spot_img
spot_img

ಭತ್ತದ ಕೊಯ್ಲು ರೈತರ ಗೋಳು ಬೆಲೆ ಏರಿಕೆ

spot_img
spot_img

Share post:

ಬೆಳಗಾವಿ: ಜಿಲ್ಲೆಯಲ್ಲಿ ಭತ್ತದ ಕೊಯ್ಲು ಮತ್ತು ರಾಶಿ ಜೋರಾಗಿದೆ. ಆದರೆ, ಕಷ್ಟಪಟ್ಟು ಬೆಳೆದ ಭತ್ತಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸರ್ಕಾರ ಖರೀದಿ ಕೇಂದ್ರಗಳನ್ನೂ ಆರಂಭಿಸದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಕುಂದಾನಗರಿಯಲ್ಲಿ ಭತ್ತದ ಕೊಯ್ಲು, ರಾಶಿ ಬಿರುಸಿನಿಂದ ನಡೆಯುತ್ತಿದೆ. ಆದರೆ ಭತ್ತಕ್ಕೆ ಉತ್ತಮ ಬೆಲೆ ಇಲ್ಲದೇ ಇರುವುದು ರೈತರನ್ನು ಕಂಗೆಡಿಸಿದೆ.
ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕಿನಲ್ಲಿ ಭತ್ತ ಬೆಳೆಯಲಾಗುತ್ತದೆ. ಒಟ್ಟು 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಭತ್ತದ ಕಟಾವು ಕಳೆದ ಒಂದು ವಾರದಿಂದ ನಡೆಯುತ್ತಿದೆ. ಇಲ್ಲಿ ಕಣ್ಣು ಹಾಯಿಸಿದಲ್ಲೆಲ್ಲೆಡೆ ರೈತರು ಭತ್ತದ ಕೊಯ್ಲು ಮತ್ತು ರಾಶಿ ಮಾಡುವಲ್ಲಿ ನಿರತರಾಗಿರುವುದು ಕಂಡುಬರುತ್ತದೆ.
ಮಾರುಕಟ್ಟೆಯಲ್ಲಿ 1 ಕ್ವಿಂಟಾಲ್ ಭತ್ತ 2,150-2,200 ರೂಪಾಯಿಗೆ ಮಾರಾಟವಾಗುತ್ತಿದೆ. ಇದು ರೈತರಿಗೆ ಸಮಾಧಾನ ತಂದಿಲ್ಲ. ಯಾಕೆಂದರೆ, 1 ಎಕರೆಯಲ್ಲಿ ಭತ್ತ ಬೆಳೆಯಲು ಬೀಜ, ಗೊಬ್ಬರ, ನಾಟಿ-ಕಟಾವು ಮಾಡುವುದೆಲ್ಲವೂ ಸೇರಿ ಸರಾಸರಿ 54 ಸಾವಿರ ರೂ. ಖರ್ಚು ಆಗುತ್ತದೆ. ಆದರೆ, ಈಗಿನ ದರ ನೋಡಿದರೆ ಹಾಕಿದ ಖರ್ಚು ಕೂಡಾ ಬರುವುದಿಲ್ಲ ಎನ್ನುವುದು ರೈತರ ಅಳಲು.
ಜಿಲ್ಲೆಯಲ್ಲಿ ಇಂದ್ರಾಯಿಣಿ, ಬಾಸುಮತಿ, ಶುಭಾಂಗಿ, ಚಿಟಕಾ ಸೇರಿ ಮತ್ತಿತರ ತಳಿಯ ಭತ್ತವನ್ನು ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಇಲ್ಲಿನ ಭತ್ತ ರಾಜ್ಯ, ಹೊರ ರಾಜ್ಯಗಳಿಗೂ ರಫ್ತಾಗುತ್ತದೆ. ಮುಂದೆ ಅದೇ ಹೆಚ್ಚಿನ ಬೆಲೆಯಲ್ಲಿ ಮಾರಾಟವಾಗಿ, ವ್ಯಾಪಾರಿಗಳಿಗೆ ಅಧಿಕ ಲಾಭವಾಗುತ್ತದೆ. ಆದರೆ, ಕಷ್ಟ ಪಟ್ಟು ಬೆಳೆಯುವ ರೈತರಿಗೆ ಮಾತ್ರ ಅದರ ಲಾಭ ಸಿಗದಿರುವುದು ವಿಪರ್ಯಾಸ.
