spot_img
spot_img

ನಿರಾಶ್ರಿತರ ಸಂಖ್ಯೆ ನಿರಂತರ ಹೆಚ್ಚಳ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಸುಡಾನ್ : “ಪ್ರಾಂತ್ಯದಲ್ಲಿ ಅತ್ಯಧಿಕ ಸಂಖ್ಯೆಯ ಸ್ಥಳಾಂತರಗೊಂಡ ಜನರಿದ್ದು, ಇವರ ಸಂಖ್ಯೆ ಇನ್ನೂ ಹೆಚ್ಚುತ್ತಿದೆ” ಎಂದು ರೆಡ್ ಸೀ ಪ್ರಾಂತ್ಯದ ಸಮಾಜ ಕಲ್ಯಾಣ ಸಚಿವ ಇಲ್ಹಾಮ್ ಇಡ್ರಿಸ್ ಗಸ್ಮಾಲ್ಲಾ ಹೇಳಿದರು.
“ಟೆಂಟ್​ಗಳ ಕೊರತೆ ತೀವ್ರವಾಗಿದೆ ಮತ್ತು ರೆಡ್ ಸೀ ಪ್ರಾಂತ್ಯದಲ್ಲಿ ಇಷ್ಟರಲ್ಲೇ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ, ನೈರ್ಮಲ್ಯ ಮತ್ತು ರೋಗ ನಿಯಂತ್ರಣಕ್ಕೆ ಅಗತ್ಯ ವಸ್ತುಗಳ ಪೂರೈಕೆಗಳ ಜೊತೆಗೆ ಜ್ವರದಂಥ ಸೀಸನಲ್ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ನಮಗೆ ತುರ್ತಾಗಿ ಔಷಧಗಳ ಅಗತ್ಯವಿದೆ” ಎಂದು ಅವರು ಹೇಳಿದರು.
ಳಾಂತರಗೊಂಡವರ ಮೂಲಭೂತ ಅಗತ್ಯಗಳನ್ನು ಪೂರೈಸಲು ಫೆಡರಲ್ ಸರ್ಕಾರದ ಮಾನವೀಯ ನೆರವು ಆಯೋಗ ಮತ್ತು ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಗಸ್ಮಾಲ್ಲಾ ಶ್ಲಾಘಿಸಿದರು. ಸುಮಾರು 21,000 ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾವಕಾಶ ಕಲ್ಪಿಸಲು ಸ್ಥಳೀಯ ಸರ್ಕಾರವು ರಾಜ್ಯದ ರಾಜಧಾನಿ ಪೋರ್ಟ್ ಸುಡಾನ್ ನಲ್ಲಿ 80 ಕೇಂದ್ರಗಳನ್ನು ನಿಗದಿಪಡಿಸಿದ್ದು, ಇವುಗಳಲ್ಲಿ ಒಟ್ಟು ಸುಮಾರು 1,05,000 ಜನ ಆಶ್ರಯ ಪಡೆದಿದ್ದಾರೆ.
ಪೋರ್ಟ್ ಸುಡಾನ್​ನಲ್ಲಿ ಸುಮಾರು 44,448 ಸ್ಥಳಾಂತರಗೊಂಡ ಕುಟುಂಬಗಳ ಸುಮಾರು 2,22,240 ಜನ ಕೂಡ ಆಶ್ರಯ ಪಡೆದಿದ್ದಾರೆ. ಸುಡಾನ್​ನಲ್ಲಿ 2023 ರ ಏಪ್ರಿಲ್ ಮಧ್ಯದಿಂದ ಸುಡಾನ್ ಸಶಸ್ತ್ರ ಪಡೆಗಳು ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವೆ ಸಂಘರ್ಷ ನಡೆಯುತ್ತಿದೆ.
ಸಂಘರ್ಷದಿಂದಾಗಿ ಅಕ್ಟೋಬರ್ 14 ರ ಹೊತ್ತಿಗೆ, 24,850 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಕ್ಟೋಬರ್ 29 ರ ವೇಳೆಗೆ ಸುಡಾನ್ ಒಳಗೆ ಅಥವಾ ಹೊರಗೆ 14 ದಶಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ ಅಂದಾಜಿಸಿದೆ.
ಸ್ಥಳಾಂತರಗೊಂಡಿರುವ ಸಾವಿರಾರು ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ನೆರವು ನೀಡಬೇಕೆಂದು ಸುಡಾನ್​ನ ರೆಡ್ ಸೀ ಪ್ರಾಂತ್ಯದ ಸರ್ಕಾರವು ಅಂತಾರಾಷ್ಟ್ರೀಯ ಸಮುದಾಯ ಮತ್ತು ಮಾನವೀಯ ಸಂಸ್ಥೆಗಳಿಗೆ ಮನವಿ ಮಾಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...