spot_img
spot_img

ಸೈಬರ್​ ಕ್ರೈಂ ಅಪರಾಧಗಳಲ್ಲಿ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ಟಾಪ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದ ಮೊದಲ ಮೂರು ಟಾಪ್​ 3 ರಾಜ್ಯಗಳಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಗಮನಾರ್ಹವಾಗಿ ಸೈಬರ್ ಅಪರಾಧಿಗಳು ಕಂಡು ಬರುತ್ತಿವೆ. ಈ ಬಗ್ಗೆ ಸರ್ಕಾರಗಳು ಕಠಿಣ ಕಾನೂನು ಜಾರಿ ಮಾಡಿದರೂ ಶಿಕ್ಷೆಯ ಪ್ರಮಾಣವು ತುಂಬಾ ಕಡಿಮೆಯಾಗಿದೆ.

ಗುರುವಾರ ಸಂಸತ್ತಿನಲ್ಲಿ ಮಂಡಿಸಿದ ಸರ್ಕಾರಿ ಅಂಕಿ – ಅಂಶಗಳ ಪ್ರಕಾರ, 2020 ಮತ್ತು 22 ರ ನಡುವೆ ತೆಲಂಗಾಣದಲ್ಲಿ 30,596 ಪ್ರಕರಣಗಳು ದಾಖಲಾಗುವ ಮೂಲಕ ಗರಿಷ್ಠ ಸೈಬರ್ ಕ್ರೈಮ್ ಪ್ರಕರಣಗಳಿಗೆ ಸಾಕ್ಷಿಯಾದ ಮೊದಲ ರಾಜ್ಯವಾಗಿದೆ. ಈ ಅಪರಾಧದಲ್ಲಿ ಭಾಗಿಯಾಗಿರುವ ಜನರ ವಿರುದ್ಧ ಕಾನೂನು ಜಾರಿ ಸಂಸ್ಥೆಗಳು ಹಲವಾರು ಪ್ರಕರಣಗಳನ್ನು ದಾಖಲಿಸಿದ್ದರೂ, ಶಿಕ್ಷೆಯ ಪ್ರಮಾಣ ಮಾತ್ರ ಭಾರಿ ಸಂಖ್ಯೆಯಲ್ಲಿ ಕಡಿಮೆ ಎಂಬುದನ್ನು ಕೇಂದ್ರ ಸರ್ಕಾರದ ಅಂಕಿ- ಅಂಶಗಳು ತೋರಿಸುತ್ತಿವೆ.

ಮಹಾರಾಷ್ಟ್ರವು 2020 ಮತ್ತು 23ರ ನಡುವೆ 5,912 ಪ್ರಕರಣಗಳನ್ನು ದಾಖಲಿಸಿದೆ. ಆದರೆ ಕೇವಲ 45 ಜನರಿಗೆ ಶಿಕ್ಷೆ ವಿಧಿಸಲಾಗಿದೆ. ತೆಲಂಗಾಣದಲ್ಲಿ 19,900 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದರೆ, 253 ಮಂದಿಗೆ ಮಾತ್ರ ಶಿಕ್ಷೆಯಾಗಿದೆ. ಮತ್ತೊಂದೆಡೆ, ಕರ್ನಾಟಕದಲ್ಲಿ ಕೇವಲ ಆರು ಪ್ರಕರಣಗಳು ಮಾತ್ರವೇ ದಾಖಲಾಗಿವೆ.

ಆದರೆ ಯಾವುದೇ ಕೇಸ್​​ನಲ್ಲೂ ಶಿಕ್ಷೆ ಆಗಿಲ್ಲ. ಹಣಕಾಸಿನ ವಂಚನೆಗಳ ತಕ್ಷಣದ ವರದಿಗಾಗಿ ಮತ್ತು ವಂಚಕರು ಹಣವನ್ನು ಕಸಿದುಕೊಳ್ಳುವುದನ್ನು ನಿಲ್ಲಿಸಲು I4C ಅಡಿಯಲ್ಲಿ ‘ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್ ಮತ್ತು ಮ್ಯಾನೇಜ್‌ಮೆಂಟ್ ಸಿಸ್ಟಮ್’ ಅನ್ನು 2021 ರಲ್ಲಿ ಪ್ರಾರಂಭಿಸಲಾಗಿದೆ.