10 ಗುಂಟೆ ಹೊಲದಲ್ಲಿ ಭತ್ತ ಬೆಳೆದಿದ್ದೇನೆ. 13,500 ರೂ. ಖರ್ಚಾಗಿದೆ. ಅಂದಾಜು‌ 6 ಕ್ವಿಂಟಾಲ್ ಇಳುವರಿ ಬರಬಹುದು. ಇನ್ನು ಒಂದು ಎಕರೆಗೆ ಲೆಕ್ಕ ಹಾಕಿದರೆ 54 ಸಾವಿರ ರೂ. ಖರ್ಚಾಗುತ್ತದೆ. ಭತ್ತ ಮಾರಿ ಕೈಗೆ 50 ಸಾವಿರ ರೂ. ಬರಬಹುದು. ಇದರಿಂದ 4 ಸಾವಿರ ರೂ. ನಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣ ಖರೀದಿ ಕೇಂದ್ರ ತೆರೆಯಬೇಕು. 1 ಕ್ವಿಂಟಾಲ್​ಗೆ 3 ಸಾವಿರ ರೂ. ದರ ಘೋಷಿಸಿದರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಡಬಹುದು ಎಂದು ರೈತ ಹೇಳಿದರು.
4 ಎಕರೆಯಲ್ಲಿ ಭತ್ತ ಬೆಳೆದಿದ್ದು, ಈಗ ಬೆಳೆ ಕಟಾವಿಗೆ ಬಂದು ನಿಂತಿದೆ. ಆದರೆ, ಆಳುಗಳು ಸಿಗುತ್ತಿಲ್ಲ. ನರೇಗಾ ಕೆಲಸಕ್ಕೆ ಎಲ್ಲರೂ ಹೋಗುತ್ತಿರುವುದು ಚಿಂತೆಗೀಡು ಮಾಡಿದೆ.‌ ಹಾಕಿದ ಖರ್ಚು ಕೂಡ ಕೈಗೆ ಬರುವುದು ಅನುಮಾನವಾಗಿದೆ. ಹಾಗಾಗಿ, ಸರ್ಕಾರ 3 ಸಾವಿರ ರೂ. ದರ ನಿಗದಿಪಡಿಸಿದರೆ ನಾವು ಬದುಕುತ್ತೇವೆ. ಇಲ್ಲದಿದ್ದರೆ ವಿಷ ಕುಡಿದು ಸಾಯುವ ಪರಿಸ್ಥಿತಿ ನಮಗೆ ಬರುತ್ತದೆ. ಕೃಷಿ ನಂಬಿ ಏನೂ ದೊಡ್ಡ ಕೆಲಸಕ್ಕೆ ಕೈ ಹಾಕಲು ಆಗುತ್ತಿಲ್ಲ” ಎಂದು ಜಾಫರವಾಡಿ ರೈತ ಕಲ್ಲಪ್ಪ ಕಾಗಣಿಕರ್ ನೋವು ತೋಡಿಕೊಂಡರು.
1 ಎಕರೆಯಲ್ಲಿ ಭತ್ತ ಬೆಳೆದಿದ್ದೇವೆ. ಈಗಿನ ದರ ನೋಡಿದರೆ ನಾವು ಹಾಕಿದ ಖರ್ಚು ವಾಪಸ್ ಸಿಗುವ ಭರವಸೆ ಇಲ್ಲ. ಸರ್ಕಾರ ದಯವಿಟ್ಟು ಭತ್ತದ ಬೆಳೆಗಾರರ ಸಮಸ್ಯೆ ಆಲಿಸಿ 3 ಸಾವಿರ ರೂ. ಬೆಲೆ ಘೋಷಣೆ ಮಾಡಿದರೆ ತುಂಬಾ ಅನುಕೂಲ ಆಗುತ್ತದೆ.
ಬೆಳಗಾವಿ ಮತ್ತು ಖಾನಾಪುರದಲ್ಲಿ ಭತ್ತದ ಖರೀದಿ ಕೇಂದ್ರ ತೆರೆಯಲಾಗಿದೆ. 1 ಕ್ವಿಂಟಾಲ್ ಗೆ 2300-2310 ರೂ. ದರ ನಿಗದಿಪಡಿಸಲಾಗಿದೆ. ಆದರೆ, ಪ್ರತಿಯೊಬ್ಬ ರೈತರಿಂದ ಎಷ್ಟು ಎಕರೆಯಲ್ಲಿ ಬೆಳೆದ ಎಷ್ಟು ಕ್ವಿಂಟಾಲ್ ಭತ್ತ ಖರೀದಿಸಬೇಕು ಎಂಬುದನ್ನು ಸರ್ಕಾರ ನಿರ್ಧರಿಸಬೇಕಿದೆ. ರೈತರು ಇನ್ನೂ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿಲ್ಲ. ಕೇಂದ್ರಕ್ಕೆ ಬಂದು ಮಾಹಿತಿ ಪಡೆದುಕೊಂಡು ಹೋಗುತ್ತಿದ್ದಾರೆ” ಎಂದು ಬೆಳಗಾವಿ ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕರು ಎಂ.ಡಿ.ಚಬನೂರ ಹೇಳಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...