spot_img
spot_img

TEJASVI SURYA : ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ ಸಂಸದ ತೇಜಸ್ವಿ ಸೂರ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Prayagraj, Uttar Pradesh News:

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು ಮಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಿ, ಸಾಧು ಸಂತರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈಗ ಅರ್ಥ ಸಚಿವರ ಸರದಿ. ಕುಟುಂಬದ ಸದಸ್ಯರೊಂದಿಗೆ ಮಹಾಕುಂಭಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇದೊಂದು ಅದ್ಬುತ ಕ್ಷಣ ಎಂದು ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಸಂಸದ TEJASVI SURYA, ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಮತ್ತು ಶಿವಸೇನಾ ಸಂಸದ ಶ್ರೀಕಾಂತ್ ಶಿಂಧೆ ಸೇರಿದಂತೆ ಪ್ರಮುಖ ರಾಜಕೀಯ ಗಣ್ಯರು ಬುಧವಾರ ಪ್ರಯಾಗ್​ರಾಜ್​ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿ, ಸಾಧು – ಸಂತರ ಆಶೀರ್ವಾದ ಪಡೆದುಕೊಂಡರು.

A wonderful spiritual union:

ಶಿವಸೇನಾ ಸಂಸದ ಶ್ರೀಕಾಂತ್ ಶಿಂಧೆ ಮಾತನಾಡಿ, ಜೀವಮಾನದಲ್ಲಿ ಒಮ್ಮೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ತಮ್ಮ ಕೃತಜ್ಞತೆ ಸಲ್ಲಿಸಿದರು.

144 ವರ್ಷಗಳಿಗೆ ಒಮ್ಮೆ ಬರುವ ಮಹಾಕುಂಭದಲ್ಲಿ ಭಾಗಿಯಾಗಿದ್ದು ನನ್ನ ಅದೃಷ್ಟ. ಕೋಟ್ಯಂತರ ಜನರು ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿದ್ದು, ಇದು ನಿಜವಾದ ಅದ್ಬುತ ಅಧ್ಯಾತ್ಮಿಕ ಸಂಗಮವಾಗಿದೆ ಎಂದರು.

Nowhere in the world has such a great fair been held:

ಮತ್ತೊಂದು ಕಡೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ TEJASVI SURYA ಕೂಡ ನೂರಾರು ಕಾರ್ಯಕರ್ತರೊಂದಿಗೆ ಪ್ರಯಾಗ್​ರಾಜ್​ಗೆ ಆಗಮಿಸಿ, ಪುಣ್ಯ ಸ್ನಾನ ಮಾಡಿ ಪುನೀತರಾದರು .

ಇಷ್ಟು ದೊಡ್ಡ ಮಟ್ಟ ಧಾರ್ಮಿಕ ಕಾರ್ಯಕ್ರಮವನ್ನು ವಿಶ್ವದಲ್ಲಿ ಎಲ್ಲಿಯೂ ಆಯೋಜಿಸಿಲ್ಲ. ಮಹಾಕುಂಭ ದೇಶಾದ್ಯಂತ ಜನರನ್ನು ಒಟ್ಟಿಗೆ ಸೇರಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

I was lucky enough to be involved in Aquarius:

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮಾತನಾಡಿ, ತಲೆಮಾರುಗಳಿಂದಲೂ ಈ ಸಂಪ್ರದಾಯ ಮುಂದುವರೆದುಕೊಂಡು ಬಂದಿದೆ .

ಮಹಾಕುಂಭದಲ್ಲಿ ಭಾಗವಹಿಸಲು ನಾನು ಅದೃಷ್ಟ ಮಾಡಿದ್ದೇನೆ . ಇಲ್ಲಿನ ಶಕ್ತಿ ಮತ್ತು ಸಕಾರಾತ್ಮಕತೆ ನಂಬಲು ಅಸಾಧ್ಯ ಎಂದು ತಿಳಿಸಿದರು.

ಇದನ್ನು ಓದಿರಿ : Homegrown Festival 2025 Will Be An Adventurous Playground of Creativity And Culture

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...