spot_img
spot_img

ತಪ್ಪೇ ಮಾಡದ ದೇವರವನ್ನು ವಶಕ್ಕೆ ಪಡೆದ ಪೋಲಿಸರು : ಫೋಟೋ ವೈರಲ್‌,!

spot_img
spot_img

Share post:

ಮಂಡ್ಯ ಗಲಭೆ ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರ ನಗರ ಟೌನ್ ಹಾಲ್ ಬಳಿ ಗಣೇಶ ಮೂರ್ತಿ ಸಹಿತಿ ಪ್ರತಿಭಟನೆ ನಡೆಸುತ್ತಿದ್ದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಹಾಗೂ ಗಲಭೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಜೊತೆಗೆ ಗಣೇಶ ಮೂರ್ತಿಯನ್ನು ಕೊಂಡೊಯ್ದ ಪೊಲೀಸರ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಇದನ್ನೂ ಓದಿ : ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಮಂಡ್ಯ ಗಲಭೆ ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರ ನಗರ ಟೌನ್ ಹಾಲ್ ಬಳಿ ಗಣೇಶ ಮೂರ್ತಿ ಸಹಿತಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಗೆ ತಡೆಯೊಡ್ಡಿದ ಪೊಲೀಸರು ಪ್ರತಿಭಟನಾಕಾರರು ಹಾಗೂ ಗಣೇಶ ಮೂರ್ತಿಯನ್ನೂ ವಶಕ್ಕೆ ಪಡೆದರು. ಬಳಿಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿದರು.

 

ಪೊಲೀಸ್ ವಾಹನದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸರು ಕೊಂಡೊಯ್ಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಫೋಟೋ ವೈರಲ್ ಆಗಿದೆ.

ಕಾಂಗ್ರೆಸ್‌ನ ಹಿಂದೂ ಭಾವನೆಗಳ ಸಂಪೂರ್ಣ ತಿರಸ್ಕಾರ ಭಯಾನಕ ಎನಿಸುತ್ತಿದೆ. ಕರ್ನಾಟಕದಲ್ಲಿ ಪೊಲೀಸ್ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕೊಂಡೊಯ್ಯುತ್ತಿರುವ ಚಿತ್ರವು ಕಾಂಗ್ರೆಸ್ ನಾಯಕರ ಅಗೌರವ ಮತ್ತು ದ್ವೇಷವನ್ನು ತೋರಿಸುತ್ತಿದೆ. ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದಲ್ಲಿ ಕುಳಿತಿರುವ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈ ರೀತಿಯ ಅಗೌರವ ತೋರುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅವರು ಹಿಂದೂ ನಂಬಿಕೆಯನ್ನು ಅವಮಾನಿಸುತ್ತಿದ್ದು, ನಮ್ಮ ದೇವರಿಗೆ ಅಗೌರವಗೊಳಿಸುತ್ತಿದ್ದಾರೆಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

ಕೋಟ್ಯಂತರ ಭಾರತೀಯರ ಹೆಮ್ಮೆ ಮತ್ತು ಭಕ್ತಿಯನ್ನು ಗಣಪತಿಯು ಸಾಕಾರಗೊಳಿಸಿದ್ದಾನೆ. ಈ ಅವಮಾನ ಪ್ರತಿಯೊಬ್ಬ ಹಿಂದೂವಿನ ಮೇಲಿನ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿ ಮೂರ್ತಿಯ ಪಾವಿತ್ರ್ಯತೆ ಕಾಪಾಡಬಹುದಿತ್ತು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.

ಗಣೇಶನ ಮೂರ್ತಿಯನ್ನೂ ವಶಕ್ಕೆ ಪಡೆದು, ಪ್ರತಿಭಟನಾಕಾರರೊಂದಿಗೆ ಪೊಲೀಸ್ ವಾಹನದಲ್ಲಿ ಕೊಂಡೊಯ್ಯಲಾಗಿದೆ. ಈ ಘಟನೆಯು ಹಿಂದೂ ಸಮಾಜದ ಬಗ್ಗೆ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಪ್ರತಿಬಿಂಬಿಸುತ್ತದೆ. ಸರ್ಕಾರ ಕೂಡಲೇ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...