spot_img
spot_img

SUPPORT PRICE FOR TUR DAL : ತೊಗರಿಗೆ ರಾಜ್ಯ ಸರ್ಕಾರದಿಂದ ಕ್ವಿಂಟಾಲ್ಗೆ ಹೆಚ್ಚುವರಿ ₹450 ಬೆಂಬಲ ಬೆಲೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Vijaypur News News:

TUR DAL ಖರೀದಿಗೆ ರಾಜ್ಯ ಸರ್ಕಾರದಿಂದ 140 ಕೋಟಿ ರೂ. ಒದಗಿಸಲಾಗುವುದು. ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ಬೆಂಬಲ ಬೆಲೆ ನೀಡುವುದಾಗಿ ಸಚಿವ ಶಿವಾನಂದ ಪಾಟೀಲ ಘೋಷಣೆ ಮಾಡಿದ್ದಾರೆ. ”ಬೆಂಬಲ ಬೆಲೆಯಲ್ಲಿ TUR DAL ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದೆ. ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು” ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಿಸಿದರು.

”ಕೇಂದ್ರ ಸರ್ಕಾರದ ನಫೆಡ್‌ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, TUR DALಗಾರರು ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದರು.ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ”ಒಟ್ಟು ಪ್ರತಿ ಕ್ವಿಂಟಾಲ್‌ಗೆ 8 ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು” ಎಂದು ತಿಳಿಸಿದರು.

‘ಇದೇ ಮೊದಲ ಬಾರಿಗೆ 8,000 ರೂ. ಧಾರಣೆಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5,800 ರೂ. ಧಾರಣೆಯಲ್ಲಿ ಖರೀದಿ ಮಾಡಲಾಗುತ್ತಿತ್ತು. ಬೀದರ್‌ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರೆಗೆ TUR DAL ಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಾಲ್‌ಗೆ 450 ರೂ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ” ಎಂದು ಸಚಿವರು ವಿವರಿಸಿದರು.

Ban for corn in Andhra: ಈ ಬಾರಿ ಜೋಳ ಬೆಳೆಯುವ ಎಲ್ಲ ಜಿಲ್ಲೆಗಳಿಗೂ ಖರೀದಿ ಪ್ರಮಾಣವನ್ನು ಹಂಚಿಕೆ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.ಹೈಬ್ರಿಡ್‌ ಜೋಳಕ್ಕೆ 3,370 ರೂ. ಹಾಗೂ ಮಾಲದಂಡಿ ಜೋಳಕ್ಕೆ 3400 ರೂ. ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು ಐದು ಲಕ್ಷ ಕ್ವಿಂಟಾಲ್‌ ಖರೀದಿ ಮಾಡಲಾಗುವುದು. ಇದುವರೆಗೆ ಕೆಲವೇ ಕೆಲವು ಜಿಲ್ಲೆಗಳ ರೈತರು ಮಾತ್ರ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿದ್ದರು.

”ಆಂಧ್ರಪ್ರದೇಶದ ಹೈಬ್ರಿಡ್‌ ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂಧ್ರ ಪ್ರದೇಶದ ಜೋಳಕ್ಕೆ ಕಡಿವಾಣ ಹಾಕಲಾಗುವುದು” ಎಂದು ಹೇಳಿದರು.ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟದ ದೂರುಗಳು ಹೆಚ್ಚಾಗಿದ್ದು, ಅಂತಹವರಿಗೆ ಶಿಕ್ಷೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿರಿ : LAKSHMI HEBBALKAR : ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...

THE BEAST CAR : ಡೇಟೋನಾ 500 ಮೋಟಾರ್ ರೇಸ್ಗೆ ಜೀವಕಳೆ ತುಂಬಿದ ಟ್ರಂಪ್ ಕಾರ್

The Beast Car : ಅಮೆರಿಕದ ಅಧ್ಯಕ್ಷರ THE BEAST CAR​ ರೇಸ್​ವೊಂದರ ಲ್ಯಾಪ್​ನಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ಹುರಿದುಂಬಿಸಿತು. ಏರ್ ಫೋರ್ಸ್ ಒನ್ ವಿಮಾನ ರೇಸಿಂಗ್...