ನವದೆಹಲಿ : 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ 81 ಕೋಟಿ ಜನರಿಗೆ ಉಚಿತ ಅಥವಾ ಸಬ್ಸಿಡಿ ರೂಪದಲ್ಲಿ ಪಡಿತರವನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದಾಗ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿ, ಉಚಿತ ಪಡಿತರ ನೀಡುವ ಬದಲು ಉದ್ಯೋಗಗಳನ್ನು ಸೃಷ್ಟಿಸಿ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಒಂದೆಡೆ ಸರ್ಕಾರಗಳು ಉಚಿತ, ಉಚಿತ ಎನ್ನುತ್ತಿದ್ದರೆ, ಮತ್ತೊಂದೆಡೆ ಉಚಿತ ಎನ್ನುವ ಸರ್ಕಾರಕ್ಕೆ ಚಾಟಿ ಬಿಸಿರುವ ಸರ್ವೋಚ್ಚ ನ್ಯಾಯಾಲಯವು (Supreme Court), ಉಚಿತ ಉಚಿತ ಪಡಿತರ (Free Ration) ಬದಲು ಉದ್ಯೋಗ (Employment) ಸೃಷ್ಠಿಸಿ ಎಂದು ತಾಕಿತ್ತು ಮಾಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ (National Food Security Act) ಉಚಿತ ಪಡಿತರವನ್ನು ಒದಗಿಸುವ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಉದ್ಯೋಗಗಳನ್ನು ಸೃಷ್ಟಿಸುವ ಅಗತ್ಯವನ್ನು ಒತ್ತಿಹೇಳುವಾಗ “ಉಚಿತ” ವನ್ನು ಎಷ್ಟು ಸಮಯದವರೆಗೆ ಒದಗಿಸಬಹುದು ಎಂದು ಕೇಂದ್ರ ಸರ್ಕಾರವನ್ನು ಕೇಳಿದೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುತ್ತಿರುವ ವಿಷಯದ ಕುರಿತು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 9) “ಉಚಿತವಾಗಿ ಎಷ್ಟು ದಿನಗಳ ಕಾಲ ಪಡಿತರವನ್ನು ನೀಡುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಮನಮೋಹನ್ ಅವರ ಪೀಠವು ಕೇಂದ್ರ ಸರ್ಕಾರವನ್ನು ಕೇಳಿದಾಗ, ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ದೇಶದಾದ್ಯಂತ 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರವು 81 ಕೋಟಿ ಜನರಿಗೆ ಪಡಿತರವನ್ನು ಉಚಿತ ಅಥವಾ ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತಿದೆ ಎಂದಿದೆ. ಇದರೊಂದಿಗೆ ಸರ್ಕಾರದ ಉತ್ತರವನ್ನು ನೋಡಿ ಆಶ್ಚರ್ಯವಾಗಿದ್ದು, ಕೇವಲ “ತೆರಿಗೆದಾರರು ಮಾತ್ರ ಉಚಿತ ಪಡಿತರದಿಂದ ಹೊರಗುಳಿದಿದ್ದಾರೆ” ಎಂದು ಪೀಠವು ತಿಳಿಸಿದೆ.
2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಕ್ಷಣದ ಪರಿಹಾರವನ್ನು ಒದಗಿಸಲು ಪ್ರಾರಂಭಿಸಿದ ವಲಸೆ ಕಾರ್ಮಿಕರ ಸಮಸ್ಯೆಗಳು ಮತ್ತು ದುಃಖಗಳ ಕುರಿತ ಸುಪ್ರೀಂ ಕೋರ್ಟ್ನ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಎನ್‌ಜಿಒಗಳ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು, ‘ಇ-ಶ್ರಮ್’ ಪೋರ್ಟಲ್‌ನಲ್ಲಿ ನೋಂದಾಯಿಸಿದ ಎಲ್ಲಾ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡಲು ನಿರ್ದೇಶನಗಳನ್ನು ನೀಡಬೇಕಾಗಿದೆ ಎಂದು ಕೇಳಿದರು.
