spot_img
spot_img

ದರ್ಶನ್ಗೆ ಗುನ್ನ ಇಟ್ಟ ಹೈ ಕೋರ್ಟ್ ಡೆವಿಲ್ ಗೆ ಜೈಲ್ ಊಟವೇ ಗತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಮನೆಯ ಊಟದ ಸಲುವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್​ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್​ ಪಡೆದುಕೊಂಡಿದ್ದಾರೆ.

ಜೈಲಿನ ಊಟ ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಹಿನ್ನಲೆ ನಟ ದರ್ಶನ್​ ಮನೆ ಊಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಿನ್ನೆ (ಜು.29) ನಡೆಯಿತು.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್​ ಸೂಚನೆ ನೀಡಿತ್ತು. ಈಗಾಗಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಈ ಅರ್ಜಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಹೋಗುವಂತೆ ಹೈಕೋರ್ಟ್​ ಹೇಳಿದ್ದರಿಂದ ದರ್ಶನ್​ ಪರ ವಾದ ಮಂಡಿಸಿದ್ದ ವಕೀಲರು ಅರ್ಜಿ ವಾಪಾಸ್​ ಪಡೆದಿದ್ದಾರೆ.

ಇದರೊಂದಿಗೆ ನ್ಯಾಯಲಯದಲ್ಲಿ ಮನೆ ಊಟದ ಅರ್ಜಿಗೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ ನಟ ದರ್ಶನ್​ಗೆ ಮತ್ತೆ ನಿರಾಸೆಯಾಗಿದೆ.ಇನ್ನು ಮುಂದೆ ಡೆವಿಲ್ ದಾಸನಿಗೆ ಜೈಲೂಟವೇ ಗತಿ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...