spot_img
spot_img

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್​​ ನ್ಯಾಷನಲ್​​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಮೊದಲ ಟೆಸ್ಟ್​​​ ಪಂದ್ಯದಲ್ಲಿ ಟೀಮ್​​​ ಇಂಡಿಯಾ ಬರೋಬ್ಬರಿ 280 ರನ್​ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಇದನ್ನೂ ಓದಿ : ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ಟೀಮ್​ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್​ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯ ಸೆಪ್ಟೆಂಬರ್ 27ನೇ ತಾರೀಕಿನಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಹೇಗಾದ್ರೂ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಪ್ಲಾನ್​ ಮಾಡಿಕೊಂಡಿದೆ. ಅದರಲ್ಲೂ ಟೀಮ್​ ಇಂಡಿಯಾ 2ನೇ ಪಂದ್ಯ ಕೂಡ ಗೆದ್ದು ಸರಣಿ ಕ್ಲೀನ್​ ಸ್ವೀಪ್​​ ಮಾಡುವ ನಿರೀಕ್ಷೆಯಲ್ಲಿದೆ. ಅಷ್ಟೇ ಅಲ್ಲ ಈ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ದಾಖಲೆಯ ಪುಟಕ್ಕೆ ಎಂಟ್ರಿ ನೀಡಲು ಕನಸು ಕಾಣುತ್ತಿದೆ. ಹಾಗಿದ್ದರೆ, ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ತಂಡದ ಪ್ಲಾನ್​ ಏನು?

2ನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡದ ಮಾಸ್ಟರ್​ ಪ್ಲಾನ್​ ಹೇಗಿದೆ? ಅನ್ನೋ ಚರ್ಚೆ ಶುರುವಾಗಿದೆ. ಕಪ್ಪು ಮಣ್ಣಿನ ಪಿಚ್ ಆಗಿರೋ ಕಾರಣ ಸ್ಪಿನ್ ಬೌಲರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಮೊದಲ ಟೆಸ್ಟ್‌ನಲ್ಲಿ ಮೋಡಿ ಮಾಡಿದ್ದ ಜಸ್ಪ್ರಿತ್‌ ಬುಮ್ರಾಗೆ 2ನೇ ಟೆಸ್ಟ್‌ನಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಇವರ ಬದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್‌ ತಂಡದ ಬೌಲಿಂಗ್ ಮಾಡಬಹುದು.

ಇದನ್ನೂ ಓದಿ : ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ಅಕ್ಷರ್, ಕುಲ್ದೀಪ್​​ ಮಧ್ಯೆ ಪೈಪೋಟಿ

ಸ್ಪಿನ್​​​ ಸ್ನೇಹಿ ಪಿಚ್​ ಆದ ಕಾರಣ ಭಾರತ ಮೂವರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಬಹುದು. ಅನುಭವಿ ಅಶ್ವಿನ್‌, ಜಡೇಜಾ ಜೊತೆಗೆ ಇನ್ನೊಬ್ಬ ಸ್ಪಿನ್ ಬೌಲರ್‌ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕುಲ್ದೀಪ್​​ ತಯಾರಿ ನಡೆಸಿದ್ರೆ, ಅಕ್ಷರ್‌ ಪಟೇಲ್‌ ಕೂಡ ತಂಡದಲ್ಲಿ ಸ್ಥಾನ ಪಡೆಯೋ ಕನಸಲ್ಲಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...