಡರ್ ನೀಡಲಾಗಿತ್ತು ಅಕ್ಟೊಬರ್ ೪ ರೊಳಗೆ ಪೂರೈಸಲು ತಿಳಿಸಲಾಗಿತ್ತು. ಒಪ್ಪಂದದಂತೆ ಕೆಲಸ ನಿರ್ವಹಿಸವಲ್ಲಿ ಸಂಸ್ಥೆ ವಿಫಲವಾಗಿದೆ.
ಈ ಹಿನ್ನೆಲೆಯಲ್ಲಿ ಪಾಲಿಕೆಯ ಶಿಕ್ಷಣ ಇಲಾಖೆಯು ವಿವರಣೆಯೊಂದಿಗೆ ಒಟ್ಟು ಮೊತ್ತದಿಂದ ಶೇ 2ರಷ್ಟು ದಂಡವನ್ನು ಪಾವತಿಸುವಂತೆ ಗುತ್ತಿಗೆ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು, ಸೂಚಿಸಿದೆ ಎಂದು ತಿಳಿದುಬಂದಿದೆ.
ಒಂದರಿಂದ 2ನೇ ತರಗತಿವರೆಗೆ 24,000 ವಿದ್ಯಾರ್ಥಿಗಳಿದ್ದು, ಎಲ್ಲರೂ ಶೂ, ಸಾಕ್ಸ್ ಗಳಿಂದ ವಂಚಿತರಾಗಿದ್ದಾರೆ. ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡುವಲ್ಲಿ ಸಂಸ್ಥೆ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಬೆಳವಣಿಗೆಯನ್ನು ಬಿಬಿಎಂಪಿ ವಿಶೇಷ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದು, ಗುತ್ತಿಗೆ ರದ್ದು ಪಡಿಸುವ ಎಚ್ಚರಿಕೆ ನೀಡಿದ್ದಾರೆ.
ಸಂಸ್ಥೆಯೊಂದಿಗೆ ಗುತ್ತಿಗೆ ರದ್ದುಗೊಳಿಸಿದರೆ, ಶೀಘ್ರದಲ್ಲೇ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪಾಲಿಕೆಯು ಮತ್ತೊಂದು ಸಂಸ್ಥೆಯನ್ನು ಸಂಪರ್ಕಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.