ಸಂಸತ್ತಿನಲ್ಲಿ ಪ್ರಸ್ತುತಪಡಿಸಿದ ಸರ್ಕಾರಿ ಅಂಕಿ- ಅಂಶಗಳ ಪ್ರಕಾರ, ಇಲ್ಲಿಯವರೆಗೆ 9.94 ಲಕ್ಷಕ್ಕೂ ಹೆಚ್ಚು ದೂರುಗಳಲ್ಲಿ 3,431 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ಕ್ರೈಮ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಉಪಕ್ರಮದ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ , ‘ಪೊಲೀಸ್’ ಮತ್ತು ‘ಸಾರ್ವಜನಿಕ ಸುವ್ಯವಸ್ಥೆ’ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುತ್ತಿದೆ. ಅಂದರೆ ಅದು ಸಂವಿಧಾನ ರಾಜ್ಯದ ವಿಷಯಗಳಾಗಿವೆ ಎಂದು ಹೇಳಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಕಾನೂನು ಜಾರಿ ಸಂಸ್ಥೆಗಳ ಮೂಲಕ ಸೈಬರ್ ಅಪರಾಧ ಸೇರಿದಂತೆ ಅಪರಾಧಗಳ ತಡೆಗಟ್ಟುವಿಕೆ, ಪತ್ತೆ, ತನಿಖೆ ಮತ್ತು ಕಾನೂನು ಕ್ರಮಕ್ಕೆ ಪ್ರಾಥಮಿಕವಾಗಿ ಜವಾಬ್ದಾರರಾಗಿರುತ್ತಾರೆ.

ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಉಪಕ್ರಮಗಳನ್ನು ತಮ್ಮ LEA ಗಳ ಸಾಮರ್ಥ್ಯ ವೃದ್ಧಿಗಾಗಿ ವಿವಿಧ ಯೋಜನೆಗಳ ಅಡಿ ಸಲಹೆಗಳು ಮತ್ತು ಹಣಕಾಸಿನ ನೆರವು ನೀಡುತ್ತದೆ ಎಂದು ಅವರು ವಿವರಿಸಿದರು.

ಹಾಗಾಗಿ ಶಿಕ್ಷೆಯ ಪ್ರಮಾಣ ಶೂನ್ಯವಾಗಿದೆ. ಮಹಾರಾಷ್ಟ್ರದಲ್ಲಿ 1,204 ಮಂದಿಯನ್ನು ಬಂಧಿಸಲಾಗಿದ್ದು, ತೆಲಂಗಾಣದಲ್ಲಿ 3,055 ಜನರನ್ನು ಅರೆಸ್ಟ್​ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಸೈಬರ್ ಅಪರಾಧದಲ್ಲಿ ಭಾಗಿಯಾಗಿರುವ ಮೂವರನ್ನು ಮಾತ್ರ ಬಂಧಿಸಲಾಗಿದೆ.

ಅದೇ ಅವಧಿಯಲ್ಲಿ ಕರ್ನಾಟಕದಲ್ಲೂ ಸುಮಾರು 31,433 ಪ್ರಕರಣಗಳು ದಾಖಲಾಗಿವೆ. ಇನ್ನು ಮಹಾರಾಷ್ಟ್ರದಲ್ಲಿ 19,307 ಸೈಬರ್ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಆನ್‌ಲೈನ್ ಸೈಬರ್ ದೂರುಗಳನ್ನು ಸಲ್ಲಿಸಲು ಸಹಾಯ ಮಾಡಲು ಟೋಲ್-ಫ್ರೀ ಸಹಾಯವಾಣಿ ಸಂಖ್ಯೆ ‘1930’ ಅನ್ನು ಕಾರ್ಯಗತಗೊಳಿಸಲಾಗಿದೆ ಎಂದು ಸಚಿವರು ಇದೇ ವೇಳೆ ಸದನಕ್ಕೆ ಮಾಹಿತಿ ನೀಡಿದರು.

ಸೈಬರ್ ಕ್ರೈಮ್ ತನಿಖೆ, ಫೋರೆನ್ಸಿಕ್ಸ್ ಮತ್ತು ಕಾನೂನು ಕ್ರಮದ ನಿರ್ಣಾಯಕ ಅಂಶಗಳ ಕುರಿತು ಆನ್‌ಲೈನ್ ಕೋರ್ಸ್‌ಗಳ ಮೂಲಕ ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಯಾಂಗ ಅಧಿಕಾರಿಗಳ ಸಾಮರ್ಥ್ಯವನ್ನು ಹೆಚ್ಚಿಸಲು I4C ಅಡಿ ಬೃಹತ್ ಮುಕ್ತ ಆನ್‌ಲೈನ್ ಕೋರ್ಸ್‌ಗಳ (MOOC) ಪ್ಲಾಟ್‌ಫಾರ್ಮ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.

ಭಾರತೀಯ ಸೈಬರ್‌ಸ್ಪೇಸ್ ಮೆಟಾಡೇಟಾವನ್ನು ಸ್ಕ್ಯಾನ್ ಮಾಡುವ ಮೂಲಕ ಸೈಬರ್ ಭದ್ರತಾ ಬೆದರಿಕೆಗಳ ಸಾಂದರ್ಭಿಕ ಅರಿವು ಮೂಡಿಸಲು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (ಸಿಇಆರ್‌ಟಿ-ಇನ್) ರಾಷ್ಟ್ರೀಯ ಸೈಬರ್ ಸಮನ್ವಯ ಕೇಂದ್ರವನ್ನು (ಎನ್‌ಸಿಸಿಸಿ) ಸ್ಥಾಪಿಸಿದೆ ಎಂದು ಸಚಿವರು ಸದನದಲ್ಲಿ ಮಾಹಿತಿ ಒದಗಿಸಿದರು. ಭಾರತೀಯ ಸೈಬರ್‌ಸ್ಪೇಸ್‌ನಾದ್ಯಂತ ಎಲ್ಲ ಸಂಬಂಧಿತ ಘಟಕಗಳಿಂದ ಪೂರ್ವಭಾವಿ, ತಡೆಗಟ್ಟುವ ಮತ್ತು ರಕ್ಷಣಾತ್ಮಕ ಕ್ರಮಗಳು.

ಪ್ರಮುಖ ಬ್ಯಾಂಕ್‌ಗಳು, ಹಣಕಾಸು ಮಧ್ಯವರ್ತಿಗಳು, ಪಾವತಿ ಸಂಗ್ರಾಹಕರು, ಟೆಲಿಕಾಂ ಸೇವಾ ಪೂರೈಕೆದಾರರು, ಐಟಿ ಮಧ್ಯವರ್ತಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಐ4ಸಿಯಲ್ಲಿ ಅತ್ಯಾಧುನಿಕ ಕೇಂದ್ರ, ಸೈಬರ್ ಫ್ರಾಡ್ ಮಿಟಿಗೇಷನ್ ಸೆಂಟರ್ (ಸಿಎಫ್‌ಎಂಸಿ) ಅನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಸೈಬರ್ ಅಪರಾಧವನ್ನು ನಿಭಾಯಿಸಲು ತಕ್ಷಣದ ಕ್ರಮ ಮತ್ತು ತಡೆರಹಿತ ಸಹಕಾರಕ್ಕಾಗಿ ಕಾನೂನು ಜಾರಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡುತ್ತಿವೆ.

ರಾಜ್ಯಗಳು ಮತ್ತು ಯುಟಿಗಳಿಂದ 98,698 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ನೋಂದಾಯಿಸಿಕೊಂಡಿದ್ದಾರೆ ಮತ್ತು 75,591 ಕ್ಕೂ ಹೆಚ್ಚು ಪ್ರಮಾಣಪತ್ರಗಳನ್ನು ಪೋರ್ಟಲ್ ಮೂಲಕ ನೀಡಲಾಗಿದೆ ಎಂದು ಸಚಿವರು ಇದೇ ವೇಳೆ ಮಾಹಿತಿ ಒದಗಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...