2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ, ಸಬ್ ಇನ್ಸ್‌ಕ್ಟರ್ (PSI)/ಪ್ಯಾರಾ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಯಾವುದೇ ಪದವಿ / ತತ್ಸಮಾನ ವಿದ್ಯಾರ್ಹತೆ ಪಡೆದು ಪೊಲೀಸ್ ಇಲಾಖೆಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ, ಪ್ಯಾರಾ ಮಿಲಿಟರಿ ಹುದ್ದೆಗಳಿಗೆ ಸೇರಬೇಕು.
ಉಚಿತ ವಸತಿಯುತ ಪರೀಕ್ಷಾ ಪೂರ್ವ ತರಬೇತಿ ಪಡೆಯುವ ಅವಕಾಶವು 75 ದಿನಗಳ ಕಾಲ ಪರೀಕ್ಷೆಗಳಿಗೆ ಕೋಚಿಂಗ್ ನೀಡಲಾಗುತ್ತದೆ. ಕರ್ನಾಟಕ ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡುವ ಕಾರ್ಯಕ್ರಮ ಇದೆ.
ಪರೀಕ್ಷೆ ನಡೆಸದೇ ಅಭ್ಯರ್ಥಿಗಳನ್ನು ಪದವಿ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 32 ವರ್ಷ ವಯಸ್ಸು ಮೀರಿರಬಾರದು.
ಸೇವಾನಿರತವಾಗಿರುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪದವಿ ಅಥವಾ ತತ್ಸಮಾನ (ಪಿಯುಸಿ ನಂತರ ಪದವಿಗೆ ಸಮನಾದ ಯಾವುದೇ ಶಿಕ್ಷಣ) ಪಾಸಾಗಿರಬೇಕು.
ಸೇವಾನಿರತರಾಗಿದ್ದಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.
ಅಭ್ಯರ್ಥಿ ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಪದವಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿತ್ತು. ಅರ್ಜಿಗೆ ಅವಕಾಶ ನೀಡಿದ್ದು, ಆಸಕ್ತರು, ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಕಟಿಸಲಾಗಿದೆ.