ಜನರನ್ನು ಸಮಾಧಾನಪಡಿಸಲು, ರಾಜ್ಯಗಳು ಪಡಿತರ ಚೀಟಿಗಳನ್ನು ನೀಡಬಹುದು ಏಕೆಂದರೆ ಉಚಿತ ಪಡಿತರವನ್ನು ಒದಗಿಸುವ ಹೊಣೆಗಾರಿಕೆ ಕೇಂದ್ರದ ಮೇಲಿದೆ ಎಂದು ತಿಳಿದಿರುವ ರಾಜ್ಯಗಳು ವಲಸೆ ಕಾರ್ಮಿಕರಿಗೆ ಉಚಿತ ಪಡಿತರದ ವಿಚಾರಣೆಯ ಸಂದರ್ಭದಲ್ಲಿ ಒಬ್ಬರೂ ನ್ಯಾಯಾಲಯದ ಒಳಗೆ ಕಾಣುವುದಿಲ್ಲ. ಎಲ್ಲರೂ ಓಡಿಹೋಗುತ್ತಾರೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.
ವಲಸೆ ಕಾರ್ಮಿಕರಿಗೆ ಸ್ಥಳೀಯ ಪಡಿತರ ಚೀಟಿ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನ್ಯಾಯಾಲಯವು ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಿದೆ, ಇದರಿಂದ ಅವರು ಕೇಂದ್ರವು ನೀಡುವ ಉಚಿತ ಪಡಿತರವನ್ನು ಪಡೆಯಬಹುದು ಎಂದು ಭೂಷಣ್ ಹೇಳಿದರು. ಇತ್ತೀಚಿನ ಆದೇಶದಲ್ಲಿ ಪಡಿತರ ಚೀಟಿ ಇಲ್ಲದಿದ್ದರೂ ಪೋರ್ಟಲ್‌ನಲ್ಲಿ ನೋಂದಣಿಯಾಗಿರುವವರಿಗೂ ಉಚಿತ ಪಡಿತರ ನೀಡಬೇಕೆಂದು ಹೇಳಲಾಗಿದೆ ಎಂದು ಹೇಳಿದರು.
ಜೂನ್ 29, 2021 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಕಷ್ಟದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿಗಳನ್ನು ನೀಡುವುದು ಸೇರಿದಂತೆ ಕಲ್ಯಾಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನ್ಯಾಯಾಲಯವು ನೀಡಿತ್ತು. ಆದರಂತೆ ಅಂದಿನಿಂದ ಪೋರ್ಟಲ್ ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಹಲವು ಕಲ್ಯಾಣ ಪ್ರಯೋಜನಗಳು ಮತ್ತು ಸಾಮಾಜಿಕ ಭದ್ರತಾ ಕ್ರಮಗಳನ್ನು ತಲುಪಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ನೀಡುತ್ತಿದೆ.
2021 ರಲ್ಲಿ ಜನಗಣತಿ ನಡೆಸಿದ್ದರೆ ತೊಂದರೆ ಯಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರವು ಪ್ರಸ್ತುತ 2011 ರ ಜನಗಣತಿಯ ದತ್ತಾಂಶವನ್ನು ಅವಲಂಬಿಸಿರುವುದರಿಂದ ವಲಸೆ ಕಾರ್ಮಿಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ ಎಂದು ಭೂಷಣ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸದ ಪೀಠವು “ನಾವು ಕೇಂದ್ರ ಮತ್ತು ರಾಜ್ಯಗಳ ನಡುವೆ ವಿಭಜನೆಯನ್ನು ಸೃಷ್ಟಿಸಬಾರದು, ಇಲ್ಲದಿದ್ದರೆ ಅದು ತುಂಬಾ ಕಷ್ಟಕರವಾಗಿರುತ್ತದೆ” ಎಂದು ಹೇಳಿ, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮೂಂದುಡಿತ್ತು.