Mumbai, Maharashtra News:
ರಕ್ಷಣೆಯಲ್ಲಿ ದೇಶ ಜಾಗತಿಕ ನಾಯಕನಾಗುವ ನಿಟ್ಟಿನಲ್ಲಿನ ನಮ್ಮ ಪ್ರಯತ್ನಕ್ಕೆ THREE FRONTLINE NAVAL COMBATANTS ಸೇರ್ಪಡೆ ಬಲ ತುಂಬಲಿದೆ ಎಂದು ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಈ ಮೂರೂ ಯುದ್ಧ ನೌಕೆಗಳು, ರಕ್ಷಣಾ ಕ್ಷೇತ್ರದಲ್ಲಿ ದೇಶ ಜಾಗತಿಕ ನಾಯಕ ಆಗುವ ನಿಟ್ಟಿನಲ್ಲಿನ ನಮ್ಮ ಪ್ರಯತ್ನಕ್ಕೆ ಬಲ ತುಂಬಲಿದೆ.
ಸ್ವಾವಲಂಬಿ ರಕ್ಷಣಾ ವಲಯವನ್ನು ನಿರ್ಮಿಸಲು ಭಾರತದ ಬದ್ಧತೆಯನ್ನು ಇದು ಒತ್ತಿ ಹೇಳುತ್ತದೆ ಎಂದು ಪ್ರಧಾನಿಗಳು ಬಣ್ಣಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಕೂಡ ಹಾಜರಿದ್ದರು.
ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈನ ನೌಕನೆಲೆಯಲ್ಲಿ ಐಎನ್ಎಸ್ ಸೂರತ್, ಐಎನ್ಎಸ್ ನೀಲ್ಗಿರಿ ಮತ್ತು ಐಎನ್ಎಸ್ ವಾಘ್ಶೀರ್ ಎಂಬ ಮೂರು ಯುದ್ಧ ನೌಕೆಗಳನ್ನು ದೇಶಕ್ಕೆ ಸಮರ್ಪಣೆ ಮಾಡಿದರು.ಈ ಯುದ್ದ ನೌಕೆಗಳನ್ನು ಆತ್ಮನಿರ್ಭರ್ ಭಾರತದ ಗೌರವಾರ್ಥವಾಗಿ ಮಜಾಗನ್ ಡಾಕ್ಶಿಪ್ ಸಂಸ್ಥೆಯ ನೇತೃತ್ವದಲ್ಲಿ ನಿರ್ಮಿಸಲಾಗಿದೆ. ಐಎನ್ಎಸ್ ಸೂರತ್ ಪಿ15ಬಿ ಮಾರ್ಗಸೂಚಿತ ಕ್ಷಿಪಣಿ ವಿಧ್ವಂಸಕ ವ್ಯವಸ್ಥೆ ನಾಲ್ಕನೇ ಮತ್ತು ಅಂತಿಮ ನೌಕೆಯಾಗಿದೆ.
ಇದನ್ನು ಶೇ 75ರಷ್ಟು ದೇಶಿಯವಾಗಿ ನಿರ್ಮಾಣ ಮಾಡಲಾಗಿದ್ದು, ಇದು ಅತ್ಯಾಧುನಿಕ ಶಸ್ತ್ರಾಸ್ತ್ರ- ಸೆನ್ಸರ್ ಪ್ಯಾಕೇಜ್ ಹಾಗೂ ಸುಧಾರಿತ ನೆಟ್ವರ್ಕ್ ಕೇಂದ್ರಿತ ಸಾಮರ್ಥ್ಯವನ್ನು ಹೊಂದಿದೆ ಎಂದು ರಕ್ಷಣಾ ಪಡೆ ಹೇಳಿದೆ. ರಕ್ಷಣಾ ಉತ್ಪಾದನೆ ಮತ್ತು ಸಾಗರ ಭದ್ರತೆಯಲ್ಲಿ ಜಾಗತಿಕ ನಾಯಕನಾಗಬೇಕು ಎಂಬ ಭಾರತದ ದೂರದೃಷ್ಟಿಗೆ ಈ ಮೂರು ಪ್ರಮುಖ ಯುದ್ಧ ನೌಕೆಗಳು ಪ್ರಮುಖ ಮುನ್ನೆಡಯಾಗಿದೆ ಎಂದು ಸರ್ಕಾರದ ಪ್ರಕಣೆಯಲ್ಲಿ ತಿಳಿಸಿದೆ.
INS Nilgiri
ಪಿ17ಎ ಸ್ಟೆಲ್ತ್ ಫ್ರಿಗೇಟ್ ಪ್ರಾಜೆಕ್ಟ್ನ ಮೊದಲ ಶಿಪ್ ಆಗಿದ್ದು, ಇದನ್ನು ಭಾರತೀಯ ನೌಕ ವಾರ್ಶಿಪ್ ಡಿಸೈನ್ ಬ್ಯುರೋ ವಿನ್ಯಾಸ ಮಾಡಿದೆ. ಇದು ಸಾಗರ ಮೇಲ್ವಿಚಾರಣೆಗಾಗಿಯೇ ಅಭಿವೃದ್ಧಿ ಮಾಡಲಾಗಿದ್ದು, ದೇಶೀಯ ಫ್ರಿಗೇಟ್ನ ಮುಂದಿನ ಪೀಳಿಗೆಯನ್ನು ಪ್ರತಿಬಿಂಬಿಸುತ್ತದೆ. ಇದು ಎಂಟು ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಒಳಗೊಂಡಂತೆ ಸುಧಾರಿತ ಶಸ್ತ್ರಾಸ್ತ್ರಗಳನ್ನು ಒಳಗೊಂಡಿದೆ.
8 ಸೆಪ್ಟೆಂಬರ್ 2019 ರಂದು ಪ್ರಾರಂಭಿಸಲಾಯಿತು. ಈ ನೌಕೆ ಸುಮಾರು 6,670 ಟನ್ ತೂಕ ಹೊಂದಿದ್ದು, 149 ಮೀಟರ್ ಉದ್ದ ಹೊಂದಿದೆ.
INS Waghshir:
ಇದು ಪಿ75 ಸ್ಕೋರ್ಪೆನೆ ಯೋಜನೆಯ ಆರು ಮತ್ತು ಅಂತಿಮ ಹಂತದ ಜಲಾಂತರ್ಗಾಮಿ ಆಗಿದೆ. ಇದನ್ನು ಫ್ರಾನ್ಸ್‌ನ ನೇವಲ್ ಗ್ರೂಪ್‌ನ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಈ ಜಲಾಂತರ್ಗಾಮಿ ಭಾರತೀಯ ನೌಕಾಪಡೆಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ. ಈ ನೌಕೆ 67 ಮೀಟರ್ ಉದ್ದ ಮತ್ತು 1,550 ಟನ್ ಬಾರ ಹೊಂದಿದೆ (ಐಎಎನ್ಎಸ್)
ಇದನ್ನು ಓದಿರಿ : ARMS EXPORTING COUNTRIES : ಜಾಗತಿಕ ಟಾಪ್ 25 ಶಸ್ತ್ರಾಸ್ತ್ರ ರಫ್ತು ರಾಷ್ಟ್ರಗಳ