ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟದ ಸಲುವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ.
ಜೈಲಿನ ಊಟ ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಹಿನ್ನಲೆ ನಟ ದರ್ಶನ್ ಮನೆ ಊಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಿನ್ನೆ (ಜು.29) ನಡೆಯಿತು.
ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಈಗಾಗಲೇ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಈ ಅರ್ಜಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹೋಗುವಂತೆ ಹೈಕೋರ್ಟ್ ಹೇಳಿದ್ದರಿಂದ ದರ್ಶನ್ ಪರ ವಾದ ಮಂಡಿಸಿದ್ದ ವಕೀಲರು ಅರ್ಜಿ ವಾಪಾಸ್ ಪಡೆದಿದ್ದಾರೆ.
ಇದರೊಂದಿಗೆ ನ್ಯಾಯಲಯದಲ್ಲಿ ಮನೆ ಊಟದ ಅರ್ಜಿಗೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ ನಟ ದರ್ಶನ್ಗೆ ಮತ್ತೆ ನಿರಾಸೆಯಾಗಿದೆ.ಇನ್ನು ಮುಂದೆ ಡೆವಿಲ್ ದಾಸನಿಗೆ ಜೈಲೂಟವೇ ಗತಿ.