ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗೆ ಶಿಕ್ಷಣ ಇಲಾಖೆಯು ವೇಳಾಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ರಾಜ್ಯಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು Q: 26-12-2024 ಮತ್ತು 27-12-2024ರಂದು ಶೀವಮೊಗ್ಗ ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಅನುದಾನವನ್ನು ಉಪನಿರ್ದೇಶಕರು(ಆಡಳಿತ), ಶಾ.ಶಿ.ಇ. ಶಿವಮೊಗ್ಗ ಜಿಲ್ಲೆ ಇವರಿಗೆ ಅನುಬಂಧ-1(ಬಿ) ರಂತೆ ಬಿಡುಗಡೆ ಮಾಡಿದೆ.
ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರ ವಿವರಗಳನ್ನು ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಶಾ.ಶಿ.ಇ. ರವರು ಉಲ್ಲೇಖ-1ರ ಸುತ್ತೋಲೆಯಲ್ಲಿ ಲಗತ್ತಿಸಿರುವ ಅನುಬಂಧ-2(ಎ) ಹಾಗೂ 2(ಬಿ) ನಮೂನೆಯಲ್ಲಿ ಭರ್ತಿಮಾಡಿ ಉಪನಿರ್ದೇಶಕರು(ಆಡಳಿತ), ಶಾ.ಶಿ.ಇ. ಶಿವಮೊಗ್ಗ ರವರಿಗೆ ಸಲ್ಲಿಸುವಂತೆ ತಿಳಿಸಿದೆ. ಉಳಿದ ಎಲ್ಲಾ ನಿಯಮಗಳನ್ನು ಉಲ್ಲೇಖದಲ್ಲಿನ ಸುತ್ತೋಲೆಯಲ್ಲಿ ತಿಳಿಸಿರುವಂತೆ ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದೆ.