spot_img
spot_img

ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿದೆಯೇ ಎಂಬುದರ ತನಿಖೆಯನ್ನು ಮಾಡಲು ಆಯೋಗ ರಚನೆಯಾಗಿತ್ತು.! ಅರ್ಕಾವತಿ ಬಡಾವಣೆಯ ಯೋಜನೆ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಇದೀಗ Arkavathy denotification ಪ್ರಕರಣಕ್ಕೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋಟ್ ಪತ್ರ ಬರೆದಿದ್ದಾರೆ.

ಹೌದು.. ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್‌.ಎಸ್‌. ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಚಾಮುಂಡೇಶ್ವರಿ ಹೆಸರಲ್ಲಿ ಮೀನಾ ತೂಗುದೀಪ ದರ್ಶನ್​ಗೆ ಧೈರ್ಯ ಹೇಳಿದರು.!

ಮೂಲಗಳ ಪ್ರಕಾರ, 2013–18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ನಗರಾಭಿವೃದ್ಧಿ ಇಲಾಖೆ ಇದೇ 11ರಂದು ಸಲ್ಲಿಸಿದೆ.

ಅರ್ಕಾವತಿ ಬಡಾವಣೆಗಾಗಿ ಸ್ವಾಧೀನ ಮಾಡಿದ್ದ ಭೂಮಿಯಲ್ಲಿ ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ಸೂಚನೆಯಂತೆ 2014ರಲ್ಲಿ ಡಿನೋಟಿಫಿಕೇಷನ್‌ ಮಾಡಲಾಗಿತ್ತು. 472.25 ಎಕರೆ ಬದಲು ಹೆಚ್ಚುವರಿಯಾಗಿ 119 ಎಕರೆ ಸೇರಿಸಿ 541.25 ಎಕರೆ ಕೈ ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾ. ಎಚ್‌.ಎಸ್‌. ಕೆಂಪಣ್ಣ ಆಯೋಗವನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಮಾಡಿತ್ತು. ಇತ್ತೀಚೆಗೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅರ್ಕಾವತಿ ಬಡಾವಣೆಯ ಡಿನೋಚಿಫಿಕೇಷನ್‌ನಲ್ಲಿ 8 ಸಾವಿರ ಕೋಟಿ ರೂ.ಗಳಷ್ಟು ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದರು.

ಇದನ್ನೂ ಓದಿ : ಚಿಕ್ಕೋಡಿ ಉಪವಿಭಾಗಕ್ಕೆ ಒಬ್ಬರು ಜಿಲ್ಲಾಧಿಕಾರಿಯವರನ್ನು ನೇಮಿಸಬೇಕೆಂದು ಸರಕಾರಕ್ಕೆ ಮನವಿ.!

ರಾಜ್ಯಪಾಲರಿಗೆ ಆಗಸ್ಟ್‌ 24ರಂದು ಪತ್ರ ಬರೆದಿದ್ದ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ, ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು.

‘ಕೆಂಪಣ್ಣ ಆಯೋಗವು 2017ರ ಆಗಸ್ಟ್‌ನಲ್ಲಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಜಮೀನುಗಳ ಡಿನೋಟಿಫಿಕೇಷನ್‌ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಾಗ, ಸಿದ್ದರಾಮಯ್ಯ ಅವರೇ ಈ ಆಯೋಗವನ್ನು ರಚಿಸಿದ್ದರು’ ಎಂದೂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜಭವನದಿಂದ ಈ ಬಗ್ಗೆ ಮಾಹಿತಿ ಕೋರಲಾಗಿದೆ.

ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿವರವಾದ ವರದಿ ಸಿದ್ಧಪಡಿಸಿದ್ದು ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಕಚೇರಿಗೆ ತಲುಪಿಸಿದ್ದಾರೆ. ಶಿವಕುಮಾರ್‌ ವರದಿಯನ್ನು ಪರಿಶೀಲನೆ ಮಾಡಿದ ನಂತರ ರಾಜಭವನಕ್ಕೆ ರವಾನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್‌ ಗುಂಡೂರಾವ್‌, ಸಂತೋಷ್‌ ಲಾಡ್‌ ಅವರು ಗಂಗೇನಹಳ್ಳಿ ಡಿ ನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ ಬಳಿಕ ಈ ವಿದ್ಯಮಾನ ನಡೆದಿದೆ. ಆದರೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೆ.11 ರಂದೇ ಡಿ ಸಿಎಂ ಕಚೇರಿಗೆ ದಾಖಲೆ ಸಲ್ಲಿಸಿದ್ದಾರೆ ಎಂದು. ಹೇಳಲಾಗುತ್ತಿದೆ.

ಏನಿದು ಡಿನೋಟಿಫೈ ಪ್ರಕರಣ?

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 540 ಎಕರೆಯನ್ನು ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ‘ರೀಡೂ’ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ ಶೆಟ್ಟರ್ ಅವರು ವಿಧಾನಸಭೆ ಅಧಿವೇಶನದಲ್ಲಿಯೇ ಆರೋಪ ಮಾಡಿದ್ದರು.

ಇದನ್ನೂ ಓದಿ : ಬೆಳಗಾವಿ ವಿದ್ಯಾರ್ಥಿಗಳು ಹ್ಯಾಂಡ್ ಬಾಲ್ ದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣದ ವಿಚಾರಣೆಗೆ 2014ರ ಆಗಸ್ಟ್‌ನಲ್ಲಿ ನ್ಯಾ. ಕೆಂಪಣ್ಣ ನೇತೃತ್ವದಲ್ಲಿ ಆಯೋಗವನ್ನು ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೇಮಿಸಿತ್ತು. ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 2004ರಿಂದ 2014ರವರೆಗೆ 983 ಎಕರೆ ವಿಸ್ತೀರ್ಣವನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಟ್ಟಿರುವ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಸೂಚಿಸಿತ್ತು.

2017ರ ಆಗಸ್ಟ್‌ನಲ್ಲಿ ಆಯೋಗವು 1,861 ಪುಟಗಳ ವರದಿಯನ್ನು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಠಿಯಾ ಅವರಿಗೆ ಸಲ್ಲಿಸಿತ್ತು. ಈ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂದಿನ ಸರ್ಕಾರ ಮಂಡಿಸಿತ್ತು. ಅದನ್ನು ಒಪ್ಪಿದೆಯೋ ಅಥವಾ ತಿರಸ್ಕರಿಸಿದೆಯೋ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.

ನಿಯಮಾನುಸಾರ, ವಿಧಾನ ಮಂಡಲದ ಉಭಯ ಸದನಗಳಲ್ಲಿಯೂ ಮಂಡಿಸಿರಲಿಲ್ಲ. ಆ ಬಳಿಕ, ಅಧಿಕಾರಕ್ಕೆ ಬಂದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಗಳು ಇದರ ಬಗ್ಗೆ ಮೌನ ವಹಿಸಿದ್ದವು. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ, ಕಾಂಗ್ರೆಸ್ ಪಕ್ಷವು ಶೇ 40ರಷ್ಟು ಕಮಿಷನ್ ಆರೋಪ ಮಾಡಿತ್ತು. ಅದಕ್ಕೆ ತಿರುಗೇಟು ನೀಡಿದ್ದ ಬೊಮ್ಮಾಯಿ, ಅರ್ಕಾವತಿ ಹಗರಣವನ್ನು ಹೊರತಂದು ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದು ಎಚ್ಚರಿಸಿದ್ದರು. ಆದರೆ, ಯಾವುದೇ ಕ್ರಮವೂ ಆಗಿರಲಿಲ್ಲ.

ಏನೆಲ್ಲ ತನಿಖೆ ಆಗಿತ್ತು?

ಅರ್ಶಾವತಿ ಬಡಾವಣೆಯ ಅಂತಿಮ ಅಧಿಸೂಚನೆಯಿಂದ ಹೊರಗಿಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 2006, 2007, 2011 ಮತ್ತು 2013 ರಲ್ಲಿ ಅಂಗೀಕರಿಸಲಾದ ವಿವಿಧ ನಿರ್ಣಯಗಳು ಕಾನೂನುಬದ್ಧವಾಗಿವೆಯೇ? 2014ರ ಜೂನ್‌ 18ರಂದು ಗೆಜೆಟ್‌ ಹೊರಡಿಸಲಾದ ಅರ್ಕಾವತಿ ಬಡಾವಣೆಯ ಮರು-ಮಾರ್ಪಡಿಸಿದ ಯೋಜನೆಯು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿದೆಯೇ ಎಂಬುದರ ತನಿಖೆಯನ್ನು ಮಾಡಲು ಆಯೋಗ ರಚನೆಯಾಗಿತ್ತು.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...